ಇತರೆಉದ್ಯೋಗಜಿಲ್ಲಾ ಸುದ್ದಿತಾಜಾ ಸುದ್ದಿ

ಶಿವಮೊಗ್ಗ ಫ್ರೀಡಂ ಪಾರ್ಕ್‌ನಲ್ಲಿ ಪ್ರಪ್ಪಥಮ ಬಾರಿಗೆ ಬೃಹತ್ ಸ್ವದೇಶಿ ಮೇಳ…

Share Below Link

ಶಿವಮೊಗ್ಗ: ಸ್ವದೇಶಿ ಜಾಗರಣ ಮಂಚ್, ಕರ್ನಾಟಕ ವತಿಯಿಂದ ಜನರಿಗೆ ದೇಶೀಯ ವಸ್ತುಗಳ ಪರಿಚಯ ಮತ್ತು ಸ್ವದೇಶಿ ಉತ್ಪಾದಕರಿಗೆ ಮಾರುಕಟ್ಟೆ ಒದಗಿಸುವ ದೃಷ್ಟಿಯಿಂದ ಶಿವಮೊಗ್ಗದಲ್ಲಿ ಮೊಟ್ಟಮೊದಲ ಬಾರಿಗೆ ಫ್ರೀಡಂ ಪಾರ್ಕ್‌ನಲ್ಲಿ ಡಿ.೬ ರಿಂದ ೧೦ರವರೆಗೆ ಬೃಹತ್ ಸ್ವದೇಶಿ ಮೇಳ ಆಯೋಜಿಸಿದೆ ಎಂದು ಸ್ವದೇಶಿ ಜಗರಣ ಮಂಚ್ ದಕ್ಷಿಣ ಮಧ್ಯ ಕ್ಷೇತ್ರೀಯ ಸಂಘಟಕ್ ಕೆ ಜಗದೀಶ್ ಅವರು ಸುದ್ದಿಗೋಷ್ಟಿಯಲ್ಲಿ ವಿವರಿಸಿದರು.
ಈ ಮೇಳದಲ್ಲಿ ೨೫೦ಕ್ಕೂ ಹೆಚ್ಚು ಸ್ವದೇಶಿ ಮಳಿಗೆಗಳು ಭಾಗವಹಿಸಲಿದ್ದು, ಒಂದೂವರೆ ಲಕ್ಷಕ್ಕೂ ಹೆಚ್ಚು ಜನ ಭಾಗವಹಿಸುವ ನಿರೀಕ್ಷೆ ಇದೆ. ಮೇಳದಲ್ಲಿ ವೈವಿಧ್ಯಮಯ ದೇಶೀಯ ಆಹಾರ ಗಳು, ದೇಶೀಯ ಕ್ರೀಡೆಗಳು, ಜನಪದ ಕಲಾ ವೈಭವ, ಯಕ್ಷಗಾನ, ಬಾನ್ಸುರಿ ವಾದನ, ನೃತ್ಯ ರೂಪಕ, ಜದೂ ಪ್ರದರ್ಶನ ಸೇರಿದಂತೆ ೧೬ ಕ್ಕೂ ಹೆಚ್ಚು ಶಿಬಿರ ಹಾಗೂ ತರಬೇತಿ ಕಾರ್ಯಾ ಗಾರಗಳು ನಡೆಯಲಿವೆ ಎಂದರು.


ಡಿ.೬ ರಂದು ಸಂಜೆ ೬.೩೦ಕ್ಕೆ ಮೈಸೂರು ಮಹಾರಾಜ ಶ್ರೀ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಮೇಳ ಉದ್ಘಾಟಿಸಲಿದ್ದು, ತರಳಬಾಳು ಜಗದ್ಗುರು ಡಾ.ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳು ಸಾನಿಧ್ಯ ವಹಿಸುವರು. ಮಾಜಿ ಸಿಎಂ ಯಡಿಯೂರಪ್ಪ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಸಂಸದ ಬಿ.ವೈ. ರಾಘವೇಂದ್ರ, ಜಿಧಿಕಾರಿ ಡಾ. ಸೆಲ್ವಮಣಿ ಭಾಗವಹಿಸಲಿದ್ದು, ಸ್ವದೇಶಿ ಚಿಂತಕ ಪ್ರೊ.ಬಿ.ಎಂ. ಕುಮಾರಸ್ವಾಮಿ ಮುಖ್ಯ ಭಾಷಣ ಮಾಡಲಿzರೆ. ಅಂದು ರಾತ್ರಿ ೮ಕ್ಕೆ ಜನಪದ ಕಲಾ ವೈಭವ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ ಎಂದರು.
