ಜಿಲ್ಲಾ ಸುದ್ದಿತಾಜಾ ಸುದ್ದಿ

ಕ್ರೀಡೆಗಳಿಂದ ಉತ್ತಮ ಆರೋಗ್ಯ ಸಾಧ್ಯ: ಶಿವಲಿಂಗೇಗೌಡ

Share Below Link

ಭದ್ರಾವತಿ, ಅ.೧೫: ಕ್ರೀಡೆಗಳಿಂದ ಕ್ರೀಡಾಪಟುಗಳು ತಮ್ಮ ಆರೋಗ್ಯ ಕಾಪಾಡಿಕೊಂಡು ಉಜ್ವಲ ಭವಿಷ್ಯ ರೂಪಿಸಿಕೊಳ್ಳ ಬಹುದು. ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಯೋಗ ಮತ್ತು ಕ್ರೀಡೆ ಮತ್ತಿತರೆ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತೊಡಗಿಸಿ ಕೊಂಡಲ್ಲಿ ಭವಿಷ್ಯದಲ್ಲಿ ಹೊಸ ಆಯಾಮಗಳಲ್ಲಿ ಗುರುತಿಸಿ ಕೊಳ್ಳಬಹುದು ಎಂದು ರಾಷ್ಟ್ರ ಪ್ರಶಸ್ತಿ ಪುರಸ್ಕೃತ ವಿಶ್ವೇಶ್ವರಾಯ ವಿದ್ಯಾ ಸಂಸ್ಥೆಯ ದೈಹಿಕ ಶಿಕ್ಷಣ ನಿರ್ದೇಶಕ ಶಿವಲಿಂಗೇಗೌಡ ಅವರು ನುಡಿದರು.
ಹಳೇನಗರದ ಕನಕ ಮಂಟಪ ಮೈದಾನದಲ್ಲಿ ನಗರಸಭೆ ವತಿಯಿಂದ ಹಮ್ಮಿಕೊಂಡಿದ್ದ ದಸರಾ ಕ್ರೀಡೋತ್ಸವಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಕ್ರೀಡೆಗೆ ಒತ್ತು ನೀಡಿ ನಗರಕ್ಕೆ, ಪೋಷಕರಿಗೆ ಮತ್ತು ವಿದ್ಯಾ ಸಂಸ್ಥೆಗಳಿಗೆ ಕೀರ್ತಿ ತನ್ನಿ ಎಂದರು.
ನಗರಸಭಾಧ್ಯಕ್ಷೆ ಜೆ.ಸಿ.ಗೀತಾ ರಾಜಕುಮಾರ್, ಉಪಾಧ್ಯಕ್ಷ ಬಷೀರ್ ಆಹಮ್ಮದ್, ಕ್ರೀಡಾ ಸಮಿತಿ ಅಧ್ಯಕ್ಷ ಚೆನ್ನಪ್ಪ, ಸದಸ್ಯರಾದ ಸುದೀಪ್, ಮಣಿ, ಸಯ್ಯದ್‌ರಿಯಾಜ್, ಬಿ.ಟಿ. ನಾಗರಾಜ್, ಶೃತಿ ವಸಂತ, ಲತಾ ಚಂದ್ರಶೇಖರ್, ಅನುಪಮ ಚೆನ್ನೇಶ್, ಆಶ್ರಯ ಸಮಿತಿ ಅಧ್ಯಕ್ಷ ಗೋಪಾಲ್, ನಗರಸಭೆ ಪೌರಾಯುಕ್ತ ಕೆ.ಎನ್. ಹೇಮಂತ್, ಪೌರ ಕಾರ್ಮಿಕ ಸಂಘದ ಅಧ್ಯಕ್ಷ ಚೇತನ್ ಕುಮಾರ್, ಲೆಕ್ಕಾಽಕಾರಿ ಪವನ್ ಮುಂತಾದವರು ಶಿವಲಿಂಗೇ ಗೌಡರನ್ನು ಸನ್ಮಾನಿಸಿ ಗೌರವಿಸಿದರು.

Leave a Reply

Your email address will not be published. Required fields are marked *