ದೇಶದಾದ್ಯಂತ ಎಸ್‌ಐಆರ್ ಪ್ರಕ್ರಿಯೆಯನ್ನು ತಕ್ಷಣ ಸ್ಥಗಿತಕ್ಕೆ ಆಗ್ರಹ…
ಶಿವಮೊಗ್ಗ: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್.ಐ.ಆರ್.) ಪ್ರಕ್ರಿಯೆಯನ್ನು ದೇಶಾದ್ಯಂತ ತಕ್ಷಣವೇ ಸ್ಥಗಿತಗೊಳಿಸ ಬೇಕು ಎಂದು ನಾಗರೀಕ ಹಕ್ಕುಗಳ ರಕ್ಷಣಾ ಸಂಘಟನೆ ರಾಜ್ಯ ಕಾರ್ಯಕಾರಿ ಸದಸ್ಯ ಹಾಗೂ ಹೈಕೋರ್ಟ್ ವಕೀಲ ಬಿ.ಟಿ. ವೆಂಕಟೇಶ್ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯನ್ನು ಮಾಡುತ್ತಿದೆ. ಈ ಪ್ರಕ್ರಿಯೆಯಲ್ಲಿಯೇ ಪಾರದರ್ಶಕದ ಕೊರತೆಯಿದೆ. ಅಸ್ಪಷ್ಟತೆ ಇದೆ. ಅತ್ಯಲ್ಪ ಸಮಯಾವಕಾಶವಿದೆ. ಅಲ್ಲದೆ ಮತದಾನ ಮಾಡಲು ಹುಟ್ಟಿದ ದಿನಾಂಕದ ಪ್ರಮಾಣಪತ್ರವನ್ನು ನೀಡಬೇಕು ಎನ್ನುವುದು ಎಷ್ಟರ ಮಟ್ಟಿಗೆ ಸರಿ. ಅಲೆಮಾರಿಗಳು, ಓದೇ ಗೊತ್ತಿಲ್ಲದವರು, ಬಡವರು, ಹುಟ್ಟಿದ ದಿನಾಂಕ ಗೊತ್ತಿಲ್ಲದವರು ಏನುಮಾಡಬೇಕು. ಅವರು ಎಲ್ಲಿಂದ ಜನನ ಪ್ರಮಾಣಪತ್ರ ತರಬೇಕು, ೮೦-೯೦ ವರ್ಷ ಆದ ಹಿರಿಯರಿಗೆ ಎಲ್ಲಿ ಗೊತ್ತಿರುತ್ತದೆ. ಅಲ್ಲದೆ ಭಾರತ ಸರ್ಕಾರವೇ ನೀಡಿದ ಆಧಾರ್ ಕಾರ್ಡ್ ಇಲ್ಲವೇ ಆಧಾರ್ ಕಾರ್ಡನ್ನು ಏಕೆ ಗುರುತಿನ ಚೀಟಿ ಎಂದು ಕರೆಯಬಾರದು. ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಮತ್ತು ಮತದಾನ ಮಾಡಲು ಸರ್ಕಾರವೇ ನೀಡಿದ ಪಡಿತರ ಕಾರ್ಡ್ ಮತ್ತು ಈಗಾಗಲೇ ಚುನಾವಣಾ ಆಯೋಗ ನೀಡಿದ ಗುರುತಿನ ಚೀಟಿ ಸಾಕಲ್ಲವೇ? ಹೀಗಿದ್ದು ಹುಟ್ಟಿದ ದಿನಾಂಕದ ಪ್ರಮಾಣಪತ್ರ ಏಕೆ ? ಎಂದು ಪ್ರಶ್ನೆ ಮಾಡಿದರು.
