ಕೃಷಿ ಉದ್ದಿಮೆಯಾಗಿ ಪರಿವರ್ತನೆಗೊಂಡು ರೈತರು ಬಲವರ್ಧನೆಗೊಳ್ಳಬೇಕು…
ಶಿವಮೊಗ್ಗ : ಕಡಿಮೆ ವೆಚ್ಚದಲ್ಲಿ ಉತ್ತಮ ಇಳುವರಿ ಮತ್ತು ಆದಾಯ ನೀಡುವ ಬೆಳೆಗಳನ್ನು ನೀಡುವ ಉzಶದಿಂದ ಇಂತಹ ಕೃಷಿ ಮೇಳಗಳನ್ನು ಆಯೋಜಿಸ ಲಾಗಿದ್ದು, ಇದನ್ನು ಬಳಸಿಕೊಂಡು ರೈತರು ಉದ್ಯಮಿಗಳಾಗಿ ಬಲವರ್ಧನೆಗೊಳ್ಳಬೇಕೆಂದು ಕೃಷಿ ಸಚಿವರು ಹಾಗೂ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿeನಗಳ ವಿಶ್ವವಿದ್ಯಾಲಯದ ಸಹ ಕುಲಾಧಿಪತಿ ಎನ್. ಚೆಲುವ ರಾಯಸ್ವಾಮಿ ಕರೆ ನೀಡಿದರು.
ಸಹಕಾರ ಕೃಷಿಯಿಂದ ಸುಸ್ಥಿರ ಕೃಷಿ ಶೀರ್ಷಿಕೆ ಅಡಿಯಲ್ಲಿ ಇಂದಿ ನಿಂದ ನ.೯ರವರೆಗೆ ಕೃಷಿ ಮಹಾ ವಿದ್ಯಾಲಯ ನವುಲೆ ಆವರಣದಲ್ಲಿ ಏರ್ಪಡಿಸಲಾಗಿರುವ ಕೃಷಿ- ತೋಟಗಾರಿಕೆ ಮೇಳ-೨೦೨೫ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಅತ್ಯುತ್ತಮ ಕೃಷಿ ಮೇಳ ಮತ್ತು ಪ್ರದರ್ಶವನ್ನು ಏರ್ಪಡಿಸಲಾಗಿದ್ದು, ಭತ್ತದ ಮತ್ತು ಇತರೆ ಉತ್ತಮ ತಳಿಗಳನ್ನು ಬಿಡುಗಡೆಗೊಳಿಸಲಾ ಗಿದೆ. ರೈತರಿಗೆ ವಿಶ್ವವಿದ್ಯಾಲಯ ನೀಡಾಬೇಕಾಗಿರುವುದು ಇದನ್ನೇ ಎಂದ ಅವರು, ಕೃಷಿಯನ್ನು ಉದ್ದಿಮೆಯಾಗಿ ಪರಿವರ್ತಿಸಿ ರೈತರಿಗೆ ಉತ್ತಮ ಆದಾಯ ನೀಡಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹಲವು ಸೌಲಭ್ಯಗಳು, ಕಾರ್ಯಕ್ರಮಗಳನ್ನು ನೀಡುತ್ತಿವೆ. ಕೆಪೆಕ್ ಸಂಸ್ಥೆಯು ರಾಜ್ಯದಲ್ಲಿ ೫ ಸಾವಿರ ಘಟಕಗಳಿಗೆ ಸಬ್ಸಿಡಿ ನೀಡಿದೆ ಎಂದ ಅವರು ರೈತರಿಗೆ ಎಂಒ ೪ ತಳಿಯನ್ನು ನೀಡಲು ಕೃಷಿ ಇಲಾಖೆ ಮತ್ತು ವಿಶ್ವವಿದ್ಯಾಲಯಗಳು ಬದ್ದವಾಗಿದೆ ಎಂದರು.

