ಕಾಂಗ್ರೆಸ್ ಫಸ್ಟ್ ಲೀಸ್ಟ್‌ನಲ್ಲೇ ಸಂಗಮೇಶ್, ಬೇಳೂರು, ಮಧುಗೆ ಗ್ರೀನ್ ಸಿಗ್ನಲ್…
ಬೆಂಗಳೂರು: ಬಹುನಿರೀಕ್ಷಿತ ಕರ್ನಾಟಕ ವಿಧಾನಸಭೆ ಚುನಾವಣೆ -೨೦೨೩ಕ್ಕೆ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾ ಗಿದೆ. ಮೊದಲ ಪಟ್ಟಿಯಲ್ಲಿ ೧೨೪ ಕ್ಷೇತ್ರಗಳ ಅಭ್ಯರ್ಥಿಗಳ ಹೆಸರು ಘೋಷಣೆಯಾಗಿದೆ.
ಇಷ್ಟು ದಿನ ಮಾಜಿ ಸಿಎಂ ಸಿದ್ದರಾಮಯ್ಯನವರು ಸ್ಪರ್ಧಿಸುವ ಕ್ಷೇತ್ರದ ಬಗ್ಗೆ ಭಾರೀ ಚರ್ಚೆ, ಊಹಾಪೋಹ ನಡೆಯುತ್ತಿತ್ತು. ಇಂದು ಅದಕ್ಕೆ ತೆರೆ ಬಿದ್ದಿದ್ದು, ವರುಣಾ ಕ್ಷೇತ್ರದಿಂದ ಸಿದ್ದರಾಮ ಯ್ಯನವರಿಗೆ ಟಿಕೆಟ್ ನೀಡಲಾ ಗಿದೆ. ಆದರೆ ಅವರು ಈ ಹಿಂದೆ ಸ್ಪರ್ಧಿಸುತ್ತೇನೆ ಎಂದು ಘೋಷಿಸಿದ್ದ ಕೋಲಾರ ಮತ್ತು ಅವರು ಈಗ ಶಾಸಕರಾಗಿರುವ ಬಾದಾಮಿ ಕ್ಷೇತ್ರದ ಅಭ್ಯರ್ಥಿಯ ಹೆಸರನ್ನು ಇನ್ನೂ ಘೋಷಣೆ ಮಾಡದೆ ಹಾಗೆಯೇ ಇರಿಸಲಾಗಿದೆ.
ಡಿ.ಕೆ ಶಿವಕುಮಾರ್ ಕನಕ ಪುರ, ಲಕ್ಷ್ಮಿ ಹೆಬ್ಬಾಳ್ಕರ್ ಅವರು ಬೆಳಗಾವಿ ಗ್ರಾಮೀಣ ಕ್ಷೇತ್ರ, ಶಾಮನೂರು ಶಿವಶಂಕರಪ್ಪನವರು ದಾವಣಗೆರೆ ದಕ್ಷಿಣ ಕ್ಷೇತ್ರ ಹಾಗೂ ಎಂ. ಬಿ ಪಾಟೀಲ್ ಅವರಿಗೆ ಬಬಲೇಶ್ವರ ಟಿಕೆಟ್ ನೀಡಿ ಪಟ್ಟಿ ಬಿಡುಗಡೆ ಮಾಡಿದೆ. ಚನ್ನಪಟ್ಟಣ ಕ್ಷೇತ್ರದಿಂದ ಯಾರು ಸ್ಪರ್ಧಿಸುತ್ತಾರೆ ಎನ್ನುವ ಕುತೂಹಲ ಇನ್ನೂ ಹಾಗೆಯೇ ಉಳಿದುಕೊಂಡಿದೆ.
ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಿಂದ ಹಾಲಿ ಶಾಸಕ ಬಿ.ಕೆ. ಸಂಗಮೇಶ್ವರ್, ಸಾಗರ ದಿಂದ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಮತ್ತು ಸೊರಬ ದಿಂದ ಮಧು ಬಂಗಾರಪ್ಪ ಅವರ ಹೆಸರುಗಳು ಫೈನಲ್ ಆಗಿವೆ. ಶಿವಮೊಗ್ಗ ನಗರ ,ಶಿವಮೊಗ್ಗ ಗ್ರಮಾಂತರ,ತೀರ್ಥಹಳ್ಳಿ,ಶಿಕಾರಿಪುರ ಕ್ಷೇತ್ರಗಳಿಗೆ ೨ನೇ ಪಟ್ಟಿಯಲ್ಲಿ ಹೆಸರು ಘೋಷಿಸುವ ಸಾಧ್ಯತೆ ಇದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.