ತಾಜಾ ಸುದ್ದಿರಾಜಕೀಯ

ಕೊನೆಗೂ ಭರ್ತಿಯಾದ ಸಿಎಂ ಸಿದ್ದು ಸಂಪುಟ…

Share Below Link

ಬೆಂಗಳೂರು: ನೂತನ ಕಾಂಗ್ರೆಸ್ ಸರ್ಕಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟಕ್ಕೆ ಯಾರೆಲ್ಲಾ ಸೇರ್ಪಡೆಯಾಗಲಿದ್ದಾರೆ ಎಂಬ ಕುತೂಹಲಕ್ಕೆ ಕೊನೆಗೂ ತೆರೆಬಿದ್ದಿದೆ. ಸಂಪುಟ ವಿಸ್ತರಣೆ ಪ್ರಕ್ರಿಯೆಯನ್ನು ಪೂರ್ಣ ಗೊಳಿಸಲಾಗಿದ್ದು, ಇಂದು ೨೪ ಮಂದಿ ಶಾಸಕರು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಈ ಹಿಂದೆ ಸಿಎಂ, ಡಿಸಿಎಂ ಜೊತೆ ೮ ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದು ಈ ಮೂಲಕ ಒಟ್ಟು ೩೪ ಮಂದಿಯೊಂದಿಗೆ ಸಿದ್ದರಾಮಯ್ಯ ಸಂಪುಟ ಭರ್ತಿಯಾಗಲಿದೆ. ಇಂದು ಬೆಳಗ್ಗೆ ೧೧.೪೫ಕ್ಕೆ ೨೪ ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.
ರಾಜಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೊಟ್ ನೂತನ ಸಚಿವರಿಗೆ ಅಧಿಕಾರ ಮತ್ತು ಗೌಪ್ಯತೆಯ ಪ್ರತಿಜ ವಿಧಿ ಬೋಧಿಸಿದರು. ಶಾಸಕರಾದ ಎಚ್.ಕೆ. ಪಾಟೀಲ್, ಕೃಷ್ಣ ಭೈರೇಗೌಡ, ಚೆಲುವರಾಯಸ್ವಾಮಿ, ಎಚ್.ಸಿ. ಮಹದೇವಪ್ಪ ಮತ್ತು ಇತರರು ಪ್ರಮಾಣ ವಚನ ಸ್ವೀಕರಿಸಿದರು.
ಇಂದು ಪ್ರಮಾಣ ವಚನ ಸ್ವೀಕರಿಸಿದವರು:
ಹೆಚ್.ಕೆ. ಪಾಟೀಲ್, ಕೃಷ್ಣ ಭೈರೇಗೌಡ, ಎನ್. ಚಲುವರಾಯಸ್ವಾಮಿ, ಕೆ. ವೆಂಕಟೇಶ್, ಡಾ.ಹೆಚ್.ಸಿ. ಮಹದೇವಪ್ಪ, ಈಶ್ವರ ಖಂಡ್ರೆ, ಕೆ.ಎನ್.ರಾಜಣ್ಣ, ದಿನೇಶ್ ಗುಂಡೂರಾವ್, ಶರಣಬಸಪ್ಪ ದರ್ಶನಾಪುರ್, ಶಿವಾನಂದ ಪಾಟೀಲ್, ಆರ್.ಬಿ.ತಿಮ್ಮಾಪುರ, ಎಸ್.ಎಸ್.ಮಲ್ಲಿಕಾರ್ಜುನ, ಶಿವರಾಜ ತಂಗಡಗಿ, ಡಾ.ಶರಣ ಪ್ರಕಾಶ್ ರುದ್ರಪ್ಪ ಪಾಟೀಲ್, ಮಂಕಾಳು ವೈದ್ಯ, ಸಂತೋಷ್ ಲಾಡ್, ಎನ್ ಎಸ್ ಬೋಸೆರಾಜು, ಬೈರತಿ ಸುರೇಶ್, ಮಧು ಬಂಗಾರಪ್ಪ, ಎಂ.ಸಿ.ಸುಧಾಕರ್, ಬಿ.ನಾಗೇಂದ್ರ, ಲಕ್ಷ್ಮೀ ಹೆಬ್ಬಾಳ್ಕರ್, ರಹೀಂ ಖಾನ್, ಡಾ. ಸುಧಾಕರ್.