ರೋಗ ನಿರೋಧಕ ಶಕ್ತಿ ಹೆಚ್ಚಿಸುವ, ಕಡಿಮೆ ಖರ್ಚು ಮಾಡಿ ಹೆಚ್ಚು ಇಳುವರಿ ನೀಡುವ ಬೆಳೆಗಳನ್ನು ನೀಡುವ ತಳಿಗಳನ್ನು ನೀಡಲು ವಿಶ್ವವಿದ್ಯಾಲಯಗಳು ಶ್ರಮಿಸುತ್ತಿವೆ. ಲ್ಯಾಬ್ ಟು ಲ್ಯಾಂಡ್ ಎಂಬುದು ಸರ್ಕಾರದ ಪರಿಕಲ್ಪನೆಯಾಗಿದ್ದು ವಿeನಿಗಳು ಮತ್ತು ರೈತರು ಸಂಪರ್ಕದಲ್ಲಿರಬೇಕು ಎಂದರು.
ಮಲೆನಾಡಿನಲ್ಲಿ ಅಡಿಕೆ ಬೆಳೆ ಹೆಚ್ಚಾಗಿದೆ. ೨೦ ರಿಂದ ೨೭ ಲಕ್ಷ ಹೆ. ಬೆಳೆ ಹೆಚ್ಚಾಗಿದೆ. ಕೃಷಿಗೆ ಹೆಚ್ಚಿನ ಆದ್ಯತೆ ನೀಡಲು ಮೂಡಿಗೆರೆ, ದಾವಣಗೆರೆ, ಬೆಳಗಾವಿ, ಬೆಂಗಳೂರು ಮತ್ತು ಮಂಡ್ಯದಲ್ಲಿ ಕೃಷಿ ಕಾಲೇಜುಗಳನ್ನು ಪ್ರಾರಂಭಿಸ ಲಾಗಿದೆ ಎಂದರು.
ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಶಾಸಕಿ ಶ್ರೀಮತಿ ಶಾರದಾ ಪೂರ್ಯನಾಯ್ಕ ಅಧ್ಯಕ್ಷತೆ ವಹಿಸಿದ್ದರು.
ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿeನಗಳ ವಿಶ್ವವಿದ್ಯಾಲಯದ ಕುಲಪತಿಗಳಾದ ಡಾ.ಆರ್.ಸಿ. ಜಗದೀಶ್ ಪ್ರಾಸ್ತಾವಿಕವಾಗಿ ಮಾತನಾಡಿದರು.
ಉತ್ತಮ ರೈತ ಮತ್ತು ರೈತ ಮಹಿಳೆ ಪ್ರಶಸ್ತಿಯನ್ನು ವಿತರಣೆ ಮಾಡಿ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ವಿಧಾನ ಪರಿಷಥ್ ಸದಸ್ಯ ಮಂಜುನಾಥ ಭಂಡಾರಿ, ರಾಜ್ಯ ಜವಳಿ ಮೂಲ ಸೌಲಭ್ಯ ಅಭಿವೃದ್ದಿ ನಿಗಮದ ಅಧ್ಯಕ್ಷ ಚೇತನ್, ಕಾಡಾ ಅಧ್ಯಕ್ಷ ಡಾ.ಅಂಶುಮಂತ್, ಕೃಷಿಕ ಸಮಾಜದ ರಾಜಧ್ಯಕ್ಷ ಎಸ್.ಆರ್ ಮಜುನಾಥ ಗೌಡ, ಡಾ. ಹನುಮಂತಪ್ಪ, ಆಡಳಿತ ಮಂಡಳಿ ಸದಸ್ಯರಾದ ಬಿ.ಕೆ ಕುಮಾರಸ್ವಾಮಿ, ಜೆ ಜೆ ಕಾವೇರಪ್ಪ, ದೇವಿಕುಮಾರ್, ರಾಮಕೃಷ್ಣ ಆಶ್ರಮದ ವಿನಯಾನಂದ ಸರಸ್ವತಿ ಸ್ವಾಮೀಜಿ ಉಪಸ್ಥಿತರಿದ್ದರು.

