ಕ್ರೈಂಜಿಲ್ಲಾ ಸುದ್ದಿತಾಜಾ ಸುದ್ದಿ

ಹಿಟ್ ಅಂಡ್ ರನ್: ಫ್ಲೈಓವರ್ ಅಂಚಿನಲ್ಲಿ ಸಿಲುಕಿ ಒದ್ದಾಡಿದ ಆಟೋ ಚಾಲಕ

Share Below Link

ಶಿವಮೊಗ್ಗ, ಸೆ.೨೬: ನಗರದ ಶೇಷಾದ್ರಿಪುರಂ ರೈಲ್ವೆ ಫ್ಲೈಓವರ್‌ನಲ್ಲಿ ಅತಿವೇಗವಾಗಿ ಬಂದ ಕಾರೊಂದು ಬುಲೆಟ್ ಬೈಕ್ ಹಾಗೂ ಆಟೋಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಶುಕ್ರವಾರ ಸಂಜೆ ನಡೆದಿದೆ. ಅಪಘಾತದ ಬಳಿಕ ಕಾರು ಚಾಲಕ ಸ್ಥಳದಿಂದ ಪರಾರಿಯಾಗಿದ್ದು, ಕೋಟೆ ಠಾಣೆ ಪೊಲೀಸರು ಆತನ ಪತ್ತೆಗೆ ಕ್ರಮ ಕೈಗೊಂಡಿzರೆ.
ಕಾರಿನ ಡಿಕ್ಕಿಯ ರಭಸಕ್ಕೆ ನಿಯಂತ್ರಣ ತಪ್ಪಿದ ಆಟೋ ಫ್ಲೈಓವರ್‌ನಿಂದ ಕೆಳಗಿರುವ ರೈಲ್ವೆ ಹಳಿಗೆ ಬಿದ್ದಿದೆ. ಈ ವೇಳೆ ಆಟೋ ಚಾಲಕ ಜಿಗಿದು ಪ್ರಾಣಾಪಾಯದಿಂದ ಪಾರಾಗಲು ಯತ್ನಿಸಿದ್ದು, ಫ್ಲೈಓವರ್‌ನ ಅಂಚಿನಲ್ಲಿ ಸಿಲುಕಿ ಕೆಳಗೆ ಬೀಳುವ ಸ್ಥಿತಿಯಲ್ಲಿ ಜೋತಾಡುತ್ತಿದ್ದರು. ಇದನ್ನು ಗಮನಿಸಿದ ಸಾರ್ವಜನಿಕರು ತಕ್ಷಣ ನೆರವಿಗೆ ಧಾವಿಸಿ, ಲಾರಿಯೊಂದನ್ನು ಸ್ಥಳಕ್ಕೆ ತರಿಸಿ ಕಾರ್ಯಾಚರಣೆ ನಡೆಸಿ ಚಾಲಕನನ್ನು ಸುರಕ್ಷಿತವಾಗಿ ಮೇಲಕ್ಕೆ ಕರೆತಂದರು.
ಅಪಘಾತದಲ್ಲಿ ಗಾಯಗೊಂಡ ಆಟೋ ಚಾಲಕ ಹಾಗೂ ಬುಲೆಟ್ ಬೈಕ್ ಸವಾರನನ್ನು ಸಾರ್ವಜನಿಕರು ಆಂಬುಲೆನ್ಸ್ ಮೂಲಕ ಆಸ್ಪತ್ರೆಗೆ ದಾಖಲಿಸಿದರು. ಇಬ್ಬರಿಗೂ ಗಂಭೀರ ಗಾಯಗಳಾಗಿದ್ದು, ಚಿಕಿತ್ಸೆ ಮುಂದುವರಿದಿದೆ ಎಂದು ತಿಳಿದುಬಂದಿದೆ.
ಮಾಹಿತಿ ತಿಳಿಯುತ್ತಿದ್ದಂತೆಯೇ ಕೋಟೆ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದರು. ಅಪಘಾತಕ್ಕೆ ಕಾರಣವಾದ ಕಾರು ಹಾಗೂ ಚಾಲಕನ ಪತ್ತೆಗೆ ತನಿಖೆ ಕೈಗೊಂಡಿzರೆ. ಘಟನೆ ಹಿನ್ನೆಲೆಯಲ್ಲಿ ಫ್ಲೈಓವರ್‌ನಲ್ಲಿ ಕೆಲಕಾಲ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತ್ತು.

Leave a Reply

Your email address will not be published. Required fields are marked *