ಕ್ರೈಂಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ರಾಜ್ಯದಲ್ಲಿ ಹದಗೆಟ್ಟ ಕಾನೂನು ಸುವ್ಯವಸ್ಥೆ: ಆರಗ ಆರೋಪ

Share Below Link

ಶಿವಮೊಗ್ಗ: ಕಾಂಗ್ರೆಸ್ ಸರ್ಕಾರದ ಅಲ್ಪಸಂಖ್ಯಾತರ ತುಷ್ಠಿಕರಣ ನೀತಿ ಯಿಂದಾಗಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು ಕ್ರೈಮ್‌ರೇಟ್ ಹೆಚ್ಚಾಗಿದೆ. ಜನರ ಪ್ರಾಣಕ್ಕೆ ಬೆಲೆ ಇಲ್ಲದಂತಾಗಿದೆ ಎಂದು ಮಾಜಿ ಗೃಹಸಚಿವ ಹಾಗೂ ತೀರ್ಥಹಳ್ಳಿ ಕ್ಷೇತ್ರದ ಬಿಜೆಪಿ ಶಾಸಕ ಆರಗ ಜನೇಂದ್ರ ಗಂಭೀರ ಆರೋಪ ಮಾಡಿದ್ದಾರೆ.


ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಪರಾಧಿಗಳಿಗೆ ಪೊಲೀಸರ ಭಯ ಇಲ್ಲವಾಗಿದೆ. ಈ ಸರ್ಕಾರ ಪೊಲೀಸ್ ವ್ಯವಸ್ಥೆಯನ್ನು ರಾಜಕಾರಣಕ್ಕೆ ಬಳಸಿಕೊಂಡು ಪೊಲೀಸರ ಆತ್ಮಸ್ಥೈರ್ಯ ಕುಗ್ಗಿಸಿದೆ ಎಂದು ಟೀಕಿಸಿದರು.
ನಿನ್ನೆ ಚನ್ನಗಿರಿಯಲ್ಲಿ ನಡೆದ ಪ್ರಕರಣವೊಂದರಲ್ಲಿ ಲಾಕಪ್ ಡೆತ್ ಎಂದು ಆರೋಪಿಸಿ ಕೆಲವೇ ನಿಮಿಷಗಳಲ್ಲಿ ಸಾವಿರಾರು ಜನ ಠಾಣೆಗೆ ಮುತ್ತಿಗೆ ಹಾಕಿ ಪೊಲೀಸ್ ವಾಹನ ಗಳನ್ನು ಧ್ವಂಸಗೊಳಿಸಿ, ಪೊಲೀಸರ ಮೇಲೆ ಹಲ್ಲೆ ನಡೆಸಿದ್ದಾರೆ. ಇದು ನಾಚಿಕೆಗೇಡಿನ ಸಂಗತಿ ಎಂದರು.
