ಜಿಲ್ಲಾ ಸುದ್ದಿತಾಜಾ ಸುದ್ದಿ

ಕನ್ನಡ ರಾಜ್ಯೋತ್ಸವಕ್ಕೆ ಭರ್ಜರಿ ಸಿದ್ಧತೆ

Share Below Link

ಶಿವಮೊಗ್ಗ: ನವೆಂಬರ್ ೧ರಂದು ಆಚರಿಸ ಲಾಗುವ ಕನ್ನಡ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ, ಸಂಭ್ರಮ ದಿಂದ ಹಾಗೂ ಅಚ್ಚುಕಟ್ಟಾಗಿ ಆಯೋಜಿಸಲು ಅಗತ್ಯ ಸಿದ್ಧತೆ ಗಳನ್ನು ಕೈಗೊಳ್ಳುವಂತೆ ಜಿಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಅವರು ಅಧಿಕಾರಿಗಳಿಗೆ ಸೂಚಿಸಿದರು.


ಜಿಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಕನ್ನಡ ರಾಜ್ಯೋತ್ಸವದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಅಂದು ಬೆಳಿಗ್ಗೆ ೮ ಗಂಟೆಗೆ ನಗರದ ಸೈನ್ಸ್ ಮೈದಾನದಿಂದ ಕನ್ನಡಾಂಬೆ ಹಾಗೂ ತಾಯಿ ಭುವನೇಶ್ವರಿಯ ಭಾವಚಿತ್ರಗಳೊಂದಿಗೆ ಭವ್ಯ ಮೆರವಣಿಗೆ ಆರಂಭವಾಗಲಿದೆ. ವಿವಿಧ ಇಲಾಖೆಗಳ ಸ್ತಬ್ಧಚಿತ್ರಗಳು, ಶಾಲಾ-ಕಾಲೇಜು ವಿದ್ಯಾರ್ಥಿಗಳು ಹಾಗೂ ಕಲಾತಂಡಗಳು ಮೆರವಣಿಗೆಯಲ್ಲಿ ಪಾಲ್ಗೊಳ್ಳಲಿದ್ದು, ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ನೆಹರೂ ಕ್ರೀಡಾಂಗಣ ದಲ್ಲಿ ಸಮಾಪನಗೊಳ್ಳಲಿದೆ ಎಂದು ತಿಳಿಸಿದರು.
ಕೃಷಿ, ತೋಟಗಾರಿಕೆ, ಅರಣ್ಯ, ಶಿಕ್ಷಣ, ಆರೋಗ್ಯ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ಗ್ರಾಮೀಣಾಭಿವೃದ್ಧಿ ಸೇರಿದಂತೆ ವಿವಿಧ ಇಲಾಖೆಗಳು ತಮ್ಮ ಇಲಾಖೆಗಳ ಸಾಧನೆ ಮತ್ತು ಯೋಜನೆಗಳನ್ನು ಪ್ರತಿಬಿಂಬಿಸುವ ಸ್ತಬ್ಧಚಿತ್ರಗಳನ್ನು ಸಿದ್ಧಪಡಿಸಬೇಕು. ಶಿವಮೊಗ್ಗ ಜಿಯ ಐತಿಹಾಸಿಕ, ಸಾಂಸ್ಕೃತಿಕ ಹಾಗೂ ಪ್ರವಾಸೋದ್ಯಮದ ವೈಶಿಷ್ಟ್ಯಗಳು ಮತ್ತು ಮಲೆನಾಡಿನ ಪ್ರಕೃತಿ ಸೌಂದರ್ಯವನ್ನು ಬಿಂಬಿಸುವ ಸ್ತಬ್ಧಚಿತ್ರಗಳಿಗೆ ಆದ್ಯತೆ ನೀಡಬೇಕು. ಜಿಯ ಅಭಿವೃದ್ಧಿ ಕಾರ್ಯಗಳು ಹಾಗೂ ಸರ್ಕಾರದ ಪ್ರಮುಖ ಯೋಜನೆಗಳ ಮಾಹಿತಿಯೂ ಸಾರ್ವಜನಿಕರಿಗೆ ತಲುಪುವಂತಿ ರಬೇಕು ಎಂದು ಸೂಚಿಸಿದರು.