ಈ ಪ್ರಕ್ರಿಯೆಯು ಬಡವರು, ಗ್ರಾಮೀಣ ಮಹಿಳೆಯರು, ವಯೋವೃದ್ಧರು, ಆದಿವಾಸಿಗಳು, ದಲಿತರು ಹಾಗೂ ಅಲ್ಪಸಂಖ್ಯಾತರ ಮೇಲೆ ಗಂಭೀರ ಪರಿಣಾಮಗಳು ಬೀಳುತ್ತವೆ. ಇದು ಸಂವಿಧಾನದ ೧೪, ೧೫, ೨೧ನೇ ವಿಧಿಗಳಿಗೆ ವಿರುದ್ಧ ವಾಗಿದೆ. ಲಕ್ಷಾಂತರ ನಾಗರೀಕರನ್ನು ಅನಾಗರೀಕ ಎಂಬ ಗುರಿಯಿಂದ ಹೊರಗಿಟ್ಟು ಅವರ ಮೂಲಭೂತ ಹಕ್ಕುಗಳನ್ನು ಕಸಿದುಕೊಳ್ಳುವ ಸಾಧ್ಯತೆ ಇದೆ. ಆದ್ದರಿಂದ ಸಾರ್ವಜನಿಕ ಸಮಾಲೋಚನೆ ಮತ್ತು ನಾಗರೀಕ ಸ್ನೇಹಿ ಚೌಕಟ್ಟು ರೂಪಿಸುವವರಿಗೆ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಬೇಕು ಎಂದರು.
ಎಪಿಸಿಆರ್‌ನ ರಾಜ್ಯ ಸಮಿತಿ ಉಪಾಧ್ಯಕ್ಷ ಅಖೀಲ ವಿದ್ಯಾಸಂದ್ರ ಮಾತನಾಡಿ, ನಮ್ಮ ಸಂಘಟನೆಯು ಮಾನವ ಹಕ್ಕುಗಳ ರಕ್ಷಣೆಗಾಗಿ ಹೋರಾಡುತ್ತಾ ಬಂದಿದೆ. ಮಹಿಳೆಯರ ಮೇಲೆ, ಅಲ್ಪಸಂಖ್ಯಾತರ ಮೇಲೆ, ದಲಿತರ ಮೇಲೆ ನಡೆಯುವ ಶೋಷಣೆ, ದೌರ್ಜನ್ಯ ಹಾಗೂ ಮಾನವ ಹಕ್ಕುಗಳ ಉಲ್ಲಂಘನೆಯ ವಿರುದ್ಧ ೨೫ ವರ್ಷಗಳಿಂದ ಅಸೋಷಿ ಯೇಷನ್ ಫಾರ್ ಪ್ರೊಟೆಕ್ಷನ್ ಆಫ್ ಸಿವಿಲ್ ರೈಟ್ಸ್ ಹೆಸರಿನಲ್ಲಿ ಈ ಸಂಸ್ಥೆ ಜನ್ಮತಾಳಿ, ೧೮ ರಾಜ್ಯಗಳಲ್ಲಿ ಕೆಲಸ ಮಾಡುತ್ತಿದೆ. ಇದೀಗ ಶಿವಮೊಗ್ಗ ಜಿ ಘಟಕ ಅಸ್ಥಿತ್ವಕ್ಕೆ ಬಂದಿದೆ. ಶಿವಮೊಗ್ಗದಲ್ಲಿಯೂ ಕೂಡ ಮಾನವ ಹಕ್ಕುಗಳ ರಕ್ಷಣೆಯ ಬಗ್ಗೆ ನಮ್ಮ ಸಂಘಟನೆ ನಿರಂತರವಾಗಿ ಹೋರಾಡುತ್ತಾ ಬರುತ್ತದೆ ಎಂದರು.
