ಆರೋಗ್ಯಉದ್ಯೋಗಜಿಲ್ಲಾ ಸುದ್ದಿತಾಜಾ ಸುದ್ದಿದೇಶಶಿಕ್ಷಣ

ಫೆ.೨೪: ಗ್ಯಾರಂಟಿ ಯೋಜನೆ ಫಲಾನುಭವಿಗಳ ಬೃಹತ್ ಸಮಾವೇಶ …

Share Below Link

ಶಿವಮೆಗ್ಗ : ಫೆ.೨೪ರಂದು ನಗರದ ಫ್ರೀಡಂ ಪಾರ್ಕ್‌ನಲ್ಲಿ ಸರ್ಕಾರದ ಮಹತ್ವಾಕಾಂಕ್ಷಿ ೫ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಬೃಹತ್ ಸಮಾವೇಶವನ್ನು ಆಯೋಜಿಸಲು ಉದ್ದೇಶಿಸಲಾಗಿದೆ ಎಂದು ಜಿಧಿಕಾರಿ ಗುರುದತ್ತ ಹೆಗಡೆ ತಿಳಿಸಿದರು.
ಡಿಸಿ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಿದ್ದ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಬೃಹತ್ ಸಮಾವೇಶದ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಈ ಕಾರ್ಯಕ್ರಮಕ್ಕೆ ಜಿಯ ಎ ತಾಲೂಕುಗಳ ಅನ್ನಭಾಗ್ಯ, ಗೃಹಲಕ್ಷ್ಮೀ, ಗೃಹಜ್ಯೋತಿ, ಯುವನಿಧಿ ಮತ್ತು ಶಕ್ತಿ ಯೋಜನೆಗಳ ೨೫೦೦೦ಕ್ಕೂ ಹೆಚ್ಚಿನ ಫಲಾನುಭವಿಗಳು ಸೇರುವ ನಿರೀಕ್ಷೆ ಇದೆ ಎಂದವರು ನುಡಿದರು.


ಕಾರ್ಯಕ್ರಮಕ್ಕೆ ಆಗಮಿಸುವ ಫಲಾನುಭವಿಗಳಿಗೆ ಯಾವುದೇ ಅಡಚಣೆ ಉಂಟಾಗದಂತೆ ಮಧ್ಯಾಹ್ನದ ಊಟ, ಕುಡಿಯುವ ನೀರು ಹಾಗೂ ಶೌಚಾಲಯ ವ್ಯವಸ್ಥೆ ಕಲ್ಪಿಸಲು ಕ್ರಮ ಕೈಗೊಳ್ಳಲಾಗು ವುದು. ಈ ಕಾರ್ಯಕ್ರಮದಲ್ಲಿ ಯಾವುದೇ ನ್ಯೂನತೆಗಳುಂಟಾಗ ದಂತೆ ವಿಶೇಷ ಗಮನಹರಿಸಲು ವಿವಿಧ ಇಲಾಖೆಗಳ ಜಿ ಮಟ್ಟದ ಹಿರಿಯ ಅಧಿಕಾರಿಗಳನ್ನು ಉಸ್ತುವಾರಿಗಾಗಿ ನಿಯೋಜಿಸ ಲಾಗುವುದು. ಅಲ್ಲದೇ ಜಿಯ ಎ ತಾಲೂಕುಗಳ ಗ್ರಾಪಂಗಳಿಂದ ಜನರನ್ನು ಕರೆತರಲು ಹಾಗೂ ಅವರ ಸ್ಥಳಕ್ಕೆ ಬಿಟ್ಟು ಬರಲು ಅನುಕೂಲ ವಾಗುವಂತೆ ಸಾರಿಗೆ ವ್ಯವಸ್ಥೆ ಕಲ್ಪಿಸಲು ಉದ್ದೇಶಿಸಿದೆ ಎಂದರು.
ಇದೇ ಕಾರ್ಯಕ್ರಮದಲ್ಲಿ ಗ್ಯಾರಂಟಿ ಯೋಜನೆಗಳ ಸೌಲಭ್ಯ ಗಳಿಂದ ವಂಚಿತರಾಗಿರುವವ ಅನುಕೂಲಕ್ಕಾಗಿ ಸ್ಥಳದಲ್ಲಿಯೇ ಹೆಸರನ್ನು ನೋಂದಾಯಿಸಿಕೊಂಡು ಸೌಲಭ್ಯ ಪಡೆದುಕೊಳ್ಳಲು ಅನುಕೂಲವಾಗುವಂತೆ ಸಾಮಾನ್ಯ ಸೇವಾ ಕೇಂದ್ರಗಳು ಸೇರಿದಂತೆ ಹಲವು ಕೌಂಟರ್‌ಗಳನ್ನು ತೆರೆಯ ಲಾಗುವುದು ಎಂದರು.
ಕಾರ್ಯಕ್ರಮಕ್ಕೆ ಜನರನ್ನು ಆಹ್ವಾನಿಸಲು ಸರ್ಕಾರದ ಎ ಇಲಾಖೆಗಳ ಅಧಿಕಾರಿಗಳು ತಮ್ಮ ಇಲಾಖಾ ಸೌಲಭ್ಯ ಪಡೆದ ಫಲಾನುಭವಿಗಳು ಆಹ್ವಾನಿಸುವಂತೆ ತಿಳಿಸಿದ ಜಿಲ್ಲಾಧಿಕಾರಿಗಳು, ಕಾರ್ಯಕ್ರಮ ನಡೆಯುವ ಸ್ಥಳ ಸ್ವಚ್ಚವಾಗಿಟ್ಟುಕೊಳ್ಳುವಂತೆ ಹಾಗೂ ಕಾರ್ಯಕ್ರಮ ಸ್ಥಳದಲ್ಲಿ ಪ್ಲಾಸ್ಟಿಕ್ ಬಳಕೆಗೆ ಕಡಿವಾಣ ಹಾಕುವಂತೆ ಅವರು ಇದೇ ಸಂದರ್ಭದಲ್ಲಿ ಅಧಿಕಾರಿಗಳಿಗೆ ಸೂಚಿಸಿದರು. ಕಾರ್ಯಕ್ರಮದ ಯಶಸ್ವಿಯಾಗುವ ನಿಟ್ಟಿನಲ್ಲಿ ಸಂಬಂಧಿತ ಇಲಾಖಾ ಅಧಿಕಾರಿಗಳ ನಡುವೆ ಸಮನ್ವಯತೆ ಅಗತ್ಯವಾಗಿದೆ ಎಂದರು.
ಇದೇ ಸಂದರ್ಭದಲ್ಲಿ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಅನುಷ್ಠಾನದಲ್ಲಿರುವ ಹಲವು ಯೋಜನೆಗಳಲ್ಲಿ ಫಲಾನುಭವಿ ಗಳಾಗಿರುವವರಿಗೆ ಸೌಲಭ್ಯಗಳನ್ನು ವಿತರಿಸಲು ಕ್ರಮವಹಿಸಲಾಗು ವುದು. ಅಲ್ಲದೇ ಕಾರ್ಯಕ್ರಮಕ್ಕೆ ಜಿ ಉಸ್ತುವಾರಿ ಸಚಿವರು ಸೇರಿದಂತೆ ಸರ್ಕಾರದ ಸಚಿವರು, ನಿಗಮ ಮಂಡಳಿಗಳ ಅಧ್ಯಕ್ಷರು, ವಿಧಾನ ಪರಿಷತ್ ಮತ್ತು ವಿಧಾನ ಸಭಾ ಶಾಸಕರು, ಅಧಿಕಾರಿಗಳು ಹಾಗೂ ಗಣ್ಯರನ್ನು ಆಹ್ವಾನಿಸಲಾಗು ವುದು ಎಂದವರು ನುಡಿದರು.
ಸಭೆಯಲ್ಲಿ ಜಿ ರಕ್ಷಣಾಧಿಕಾರಿ ಜಿ.ಕೆ.ಮಿಥುನ್‌ಕುಮಾರ್, ಜಿಪಂ ಸಿಇಓ ಸ್ನೇಹಲ್ ಸುಧಾಕರ್ ಲೋಖಂಡೆ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಅನಿಲ್‌ಕುಮಾರ್ ಭೂಮರೆಡ್ಡಿ, ಮಹಾನಗರಪಾಲಿಕೆ ಆಯುಕ್ತ ಮಾಯಣ್ಣಗೌಡ, ಸೂಡಾ ಆಯುಕ್ತ ವಿಶ್ವನಾಥ ಮುದ್ದಜ್ಜಿ ಸೇರಿದಂತೆ ವಿವಿಧ ಇಲಾಖೆಗಳ ಜಿ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.