ಡಿ.೭ರ ಬೆಳಿಗ್ಗೆ ೧೦.೩೦ ರಿಂದ ಮಧ್ಯಾಹ್ನ ೨ರವರೆಗೆ ತಾರಸಿ ತೋಟ ತರಬೇತಿ ಕಾರ್ಯಾಗಾರ ಹಾಗೂ ಮಧ್ಯಾಹ್ನ ೩ ರಿಂದ ಸಂಜೆ ೫.೩೦ರವರೆಗೆ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿeನಗಳ ವಿಶ್ವ ವಿದ್ಯಾಲಯದ ಸಹಯೋಗದಲ್ಲಿ ಸಂಘಟನೆಯಿಂದ ಕೃಷಿ ಮಾರುಕಟ್ಟೆ- ಯುವಕರ ಪಾತ್ರದ ಕುರಿತು ಸಂವಾದ ಹಾಗೂ ಸಾವಯವ ಕೃಷಿ-ಪ್ರಾತ್ಯಕ್ಷಿಕೆ – ಪ್ರದರ್ಶನ ವಿಸ್ತರಣೆ ಕಾರ್ಯಾಗಾರ ನಡೆಯಲಿದೆ. ಸಂಜೆ ೭ರಿಂದ ನಡೆಯುವ ರಾಗರಂಗ್ ಸಾಂಸ್ಕೃತಿಕ ಕಾರ್ಯ ಕ್ರಮದಲ್ಲಿ ಖ್ಯಾತ ಕಲಾವಿದ ಪಂಡಿತ್ ಡಾ.ಪ್ರವೀಣ್ ಗೋಡ್ಖಿಂಡಿ ಅವರು ಬಾನ್ಸುರಿ ವಾದನ ನಡೆಸಿಕೊಡಲಿzರೆ ಎಂದರು.
ಡಿ.೮ರಂದು ಬೆಳಗ್ಗೆ ೧೦.೩೦ ರಿಂದ ಮಧ್ಯಾಹ್ನ ೧.೩೦ ರವರೆಗೆ ಶಿವಮೊಗ್ಗದ ಖ್ಯಾತ ವೈದ್ಯ ಡಾ.ಎಂ.ಬಿ. ಗುರುರಾಜ ಅವರು ಆಯುರ್ವೇದ ಶಿಬಿರ ನಡೆಸಿ ಕೊಡಲಿದ್ದು, ಆರೋಗ್ಯಕರ ಜೀವನ ಪದ್ಧತಿ ಮತ್ತು ಮನೆಯ ಮಾಡಿಕೊಳ್ಳ ಬಹುದಾದ ಸರಳ ಚಿಕಿತ್ಸಾ ವಿಧಾನದ ಕುರಿತು ಮಾಹಿತಿ ನೀಡಲಿzರೆ. ಸಂಜೆ ೬ರಿಂದ ಹನುಮಗಿರಿ ಶ್ರೀ ಕೋದಂಡರಾಮ ಕೃಪಾ ಪೋಷಿತ ಯಕ್ಷಗಾನ ಮಂಡಳಿಯಿಂದ ಶ್ವೇತ ಕುಮಾರ ಚರಿತ್ರೆ ಯಕ್ಷಗಾನ ಪ್ರದರ್ಶನ ನಡೆಯಲಿದೆ ಎಂದರು.
ಡಿ.೯ ರಂದು ಬೆಳಿಗ್ಗೆ ೧೦ರಿಂದ ೧.೩೦ರವರೆಗೆ ನಿತ್ಯ ಬಳಕೆ ವಸ್ತುಗಳ ತಯಾರಿಕಾ ಶಿಬಿರ ಹಾಗೂ ಮಧ್ಯಾಹ್ನ ೩ರಿಂದ ಪಂಚಗವ್ಯ ಚಿಕಿತ್ಸಾ ಶಿಬಿರ ನಡೆಯಲಿದೆ. ರಾತ್ರಿ ೭ರಿಂದ ಮೈಸೂರಿನ ನೃತ್ಯ ನಿಪುಣೆ ಡಾ.ಕೃಪಾ ಫಡಕೆ ಮತ್ತು ತಂಡದಿಂದ ವಂದೇ ಮಾತರಂ ನೃತ್ಯ ರೂಪಕ ನಡೆಯಲಿದೆ.
ಡಿ.೧೦ ರಂದು ಬೆಳಿಗ್ಗೆ ೭.೩೦ ರಿಂದ ೯ಗಂಟೆಯವರೆಗೆ ಮಹಿಳೆಯಗಾರಿಗಾಗಿ ರಂಗೋಲಿ ಸ್ಪರ್ಧೆ, ೧೦.೩೦ರಿಂದ ಮಧ್ಯಾಹ್ನ ೧.೩೦ ರವರೆಗೆ ರೈತರೊಂದಿಗೆ ಸಾವಯವ ಕೃಷಿ, ಬಹುಬೆಳೆ ಪದ್ಧತಿ, ಮಲ್ಯ ವರ್ಧನೆ, ಮಾರುಕಟ್ಟೆ ಮತ್ತು ಸಹಕಾರಿ ವ್ಯವಸ್ಥೆ ಕುರಿತು ಸಂವಾದ ಕಾರ್ಯಕ್ರಮ ನಡೆಯಲಿದ್ದು, ಸಂಜೆ ೪ ರಿಂದ ೫.೩೦ ರವರೆಗೆ ಶಿವಮೊಗ್ಗ ಯೋಗ ಶಿಕ್ಷಣ ಸಮಿತಿ ವತಿಯಿಂದ ಯೋಗಾಸನ ಪ್ರದರ್ಶನ ಮತ್ತು ರಾತ್ರಿ ೭ ಗಂಟೆಗೆ ಮೆಗಾ ಮ್ಯಾಜಿಕ್ ಸ್ಟಾರ್ ಕುದ್ರೋಳಿ ಗಣೇಶ್ ಅವರಿಂದ ಅಬ್ರಕಡಬ್ರ ಜದೂ ಪ್ರದರ್ಶನ ನಡೆಯಲಿದೆ ಎಂದರು.
ಸಮಿತಿ ಸದಸ್ಯ ಪ್ರೊ.ಬಿ.ಎಂ. ಕುಮಾರಸ್ವಾಮಿ ಮಾತನಾಡಿ, ೧೯೯೧ರಲ್ಲಿ ಅಂದಿನ ಕೇಂದ್ರ ಸರ್ಕಾರ ಜರಿಗೆ ತಂದ ಜಗತೀಕರಣ ನೀತಿಯಿಂದಾಗಿ ಸ್ವದೇಶಿ ವಸ್ತುಗಳು ನಶೀಸಿ ಹೋಗುವ ಪರಿಸ್ಥಿತಿಯನ್ನು ಮನಗಂಡು ಸ್ವದೇಶಿ ಜಗರಣಾ ಮಂಚ್ ರಚಿಸಿ ದೇಶಾದ್ಯಂತ ಸ್ವದೇಶಿ ಮೇಳಗಳನ್ನು ಆಯೋಜಿಸಿ ದೇಶೀಯ ವಸ್ತುಗಳ ಪರಿಚಯ ಮತ್ತು ಸ್ವದೇಶಿ ಉತ್ಪಾದಕರಿಗೆ ಮಾರುಕಟ್ಟೆ ಒದಗಿಸುವ ದೃಷ್ಠಿಯಿಂದ ಮೇಳಗಳನ್ನು ಆಯೋಜಿಸಲಾಗುತ್ತಿದೆ ಎಂದರು.
ಈ ಮೇಳದಲ್ಲಿ ೨೫೦ಕ್ಕೂ ಹೆಚ್ಚು ಸ್ವದೇಶಿ ಮಳಿಗೆಗಳು ಇದ್ದು, ಒಂದುವರೆ ಲಕ್ಷಕ್ಕೂ ಹೆಚ್ಚು ಜನರು ಭಾಗವಹಿಸುವ ನಿರೀಕ್ಷ ಇದೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆ ಯಲ್ಲಿ ಭಾಗವಹಿಸುವ ಮೂಲಕ ಸ್ವದೇಶಿ ಮೇಳವನ್ನು ಯಶಸ್ವಿ ಗೊಳಿಸಿಕೊಡಬೇಕೆಂದು ವಿನಂತಿಸಿದ ಅವರು, ಹೆಚ್ಚಿನ ಮಾಹಿತಿಗಾಗಿ ೯೧೪೮೫ ೨೪೮೫೪, ೭೦೧೯೧ ೦೮೫೧೧ ಸಂಪರ್ಕಿಸಲು ಕೋರಿದರು.
ಮೇಳದ ಸಂಚಾಲಕ ಡಿ.ಎಸ್. ಅರುಣ್, ಸಂಯೋಜಕ ಡಾ. ಧನಂಜಯ ಸರ್ಜಿ, ಸಂಘಟಕ ಹರ್ಷ ಬಿ.ಕಾಮತ್, ಸ್ವದೇಶಿ ಜಗರಣ ಮಂಚ್ ಜಿ ಸಂಯೋಜಕ ದಿಲೀಪ್, ಪ್ರಮುಖರಾದ ಎಸ್.ದತ್ತಾತ್ರಿ, ಸುರೇಖಾ ಮರುಳೀಧರ್ ಇನ್ನಿತರರು ಉಪಸ್ಥಿತರಿದ್ದರು.