ಜಿ ಸಮಿತಿ ಅಧ್ಯಕ್ಷೆ ಸರೋಜ ಪಿ. ಚಂಗೊಳ್ಳಿ ಮಾತನಾಡಿ, ಇದು ರಾಷ್ಟ್ರಮಟ್ಟದ ಸಂಘಟನೆ. ಈಗ ಕಳೆದ ಕೆಲವು ತಿಂಗಳಿನಿಂದ ಶಿವಮೊಗ್ಗ ಜಿಯಲ್ಲಿ ಅಸ್ಥಿತ್ವಕ್ಕೆ ಬಂದಿದೆ. ಈಗಾಗಲೇ ಪದಾಧಿಕಾರಿ ಗಳ ನೇಮಕ ಕೂಡ ಆಗಿದೆ. ಈ ವರ್ಷ ಸುಮಾರು ೫೦ ಕಾರ್ಯಕ್ರಮಗಳನ್ನು ಆಯೋಜನೆ ಮಾಡುವ ಗುರಿ ಹೊಂದಲಾಗಿದೆ. ಈಗಾಗಲೇ ೧೫ ಕಾರ್ಯಕ್ರಮ ಗಳನ್ನು ನಾವು ಪೂರೈಸಿzವೆ. ಶಾಲಾ-ಕಾಲೇಜುಗಳಲ್ಲಿ ಕಾನೂನುಗಳ ಅರಿವು ಉಚಿತ ಕಾನೂನು ಸಹಾಯ, ಕೈದಿಗಳ ಬಿಡುಗಡೆಗಾಗಿ ಹೋರಾಟ, ಗಾಂಜ ವಿರುದ್ಧ ಹೋರಾಟ, ಪೋಕ್ಸೋ ಕಾಯ್ದೆಯ ಬಗ್ಗೆ ಅರಿವು ಮೂಡಿಸುವುದು, ಮಲ್ಯಗಳ ಮನವರಿಕೆ ಮಾಡುವುದು ಸೇರಿದಂತೆ ಹಲವು ಕಾರ್ಯಕ್ರಮ ಗಳನ್ನು ಮುಂದಿನ ದಿನಗಳಲ್ಲಿ ರೂಪಿಸಲಾಗುವುದು ಎಂದರು.
ಎಪಿಸಿಆರ್‌ನ ಜಿ ಘಟಕದ ಗೌರವ ಅಧ್ಯಕ್ಷರಾಗಿ ಆರ್.ಟಿ. ನಟರಾಜ್, ಜಿಧ್ಯಕ್ಷರಾಗಿ ಸರೋಜ ಪಿ. ಚಂಗೊಳ್ಳಿ, ಉಪಾಧ್ಯಕ್ಷರುಗಳಾಗಿ ಹಾಲೇಶಪ್ಪ, ರಾಜಮ್ಮ, ಸೈಯದ್ ಲಿಯಾಖತ್, ಅಬ್ದುಲ್ ವಾಹಬ್, ಮಹಮ್ಮದ್ ಅಯೂಬ್, ಜಿ ಪ್ರಧಾನ ಕಾರ್ಯದರ್ಶಿಯಾಗಿ ಮಹಮ್ಮದ್ ರಫೀ, ಜಂಟಿ ಕಾರ್ಯದರ್ಶಿಗಳಾಗಿ ರಮ್ಯ, ದೇವೇಂದ್ರಪ್ಪ, ಹಬೀಬು, ಖಜಂಚಿಯಾಗಿ ಸುಕನ್ಯಾ, ಸಂಘಟನಾ ಕಾರ್ಯ ದರ್ಶಿಯಾಗಿ ಚನ್ನವೀರಪ್ಪ ಗಾಮನಗಟ್ಟಿ ನೇಮಕಗೊಂಡಿzರೆ.
ಪತ್ರಿಕಾಗೋಷ್ಠಿಯಲ್ಲಿ ಎಪಿಸಿಆರ್‌ನ ರಾಜ್ಯ ಕಾರ್ಯಕಾರಿ ಸದಸ್ಯ ಮುಹಮ್ಮದ್ ಕುಂಹಿ, ಕಛೇರಿ ಕಾರ್ಯದರ್ಶಿ ನೌಫುಲ್ ಮಾರ್ಜೂಕಿ ಇದ್ದರು.