ಹಿಂದೆ ಕೆಜಿ ಹಳ್ಳಿ, ಡಿಜೆ ಹಳ್ಳಿ ಮತ್ತು ಹುಬ್ಬಳ್ಳಿ ಗಲಭೆ ಸಂದರ್ಭದಲ್ಲಿ ಅದನ್ನು ಮಾಡಿದವರ ಪರ ಕಾಂಗ್ರೆಸ್ ಸರ್ಕಾರ ಮೃದು ಧೋರಣೆ ತಾಳಿದ್ದಲ್ಲದೇ ಅವರು ಅಮಾಯಕರು ಎಂದು ಅವರ ಮೇಲಿನ ಕೇಸನ್ನು ವಿತ್ ಡ್ರಾ ಮಾಡಲು ಪತ್ರ ನೀಡಿತು. ಇದರಿಂದ ಯಾವ ಸಂದೇಶ ಹೋಗಿದೆ ಎಂದು ಈಗ ಗೊತ್ತಾಗುತ್ತಿದೆ. ಅಪರಾಧಿಗಳ ಬಗ್ಗೆ ಕಠಿಣ ಕ್ರಮ ಕೈಗೊಳ್ಳ ದಿದ್ದರೆ, ಅಶಾಂತಿಗೆ ಕಾರಣವಾಗುತ್ತದೆ ಎಂದ ಅವರು, ವಿಧಾನಸೌಧದ ಒಳಗೆಯೇ ಪಾಕಿಸ್ತಾನ ಜಿಂದಾಬಾದ್ ಎಂದರೆ ಈ ಸರ್ಕಾರ ಅದನ್ನು ನಿರಾಕರಿಸುತ್ತದೆ. ಎಫ್‌ಎಸ್‌ಎಲ್ ವರದಿ ಬಂದ ಬಳಿಕ ಒಪ್ಪಿಕೊಳ್ಳುತ್ತದೆ. ಮೊನ್ನೆ ಕೊಪ್ಪದಲ್ಲಿ ಕೂಡ ಪಾಕಿಸ್ತಾನ ಜಿಂದಾಬಾದ್ ಎಂದು ಹೇಳಿದ ವಿಡಿಯೋ ವೈರಲ್ ಆಗಿದೆ. ಆದರೂ ಈ ಸರ್ಕಾರ ಏನೂ ಕ್ರಮ ಕೈಗೊಂಡಿಲ್ಲ ಎಂದು ದೂರಿದರು.
ಹುಬ್ಬಳ್ಳಿಯ ನೇಹಾ ಹಿರೇಮಠ, ಅಂಜಲಿ ಅಂಬಿಗೇರ ಪ್ರಕರಣ ನಡೆದಾಗಲೂ ಗೃಹ ಸಚಿವರು ಅದು ಪ್ರೇಮ ಪ್ರಕರಣ ಎಂದು ಬೇಜವಾಬ್ದಾರಿಯ ಹೇಳಿಕೆ ನೀಡುತ್ತಾರೆ. ಯಾದಗಿರಿಯಲ್ಲಿ ರೊಟ್ಟಿ ಕೇಳಲು ಹೋದ ದಲಿತನ ಕೊಲೆಯಾಗುತ್ತದೆ. ಈ ಸರ್ಕಾರ ಬಂದ ಮೇಲೆ ಅಪರಾಧ ಪ್ರಕರಣಗಳು ಬಹಳಷ್ಟು ಜಸ್ತಿಯಾ ಗಿದ್ದು, ಒಂದು ವರ್ಷದಲ್ಲಿ ೧,೮೭,೭೪೨ ವಿವಿಧ ಘೋರ ಅಪರಾಧ ಪ್ರಕರಣ ಜರುಗಿವೆ. ಮಾದಕ ವಸ್ತು ಸಾಗಾಟ, ಮಾರಾಟ, ರೇವ್ ಪಾರ್ಟಿಗಳು ಎಗ್ಗಿಲ್ಲದೇ ನಡೆಯುತ್ತಿವೆ. ಈ ಸರ್ಕಾರ ಬದುಕಿದೆಯಾ ಎಂಬ ಸಂಶಯ ಕಾಡುತ್ತಿದೆ ಎಂದರು.