ರಾಜ್ಯೋತ್ಸವದ ಅಂಗವಾಗಿ ಶಾಲಾ-ಕಾಲೇಜು ವಿದ್ಯಾರ್ಥಿಗಳು, ಕನ್ನಡಪರ ಸಂಘಟನೆಗಳು, ಕನ್ನಡ ಭಾಷಾಭಿಮಾನಿಗಳು, ಕಲಾತಂಡ ಗಳು ಹಾಗೂ ವಿವಿಧ ಸಂಘ- ಸಂಸ್ಥೆಗಳ ಸಕ್ರಿಯ ಪಾಲ್ಗೊಳ್ಳುವಿಕೆಗೆ ಅವಕಾಶ ಕಲ್ಪಿಸಬೇಕು. ನಗರದ ಪ್ರಮುಖ ರಸ್ತೆಗಳು, ವೃತ್ತಗಳು ಹಾಗೂ ಸರ್ಕಾರಿ ಕಚೇರಿ ಕಟ್ಟಡಗಳನ್ನು ವಿದ್ಯುದ್ದೀಪಗಳಿಂದ ಅಲಂಕರಿಸಿ, ರಾಜ್ಯೋತ್ಸವದ ಸಂಭ್ರಮಕ್ಕೆ ಮೆರುಗು ನೀಡಬೇಕು. ಅಂದು ಸಂಜೆ ನಗರದ ಕುವೆಂಪು ರಂಗಮಂದಿರದಲ್ಲಿ ಕನ್ನಡ ಭಾಷೆ, ನಾಡು-ನುಡಿ ಮತ್ತು ಸಂಸ್ಕೃತಿಯ ಮಹತ್ವ ಸಾರುವ ಕಾರ್ಯಕ್ರಮ ಗಳನ್ನು ಆಯೋಜಿಸುವಂತೆಯೂ ಜಿಧಿಕಾರಿಗಳು ನಿರ್ದೇಶನ ನೀಡಿದರು.
ಜಿಡಳಿತದ ವತಿಯಿಂದ ನ.೧ರಂದು ನೆಹರೂ ಕ್ರೀಡಾಂಗಣದಲ್ಲಿ ನಡೆಯಲಿರುವ ಕನ್ನಡ ರಾಜ್ಯೋತ್ಸವವನ್ನು ವ್ಯವಸ್ಥಿತವಾಗಿ ಆಯೋಜಿಸುವ ಕುರಿತು ಚರ್ಚಿಸಲು ಅ. ೧೯ರಂದು ಬೆಳಿಗ್ಗೆ ೧೦.೩೦ಕ್ಕೆ ಜಿಧಿಕಾರಿ ಕಚೇರಿಯ ನ್ಯಾಯಾಲಯ ಸಭಾಂಗಣದಲ್ಲಿ ಕನ್ನಡಪರ ಸಂಘಟನೆಗಳ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಪ್ರಮುಖರ ಸಭೆ ಕರೆಯಲಾಗಿದೆ. ಜಿಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಈ ಸಭೆಯಲ್ಲಿ ಸಂಘಟನೆಗಳ ಪ್ರಮುಖರು ಭಾಗವಹಿಸಿ, ಕಾರ್ಯಕ್ರಮದ ಯಶಸ್ಸಿಗೆ ಸಲಹೆ ಮತ್ತು ಸಹಕಾರ ನೀಡುವಂತೆ ಅವರು ಮನವಿ ಮಾಡಿದರು.
ರಾಜ್ಯೋತ್ಸವ ಕಾರ್ಯಕ್ರಮಕ್ಕೆ ನಿಯಮಾನುಸಾರ ಜಿ ಉಸ್ತು ವಾರಿ ಸಚಿವರು, ಚುನಾಯಿತ ಜನಪ್ರತಿನಿಧಿಗಳು, ಗಣ್ಯರು ಹಾಗೂ ಅಧಿಕಾರಿಗಳನ್ನು ಆಹ್ವಾನಿಸ ಲಾಗುವುದು. ಕಾರ್ಯಕ್ರಮದ ಸುಗಮ ನಿರ್ವಹಣೆಗಾಗಿ ವಿವಿಧ ಇಲಾಖೆಗಳ ಅಧಿಕಾರಿಗಳನ್ನು ಒಳಗೊಂಡ ಸಮಿತಿಗಳನ್ನು ರಚಿಸಿ ಜವಾಬ್ದಾರಿಗಳನ್ನು ಹಂಚಿಕೆ ಮಾಡಲಾಗಿದೆ. ವೇದಿಕೆ ಅಲಂಕಾರ, ಸ್ವಾಗತ ಕಮಾನುಗಳ ನಿರ್ಮಾಣ, ರಂಗೋಲಿ ಚಿತ್ತಾರ, ಹೂವಿನ ಕುಂಡಗಳ ಅಲಂಕಾರ ಹಾಗೂ ಶಿಷ್ಟಾಚಾರದಂತೆ ಆಹ್ವಾನಿತರನ್ನು ಸ್ವಾಗತಿಸಿ ಗೌರವಿಸುವ ವ್ಯವಸ್ಥೆಗಳ ಬಗ್ಗೆಯೂ ಸಭೆಯಲ್ಲಿ ಚರ್ಚಿಸಲಾಯಿತು.
ರಾಜ್ಯೋತ್ಸವದ ಯಶಸ್ಸಿಗೆ ಎಲ್ಲ ಇಲಾಖೆಗಳ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವ ಹಿಸಬೇಕು. ತಮಗೆ ವಹಿಸಿರುವ ಜವಾಬ್ದಾರಿಗಳನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಿ, ಕೈಗೊಂಡ ಸಿದ್ಧತೆಗಳ ಕುರಿತು ಪ್ರಗತಿ ವರದಿ ಸಲ್ಲಿಸಬೇಕು ಎಂದು ಜಿಧಿಕಾರಿಗಳು ಸೂಚಿಸಿದರು.
ಸಭೆಯಲ್ಲಿ ಅಪರ ಜಿಧಿಕಾರಿ ಅಭಿಷೇಕ್ ವಿ. ಸೇರಿದಂತೆ ವಿವಿಧ ಇಲಾಖೆಗಳ ಜಿ ಮಟ್ಟದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *