ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಐದು ಗ್ಯಾರೆಂಟಿಗಳ ಜೊತೆ ಇತರೆ ಭರವಸೆಗಳನ್ನೂ ಈಡೇರಿಸಿ: ಮಾಜಿ ಎಂಎಲ್‌ಸಿ ಆಯನೂರು ಒತ್ತಾಯ

Share Below Link

ಶಿವಮೊಗ್ಗ: ಹೊಸ ಗ್ಯಾರಂ ಟಿಗಳ ನಡುವೆ ಹಳೆಯ ಮತ್ತು ಅಗತ್ಯ ಗ್ಯಾರಂಟಿಗಳನ್ನು ಮರೆಯ ಬಾರದು ಎಂದು ಜೆಡಿಎಸ್ ಮುಖಂಡ ಆಯನೂರು ಮಂಜು ನಾಥ್ ಸುದ್ದಿಗೋಷ್ಟಿಯಲ್ಲಿ ಹೇಳಿ ದರು.
ಹೊಸ ಸರ್ಕಾರ ಬಂದಿದೆ. ಬಜೆಟ್ ಮಂಡನೆಯಾಗಿದೆ. ಗ್ಯಾರಂಟಿಗಳಿಗೆ ಅನುಕೂಲವಾಗು ವಂತಹ ಬಜೆಟ್ ಮಂಡನೆಯಾ ಗಿದೆ. ಬಜೆಟ್‌ಗೆ ಸಂಬಂಧಿಸಿದಂತೆ ಸದನದಲ್ಲಿ ಚರ್ಚೆ ಕೂಡ ನಡೆಯು ತ್ತಿದೆ. ಈ ಬಾರಿಯ ಬಜೆಟ್‌ನಲ್ಲಿ ಆಶಾದಾಯಕ ನಿರಾಶಾದಾಯಕ ಎರಡೂ ಇವೆ ಎಂದರು.
ಸಿದ್ದರಾಮಯ್ಯ ಅವರು ಬಜೆಟ್ ಮಂಡಿಸುವಾಗ ಒಂದು ಹೊಸ ಪರಂಪರೆಯನ್ನೇ ಸೃಷ್ಟಿಸಿ ದ್ದಾರೆ. ಅದೇನೆಂದರೆ ಹಳೆಯ ಸರ್ಕಾರವನ್ನು ಟೀಕಿಸುವುದೂ ಆಗಿದೆ. ಈ ಟೀಕೆಗೆ ಬಿಜೆಪಿ ಉತ್ತರ ಕೊಡಬೇಕಾದ ಅವಶ್ಯತೆ ಇದೆ. ಆದರೆ ಅವರಿನ್ನೂ ನಾಯಕನನ್ನೇ ಆಯ್ಕೆ ಮಾಡಿಲ್ಲ. ನಮ್ಮ ಪಕ್ಷದ ನಾಯಕ ಕುಮಾರಸ್ವಾಮಿಯವರು ಅದನ್ನು ನಿಭಾಯಿಸುತ್ತಿದ್ದಾರೆ. ಬಿಜೆಪಿಯವರು ಕೊನೇ ಪಕ್ಷ ನಾಯಕನನ್ನು ಆಯ್ಕೆ ಮಾಡುವ ತನಕವಾದರೂ ಕುಮಾರಸ್ವಾಮಿ ಯವರೇ ತಮ್ಮ ಪಕ್ಷದ ಪರವಾಗಿ ನಾಯಕರಾಗಲಿ ಎನ್ನಬೇಕು ಎಂದು ವ್ಯಂಗ್ಯವಾಡಿದರು.
ಇನ್ನು ಬಜೆಟ್‌ನಲ್ಲಿ ಕಾರ್ಮಿಕ ಕ್ಷೇತ್ರಕ್ಕೆ ಒತ್ತುಕೊಟ್ಟಿಲ್ಲ. ಪೌರ ಕಾರ್ಮಿಕರ ಖಾಯಂ ಬಗ್ಗೆ ಯಾ ವುದೇ ಪ್ರಸ್ತಾಪವಿಲ್ಲ. ಯುವಕರಿ ಗಾಗಿ ಯಾವ ಆಶ್ವಾಸನೆಗಳು ಇಲ್ಲ. ಕ್ರೀಡೆಗೆ ಆದ್ಯತೆ ಇಲ್ಲ. ಆಟೋ ಹಾಗೂ ಟ್ಯಾಕ್ಷಿ ಡ್ರೈವರುಗಳ ಪರವಾಗಿ ಕಲ್ಯಾಣ ಮಂಡಳಿ ರಚನೆ ಮಾಡುತ್ತೇವೆ. ವಿಮೆ ನೀಡುತ್ತೇವೆ ಎಂದಿದ್ದರು. ಅದಕ್ಕೂ ಬಜೆಟ್‌ನಲ್ಲಿ ಜಗವಿಲ್ಲ. ಸರ್ಕಾರಿ ಹಳೆ ಪಿಂಚಣಿ ಜರಿಗೆ ಸಮಿತಿ ರಚಿಸುತ್ತೇವೆ ಎಂದಷ್ಟೇಹೇಳಿದ್ದಾರೆ. ಆ ಬಗ್ಗೆಯೂ ಪ್ರಸ್ತಾಪವಿಲ್ಲ. ನೌಕರರ ಏಳನೇ ವೇತನ ಜರಿಗೆ ಕ್ರಮ ಕೈಗೊಂಡಿಲ್ಲ. ಹೀಗೆ ಹಲವು ಹೊ ಣೆಗಾರಿಕೆಗಳು ಸರ್ಕಾರ ಮೇಲಿವೆ. ಸರ್ಕಾರ ಏನೋ ಟೇಕಾಫ್ ಆಗಿದೆ. ಅದರೆ ಅದರ ಹಾರಟ ಮಾತ್ರ ನಿಲ್ಲಬಾರದು ಎಂದರು.
