ಜಿಲ್ಲಾ ಸುದ್ದಿತಾಜಾ ಸುದ್ದಿಶಿಕ್ಷಣ

ಮೈತ್ರಿ ಕಾಲೇಜಿನಲ್ಲಿ ಸಂಭ್ರಮದ ಓಣಂ ಆಚರಣೆ

Share Below Link

ಶಿವಮೊಗ್ಗ, ಆ.೨೧: ನಗರದ ಪ್ರತಿಷ್ಠಿತ ಮೈತ್ರಿ ಕಾಲೇಜ್ ಅಂಡ್ ಸ್ಕೂಲ್ ಆಫ್ ನರ್ಸಿಂಗ್‌ನಲ್ಲಿ ಇಂದು ಕೇರಳದ ಸರ್ವ ಧರ್ಮೀಯ ಸಾಂಸ್ಕೃತಿಕ ಹಬ್ಬವಾದ ಓಣಂ ಅನ್ನು ಸಂಭ್ರಮ ಹಾಗೂ ಸಡಗರದಿಂದ ಆಚರಿಸಲಾಯಿತು.
ಕಾಲೇಜಿನ ಆಡಳಿತ ಮಂಡಳಿ, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳ ಸಮ್ಮುಖದಲ್ಲಿ ನಡೆದ ಕಾರ್ಯ ಕ್ರಮವು ಕೇರಳದ ಸಾಂಪ್ರದಾಯಿಕ ಸಂಸ್ಕೃತಿ ಮತ್ತು ವೈವಿಧ್ಯತೆಯನ್ನು ಪ್ರತಿಬಿಂಬಿಸಿತು.
ಕಾರ್ಯಕ್ರಮದ ಅಂಗವಾಗಿ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ಸಾಂಪ್ರದಾಯಿಕ ಉಡುಗೆಯಲ್ಲಿ ಪಾಲ್ಗೊಂಡು ಹಬ್ಬದ ಸಂಭ್ರಮಕ್ಕೆ ಮೆರುಗು ತಂದರು. ಆಕರ್ಷಕ ಹೂವಿನ ರಂಗೋಲಿ (ಪೂಕಳಂ) ಎಲ್ಲರ ಗಮನ ಸೆಳೆಯಿತು. ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು, ಸಾಂಪ್ರದಾಯಿಕ ಆಟಗಳು ಹಾಗೂ ಮನರಂಜನಾ ಚಟುವಟಿಕೆಗಳು ಹಬ್ಬದ ವಾತಾವರಣವನ್ನು ಮತ್ತಷ್ಟು ಕಳೆಗಟ್ಟಿಸಿದವು.
ಈ ಸಂದರ್ಭದಲ್ಲಿ ಮಾತನಾಡಿದ ಕಾಲೇಜಿನ ಆಡಳಿತ ಮಂಡಳಿಯ ಪ್ರತಿನಿಧಿಗಳು, ಓಣಂ ಕೇವಲ ಒಂದು ಆಚರಣೆಯಲ್ಲ. ಅದು ಸೌಹಾರ್ದ, ಸಮಾನತೆ, ಸಹಬಾಳ್ವೆ ಹಾಗೂ ಮಾನವೀಯ ಮಲ್ಯಗಳ ಪ್ರತೀಕವಾಗಿದೆ ಎಂದು ಹೇಳಿದರು.
ವಿವಿಧ ಸಂಸ್ಕೃತಿ ಮತ್ತು ಧರ್ಮಗಳ ನಡುವಿನ ಬಾಂಧವ್ಯವನ್ನು ಗಟ್ಟಿಗೊಳಿಸುವ ಇಂತಹ ಆಚರಣೆಗಳು ವಿದ್ಯಾರ್ಥಿಗಳಲ್ಲಿ ಏಕತೆ ಹಾಗೂ ಸಾಮಾಜಿಕ ಹೊಣೆಗಾರಿಕೆಯ ಮನೋಭಾವ ಬೆಳೆಸಲು ಸಹಕಾರಿಯಾಗುತ್ತವೆ ಎಂದರು. ವಿದ್ಯಾರ್ಥಿಗಳು, ಸಿಬ್ಬಂದಿಯ ಉತ್ಸಾಹದಿಂದ ಪಾಲ್ಗೊಂಡಿದ್ದರು.

Leave a Reply

Your email address will not be published. Required fields are marked *