ಕ್ರೈಂಜಿಲ್ಲಾ ಸುದ್ದಿತಾಜಾ ಸುದ್ದಿ

ಗೃಹಿಣಿಯ ಕೊಲೆ : 33.74ಲಕ್ಷ ನಗದು – 2ಬೈಕ್ -1 ಕಾರು ಸಹಿತ 6 ಆರೋಪಿಗಳ ಅರೆಸ್ಟ್…

Share Below Link

ಶಿವಮೊಗ್ಗ: ನೀರಾವರಿ ಇಲಾಖೆಯ ಕಾರ್ಯನಿರ್ವಾಹಕ ಇಂಜಿನಿಯರ್ ಮಲ್ಲಿಕಾರ್ಜುನ್ ಅವರ ಪತ್ನಿ ಕಮಲಮ್ಮ ಅವರನ್ನು ಕೊಲೆ ಮಾಡಿ ನಗದು ದೋಚಿದ್ದ ೬ ಆರೋಪಿಗಳನ್ನು ಪೊಲೀಸರು ಬಂಧಿಸಿ ಅವರಿಂದ ೩೩,೭೪,೮೦೦ ನಗದು ಸೇರಿದಂತೆ ೨ಬೈಕ್, ಒಂದು ಕಾರು ಹಾಗೂ ೭ ಮೊಬೈಲ್‌ಗಳನ್ನು ವಶಕ್ಕೆ ಪಡೆಯ ಲಾಗಿದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಕ್ಷಣಾಧಿಕಾರಿಗಳು, ಮಲ್ಲಿಕಾರ್ಜುನ ಅವರ ಕಾರು ಚಾಲಕನಾಗಿದ್ದ ಹುಣಸೋಡು ತಾಂಡಾದ ಹನುಮಂತ ನಾಯ್ಕ (೨೨), ಗುಂಡಪ್ಪ ಶೆಡ್‌ನ ಪ್ರದೀಪ್ ವಿ. (೨೧), ಅನುಪಿನ ಕಟ್ಟೆ ತಾಂಡಾದ ಅಪ್ಪುನಾಯ್ಕ (೨೧), ಗುಂಡಪ್ಪ ಶೆಡ್‌ನ ಸತೀಶ್ ವಿ.(೨೬), ಅನುಪಿನಕಟ್ಟೆ ತಾಂಡಾದ ರಾಜು ವೈ. ಯಾನೆ ತೀತಾ (೨೪) ಬಂಧಿತ ಆರೋಪಿಗ ಳಾಗಿದ್ದಾರೆ ಎಂದರಲ್ಲದೇ, ಈ ಕೃತ್ಯ ಕ್ಕೆ ಕಾರು ನೀಡಿದ್ದ ಕೌಶಿಕ್ ಎಂಬ ೭ನೇ ಆರೋಪಿ ಯನ್ನು ಕೂಡ ನಿನ್ನೆ ಬಂಧಿಸಲಾಗಿದೆ ಎಂದರು.
ಇಂಜಿನಿಯರ್ ಕೆ.ವಿ. ಮಲ್ಲಿಕಾರ್ಜುನ ಅವರು ತಮ್ಮ ಮಗನ ವೈದ್ಯಕೀಯ ಶಿಕ್ಷಣಕ್ಕೆ ಶುಲ್ಕ ಕಟ್ಟುವ ಸಲುವಾಗಿ ೩೭ ಲಕ್ಷ ರೂ. ಕೈ ಸಾಲ ಪಡೆದು ಮನೆಯಲ್ಲಿ ತಂದಿಟ್ಟಿದ್ದರು. ಈ ಎಲ್ಲಾ ಹಣ ವನ್ನು ಚಾಲಕ ಹನುಮಂತನಾಯ್ಕ ಮೂಲಕವೇ ಸ್ನೇಹಿತರ ಬಳಿಯಿಂದ ತರಿಸಿ ಮನೆಯಲ್ಲಿಟ್ಟಿದ್ದರು. ಹೀಗಾಗಿ ಈ ಹಣ ಲಪಟಾಯಿ ಸುವ ಉದ್ದೇಶದಿಂದ ಹನುಮಂ ತನಾಯ್ಕ ಸ್ನೇಹಿತರೊಂದಿಗೆ ಸೇರಿ ತಂತ್ರ ರೂಪಿಸಿದ್ದರು ಎಂದರು.