ವಿಧಾನ ಪರಿಷತ್ ಚುನಾವಣೆ ಸ್ಪರ್ಧೆಗೆ ಸಂಬಂಧಿಸಿದಂತೆ ಪತ್ರ ಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, ಈ ಬಾರಿ ಪದವೀಧರರ ಕ್ಷೇತ್ರದಿಂದ ಸ್ಪರ್ಧಿ ಸುವುದು ಖಚಿತ. ಹಾಗೆಯೇ ಶಿಕ್ಷಕರ ಕ್ಷೇತ್ರದಿಂದ ಭೋಜೇಗೌಡರು ಸ್ಪರ್ಧೆ ಮಾಡುತ್ತಾರೆ. ಕಾಂಗ್ರೆಸ್ ನವರ ಹಾಗೆ ನಾವೇನೂ ಚುನಾ ವಣೆ ಇನ್ನು ಒಂದು ವರ್ಷವಿದ್ದರೂ ಎರಡು ಲಕ್ಷ ರೂ. ಕೊಟ್ಟು ಅರ್ಜಿ ಹಾಕಬೇಕಾಗಿಲ್ಲ. ನಮ್ಮ ಪಕ್ಷದ ಸಿದ್ಧಾಂತಗಳೇ ಬೇರೆ ಇವೆ. ನಾವೇನೂ ಬಿಜೆಪಿಯವರ ಹತ್ತಿರ ಹೋಗುತ್ತಿಲ್ಲ. ಬಿಜೆಪಿಯವರೇ ನಮ್ಮ ಬಳಿ ಬರುತ್ತಾರೆ. ಬಿಜೆಪಿ ಈಗಾಗಲೇ ಸ್ಥಳೀಯ ಪಕ್ಷಗಳ ಜೊತೆ ಹೊಂದಾಣಿಕೆ ಮಾಡಿಕೊ ಳ್ಳುವ ಬಗ್ಗೆ ಆಸಕ್ತವಾಗಿದೆ ಎಂದರು.
ಮಾಜಿ ಶಾಸಕ ಕೆ.ಬಿ. ಪ್ರಸನ್ನ ಕುಮಾರ್ ಮಾತನಾಡಿ, ಶಿವ ಮೊಗ್ಗ ನಗರಕ್ಕೆ ಸಂಬಂಧಿಸಿದಂತೆ ಅನೇಕ ಸಮಸ್ಯೆಗಳು ಹಾಗೆಯೇ ಉಳಿದಿವೆ. ನೂತನ ಶಾಸಕರು ಇದರ ಬಗ್ಗೆ ಗಮನ ಹರಿಸಬೇಕು. ಮುಖ್ಯ ವಾಗಿ ಜೆನ್‌ನರ್ಮ್ ಯೋಜನೆ ಯಡಿ ನಗರಕ್ಕೆ ೪೫ ಹೊಸ ಬಸ್ ಗಳನ್ನು ಬಿಡುಗಡೆ ಮಾಡಬೇಕು. ವಿಳಂಬವಾಗುತ್ತಿರುವ ರೈಲ್ವೆ, ಮೇಲ್ಸೇತುವೆ ಕಾಮಗಾರಿಗಳನ್ನು ಬೇಗನೆ ಮುಗಿಸಬೇಕು ಎಂದರು.
ಜಿಲ್ಲಾಧ್ಯಕ್ಷ ಎಂ. ಶ್ರೀಕಾಂತ್ ಮಾತನಾಡಿ, ಮುಂಬರುವ ಸ್ಥಳೀಯ ಚುನಾವಣೆ ಹಾಗೂ ವಿಧಾನ ಪರಿಷತ್ ಚುನಾವಣೆ ಮತ್ತು ಪಕ್ಷದ ಅವಲೋಕನದ ಬಗ್ಗೆ ಬರುವ ಜು.೧೬ನೇ ಭಾನುವಾರ ಬೆಳಿಗ್ಗೆ ೧೧ ಗಂಟೆಗೆ ಜೆಡಿಎಸ್ ಸಮಾಲೋಚನಾ ಸಭೆ ಇದೆ. ಶಾಸಕಿ ಶಾರದಾ ಪೂರ್‍ಯಾ ನಾಯ್ಕ ಅವರನ್ನು ಸನ್ಮಾನಿಸಲಾಗುವುದು. ಸಭೆಯಲ್ಲಿ ಪಕ್ಷದ ಹಲವು ಮುಖಂಡರು ಭಾಗವಹಿಸಲಿದ್ದಾರೆ ಎಂದರು.
ಪ್ರಮುಖರಾದ ರಾಮಕೃಷ್ಣ, ಕಡಿದಾಳ್ ಗೋಪಾಲ್, ಸಿದ್ದಪ್ಪ, ದೀಪಕ್ ಸಿಂಗ್, ನಾಗರಾಜ್ ಕಂಕಾ ರಿ, ವಿನಯ್, ಧೀರರಾಜ್ ಹೊನ್ನ ವಿಲೆ ಸೇರಿದಂತೆ ಹಲವರಿದ್ದರು.