ಡಾ| ಸರ್ಜಿ ಮತ್ತು ಭೋಜೇಗೌಡರಿಗೆ ಪ್ರಥಮ ಪ್ರಾಶಸ್ತ್ಯದ ಮತ ನೀಡಿ ಗೆಲ್ಲಿಸಿ…
ಶಿವಮೊಗ್ಗ : ನೈರುತ್ಯ ಪದವೀಧರ ಮತ್ತು ಶಿಕ್ಷಕ ಕ್ಷೇತ್ರದ ಮೈತ್ರಿಕೂಟದ ಅಭ್ಯರ್ಥಿ ಗಳನ್ನು ಅತ್ಯಧಿಕ ಮತಗಳ ಅಂತರದಿಂದ ಗೆಲ್ಲಿಸಲು ನಾವೆಲ್ಲರೂ ಕೈಜೋಡಿಸೋಣ ಎಂದು ಗ್ರಾಮಾಂತರ ಮಾಜಿ ಶಾಸಕರಾದ ಕೆ.ಬಿ. ಅಶೋಕ್ ನಾಯ್ಕ್ ಕರೆ ನೀಡಿದರು.
ಜಿಲ್ಲಾ ಬಂಜಾರ ಕನ್‌ವೆನ್ಶ ನ್ ಹಾಲ್‌ನಲ್ಲಿ ಗ್ರಾಮಾಂತರ ಬಿಜೆಪಿ ವತಿಯಿಂದ ಹಮ್ಮಿಕೊಂಡಿದ್ದ ನೈರುತ್ಯ ಪದವೀಧರ ಕ್ಷೇತ್ರದ ಮತದಾರರ ಸಮಾವೇಶದಲ್ಲಿ ಮಾತನಾಡಿದ ಅವರು, ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಹಾಗೂ ಶಿಕ್ಷಕರ ಕ್ಷೇತ್ರದಿಂದ ಜೆಡಿಎಸ್‌ನ ಎಸ್.ಎಲ್. ಭೋಜೇಗೌಡ ಸ್ಪರ್ಧಿಸಿದ್ದು, ಅವರಿಗೆ ಪ್ರಥಮ ಪ್ರಾಶಸ್ತ್ಯದ ಮತ ನೀಡಿ ಗೆಲ್ಲಿಸುವಂತೆ ಮನವಿ ಮಾಡಿದರು.
ವಿಧಾನ ಪರಿಷತ್ ಸದಸ್ಯರಾದ ಎಸ್. ರುದ್ರೇಗೌಡ ಮಾತನಾಡಿ, ಪದವೀಧರರ ಸಮಸ್ಯೆಗಳನ್ನು ಆಲಿಸಿ ಮಾರ್ಗೋಪಾಯಗಳನ್ನು ಕಂಡುಕೊಳ್ಳಲು ವಿಧಾನ ಪರಿಷತ್ ಸೂಕ್ತ ವೇದಿಕೆ. ಈ ನಿಟ್ಟಿನಲ್ಲಿ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಕ್ಕೆ ಬಿಜೆಪಿಯಿಂದ ಸಮರ್ಥರು ಸ್ಪರ್ಧೆ ಮಾಡಿದ್ದಾರೆ, ಅವರನ್ನು ಆಯ್ಕೆ ಮಾಡಿ ಸೇವೆ ಮಾಡಲು ಅವಕಾಶ ಮಾಡಿಕೊಡಬೇಕು ಎಂದರು.
ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಮಾತನಾಡಿ,ಈಗಾಗಲೇ ಕ್ಷೇತ್ರದ ಎಲ್ಲ ಜಿಲ್ಲೆಗಳಲ್ಲೂ ಪ್ರವಾಸ ಮಾಡಿದ್ದು, ಉತ್ತಮ ಸ್ಪಂದನೆ, ಬೆಂಬಲ ಸಿಕ್ಕಿದೆ, ಬಿಜೆಪಿಯು ಕಾರ್ಯಕರ್ತರ ಬಹುದೊಡ್ಡ ಸಂಘಟನಾ ಶಕ್ತಿ ಹೊಂದಿದೆ, ಎಲ್ಲರೂ ಪ್ರಾಮಾಣಿಕ ವಾಗಿ ಸಕ್ರಿಯ ವಾಗಿದ್ದು, ಮೊದಲನೇ ಪ್ರಾಶಸ್ತ್ಯದ ಗೆಲುವು ನಮ್ಮದಾಗಲಿದೆ, ಇದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಸಮಾರಂಭದಲ್ಲಿ ಬಿಜೆಪಿ ಕಾರ್ಯಕರ್ತರು ಹಾಗೂ ಪದವೀಧರ ಮತ್ತು ಶಿಕ್ಷಕ ಮತದಾರರು ಉಪಸ್ಥಿತರಿದ್ದರು.