ಮಲ್ಲಿಕಾರ್ಜುನ ಅವರು ಗೋವಾಕ್ಕೆ ತೆರಳಿದ ಸಂದರ್ಭ ನೋಡಿಕೊಂಡ ಆರೋಪಿ ಹನು ಮಂತನಾಯ್ಕ ತನ್ನ ಸೋದರನಿಗೆ ಅಪಘಾತವಾಗಿದ್ದು, ಆತನ ಚಿಕಿತ್ಸೆಗೆ ೨ ಸಾವಿರ ಹಣ ಬೇಕೆಂದು ಜೂ.೧೬ರ ರಾತ್ರಿ ಮಲ್ಲಿಕಾರ್ಜುನ ಅವರ ಮನೆಗೆ ಹೋಗಿ ಕಮಲ ಮ್ಮನವರ ಬಳಿ ಕೇಳಿದ್ದ. ಆ ಸಂದ ರ್ಭದಲ್ಲಿ ಹಣ ನೀಡದೆ ಮರು ದಿನ ಬರುವಂತೆ ಹೇಳಿದ್ದರು. ಇದನ್ನು ತನ್ನ ಸ್ನೇಹಿತರಿಗೆ ತಿಳಿಸಿದ ಆರೋಪಿ ಹನುಮಂತನಾಯ್ಕ ಜೂ.೧೭ ರಂದು ರೆಮ್ಯಾಟೋ ಕಂಪನಿಯ ಟೀ ಶರ್ಟ್ ಖರೀದಿಸಿ ಮೂವ ರೂ ಧರಿಸಿಕೊಂಡು ಮನೆಯ ಬಳಿ ಹೋಗಿ ಚಿಕಿತ್ಸೆಗೆ ಹಣ ಕೇಳಿದ್ದಾರೆ. ಕೊಡಲು ಅವರು ನಿರಾಕರಿಸಿ ದ್ದಾರೆ. ನೀರು ಕೊಡಲು ಕಮಲಮ್ಮ ಒಳಗೆ ಹೋಗಲು ತಿರುಗುತ್ತಿದ್ದಂತೆ ಅಪ್ಪು ನಾಯ್ಕ ಹಿಂದೆಯೇ ಒಳಗೆ ಹೋಗಿ ಅವರ ಬಾಯಿ ಒತ್ತಿ ಹಿಡಿಯಲು ಮುಂದಾದಾಗ ಕಮ ಲಮ್ಮ ಪ್ರತಿರೋಧ ವ್ಯಕ್ತಪಡಿಸಿ ದ್ದಾರೆ. ಆಗ ಕಬ್ಬಿಣದ ಚೂಪಾದ ರಾಡಿನಿಂದ ಕುತ್ತಿಗೆಗೆ ಹೊಡೆದು ಸಾಯಿಸಿದ್ದಾನೆ. ಬಳಿಕ ಹಣ ತೆಗೆದು ಕೊಂಡು ಎಲ್ಲರೂ ಪರಾರಿಯಾ ಗಿದ್ದಾಗಿ ಒಪ್ಪಿಕೊಂಡಿರುವು ದಾಗಿ ಹೇಳಿದರು.
ಬಳಿಕ ಎಲ್ಲರೂ ಬೇರೆ ಬೇರೆ ಕಡೆ ತೆರಳಿದ್ದರು. ಹೋಟೆಲ್‌ನಲ್ಲಿ ಉಳಿದು, ಹೊಸ ಮೊಬೈಲ್ ಗಳನ್ನು ಖರೀದಿ ಮಾಡಿದ್ದರು. ಇನ್ನೋರ್ವ ಕೌಶಿಕ್ ಇವರಿಗೆ ಕಾರು ನೀಡಿ ಸಹಾಯ ಮಾಡಿ ದ್ದು, ಆತನ ಮೇಲೆಯೂ ಪ್ರಕರಣ ದಾಖಲಿಸಲಾಗಿದೆ ಎಂದರು.
೩೫ಲಕ್ಷ ರೂ.ನಲ್ಲಿ ೩೩,೭೪, ೮೦೦ ರೂ.ಗಳನ್ನು ವಶಪಡಿಸಿಕೊ ಳ್ಳಲಾಗಿದೆ. ಇದೆ ಜೊತೆಗೆ ಕೃತ್ಯಕ್ಕೆ ಬಳಸಿದ್ದ ಇಂಡಿಕಾ ಕಾರು, ೭ ಮೊಬೈಲ್,೩ಬೈಕ್, ಕೊಲೆ ಮಾಡಿದ ಆಯುಧ ಸೇರಿದಂತೆ ಸುಮಾರು ೪೧,೧೪,೮೦೦ ಮಲ್ಯದ ಹಣ ಮತ್ತು ವಸ್ತುಗಳನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದರು.
ಆರೋಪಿಗಳೆಲ್ಲರು ಕೂಲಿ ಹಾಗೂ ಗಾರೆ ಕೆಲಸ ಮಾಡುವ ವರಾಗಿದ್ದಾರೆ. ಇವರೆಲ್ಲರೂ ಟೀ, ಮದ್ಯದಂಗಡಿ ಗಳನ್ನು ಅಡ್ಡೆಯಾಗಿ ಮಾಡಿಕೊಂಡಿ ದ್ದರು. ಇವರ ಪರಿಚಯ ಮಾಡಿ ಕೊಂಡ ಡ್ರೈವ ರ್ ಹನುಮಂತನಾಯಕ ಮನೆ ಯಲ್ಲಿ ಹಣ ಇರುವುದು ಖಚಿತ. ಇದನ್ನು ದೋಚಬೇಕು ಎಂದು ಪ್ಲಾನ್ ಮಾಡಿದ್ದರು. ಹನುಂತ ನಾಯಕ ಒಂದು ವರ್ಷದಿಂದ ಇಂಜಿನಿಯರ್ ಮಲ್ಲಿಕಾರ್ಜುನಪ್ಪ ಅವರ ಮನೆಯಲ್ಲಿ ಕಾರು ಚಾಲಕ ನಾಗಿ ಕೆಲಸ ಮಾಡುತ್ತಿದ್ದ. ಪ್ರತಿದಿನ ಅವರು ಕೆಲಸಕ್ಕೆ ಕರೆದುಕೊಂಡು ಹೋಗುತ್ತಿದ್ದ. ಹಾಗಾಗಿ ಇವರ ಕುಟುಂಬಕ್ಕೆ ಹತ್ತಿರವಾಗಿದ್ದು, ಅವರ ವಿವರಗಳನ್ನು ತಿಳಿದುಕೊಂ ಡಿದ್ದ ಮತ್ತು ಹಣವನ್ನು ದೋಚಲು ಮುಂಚೆಯೇ ಉಪಾಯ ಮಾಡಿದ್ದ ಎಂದರು.
ದೋಚಿದ ಹಣದಲ್ಲಿ ಎಲ್ಲಾರು ಒಂದೊಂದು ಹೊಸ ಮೊಬೈಲ್ ತೆಗೆದುಕೊಂಡಿದ್ದರು. ಬೇರೆ ಬೇರೆ ಕಡೆ ಪರಾರಿಯಾಗಿ ಲಾಡ್ಜ್‌ಗಳಲ್ಲಿ ವಾಸವಾಗಿದ್ದರು.
ತುಂಗಾನಗರ ಪೊಲೀಸರು ಮತ್ತು ಅಧಿಕಾರಿಗಳ ತನಿಖಾ ತಂಡ ಉತ್ತಮವಾಗಿ ಕೆಲಸ ನಿರ್ವಹಿಸಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅವರಿಗೆ ಪ್ರಶಸ್ತಿ ಪತ್ರಗಳನ್ನು ನೀಡಿ ಅಭಿನಂದಿಸಲಾಗುವುದು ಎಂ ದರು.
ಪತ್ರಿಕಾಗೋಷ್ಟಿಯಲ್ಲಿ ಎಎಸ್‌ಪಿ ಅನಿಲ್ ಕುಮಾರ್ ಭೂಮರೆಡ್ಡಿ, ಡಿವೈಎಸ್ಪಿ ಬಾಲ ರಾಜು, ತುಂಗಾನಗರ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಮಂಜು ನಾಥ್, ಪಿಎಸ್‌ಐ ಕುಮಾರ್, ರಘುವೀರ್, ಸಿಬ್ಬಂದಿ ಗಳಾದ ಕಿರಣ್, ರಾಜು, ಅರುಣ್ ಕುಮಾರ್, ಅಶೋಕ್, ಮೋ ಹನ್, ಕೇಶ್‌ಕುಮಾರ್, ಕಾಂತ ರಾಜ್, ನಾಗಪ್ಪ, ಹರೀಶ್‌ನಾಯ್ಕ ಇನ್ನಿತರರಿದ್ದರು.