ಆಂಧ್ರದಿಂದ ಇಲ್ಲಿಗೆ ಬಂದು ರೇವ್ ಪಾರ್ಟಿ ನಡೆಸುತ್ತಾರೆ. ವಿವಿಧ ಮಾದಕ ವಸ್ತುಗಳನ್ನು ಬಹಿರಂಗವಾಗಿ ಸೇವನೆ ಮಾಡುತ್ತಾರೆ. ಸ್ಥಳೀಯರು ಒತ್ತಡ ಹೇರಿದ ಮೇಲೆ ಬೇರೆ ಪೊಲೀಸರು ಬಂದು ಕೇಸ್ ದಾಖಲಿಸುತ್ತಾರೆ. ತುಷ್ಠೀಕರಣದ ರಾಜಕಾರಣದಿಂದ ಕರ್ನಾಟಕ ಅಶಾಂತಿಯ ತೋಟ ವಾಗಿದೆ. ಎಲ್ಲಾ ಶಕ್ತಿಗಳು ತಲೆ ಎತ್ತುತ್ತಿವೆ. ದೇಶದ್ರೋಹಿಗಳು ಇದು ನಮ್ಮ ಸರ್ಕಾರ ಎಂದು ಹೆಮ್ಮೆಯಿಂದ ಹೇಳುತ್ತಾರೆ. ನಕಲಿ ಚಟುವಟಿಕೆಗಳು ಗರಿಗೆದರಿವೆ. ಕ್ರೈಂ ಗೂ ಕಾಂಗ್ರೆಸ್‌ಗೂ ಬಾಂಧವ್ಯವಿದೆ ಎಂದು ದೂರಿದರು.
ಗೃಹ ಸಚಿವರು ಸರ್ಕಾರದ ಬಗ್ಗೆ ಟೀಕೆ ಮಾಡಿದರೆ ಟೀಕೆ ಮಾಡಬೇಡಿ. ಬೆಂಗಳೂರು ಬ್ರ್ಯಾಂಡ್‌ಗೆ ಹೊಡೆತ ಬೀಳುತ್ತದೆ. ಬಂಡವಾಳಶಾಹಿಗಳು ಬರುವುದಿಲ್ಲ ಎನ್ನುತ್ತಾರೆ. ಇವರ ದುರಾಡಳಿತದಿಂದ ರಾಜ್ಯಕ್ಕೆ ಮತ್ತು ಬೆಂಗಳೂರಿಗೆ ಕೆಟ್ಟ ಹೆಸರು ಬಂದಿದೆ. ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಪೊಲೀಸರ ಮಾನಸಿಕತೆ ಬದಲಾಗಿದ್ದು, ಬಿಜೆಪಿ ಕಾರ್ಯಕರ್ತರ ಮೇಲೆ ವಿನಾಕಾರಣ ರೌಡಿಶೀಟ್ ಓಪನ್ ಮಾಡಿ ವಿವಿಧ ಸೆಕ್ಷನ್‌ಗಳನ್ನು ಹಾಕಿ ಜೈಲಿಗಟ್ಟುವ ಕಾರ್ಯ ನಡೆಯುತ್ತಿದೆ ಎಂದು ಆರೋಪಿಸಿದರು.
ಗೋಹತ್ಯೆ ನಿಷೇಧ ಮಸೂದೆ ಜರಿಯಲ್ಲಿದ್ದರೂ ಸಾಕ್ಷಿ ಸಮೇತ ಅದನ್ನು ಹಿಡಿದುಕೊಟ್ಟರೆ ಆರೋಪಿಗಳನ್ನು ಹಿಡಿದವರ ಮೇಲೆಯೇ ೩೦೭ ಕೇಸ್ ಹಾಕುತ್ತಿದ್ದಾರೆ. ರಾಜಕೀಯ ಸೇಡಿನ ಮನೋಭಾವದಿಂದ ಸರ್ಕಾರ ವರ್ತಿಸುತ್ತಿದೆ. ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಸಂಪೂರ್ಣ ಕುಸಿದಿದ್ದು ಶಾಂತಿಯುತ ಬದುಕಿಗೆ ತೊಂದರೆಯಾಗಿದೆ ಎಂದರು.
ಪ್ರಮುಖರಾದ ಎಸ್. ದತ್ತಾತ್ರಿ, ರತ್ನಾಕರ್ ಶೆಣೈ, ಕೆ.ವಿ. ಅಣ್ಣಪ್ಪ, ಭವಾನಿರಾವ್ ಮೋರೆ ಇದ್ದರು.

This image has an empty alt attribute; its file name is Arya-coll.gif