ಉದ್ಯೋಗಜಿಲ್ಲಾ ಸುದ್ದಿತಾಜಾ ಸುದ್ದಿ

ಆಳ್ವಾಸ್‌ನಿಂದ ಬೃಹತ್ ಉದ್ಯೋಗ ಮೇಳ

Share Below Link

ಶಿವಮೊಗ್ಗ: ಮೂಡಬಿದರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಜೂನ್ ೭ ಮತ್ತು ೮ ರಂದು ಬೃಹತ್ ಉದ್ಯೋಗ ಮೇಳವನ್ನು ಶಿಕ್ಷಣ ಸಂಸ್ಥೆ ಆವರಣದಲ್ಲಿ ಆಯೋಜಿಸಿದೆ ಎಂದು ಆಳ್ವಾಸ್ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಪ್ರಸಾದ್ ಶೆಟ್ಟಿ ಸುದ್ದಿಗೋಷ್ಟಿಯಲ್ಲಿ ತಿಳಿಸಿದರು.
ಪ್ರತಿಷ್ಠಾನದಿಂದ ಆಯೋಜಿಸ ಲಾಗಿರವ ಉದ್ಯೋಗಮೇಳ ೧೪ನೇ ಮೇಳವಾಗಿದೆ. ಬ್ಯಾಂಕಿಂಗ್, ಹಣಕಾಸು, ಐಟಿ, ಐಟಿಸಿ, ಮ್ಯಾನುಫ್ಯಾಕ್ಚರಿಂಗ್, ಹೆಲ್ತ್ ಕೇರ್, ಫಾರ್ಮಾ, ಆಟೊಮೊಬೈಲ್ಸ್, ಹಾಸ್ಪಿಟಲಿಟಿ ವಗೈರೆಗಳನ್ನು ಪ್ರತಿನಿಧಿಸುವ ಉನ್ನತ ಕಂಪನಿಗಳು ಆಳ್ವಾಸ್ ಪ್ರಗತಿಯಲ್ಲಿ ನೇಮಕಾತಿ ನಡೆಸಲಿವೆ ಎಂದ ಅವರು, ಈ ಕಂಪನಿಗಳು ಪದವಿ ಮತ್ತು ಸ್ನಾತಕೋತ್ತರ ಪದವೀಧರರು, ವೈದ್ಯಕೀಯ, ಪ್ಯಾರಾ ಮೆಡಿಕಲ್, ಇಂಜಿನಿಯರಿಂಗ್, ಕಲಾ, ವಾಣಿಜ್ಯ, ಮ್ಯಾನೇಜ್ ಮೆಂಟ್, ಬೇಸಿಕ್ ಸೈನ್ಸ್, ನರ್ಸಿಂಗ್, ಐಟಿಐ, ಡಿಪ್ಲೊಮಾ, ಪಿಯುಸಿ, ಎಸ್‌ಎಸ್‌ಎಲ್‌ಸಿ ಹಾಗೂ ಇತರ ಅರ್ಹ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉದ್ಯೋಗಾವಕಾಶ ಕಲ್ಪಿಸಲಿವೆ ಎಂದರು.
೨೦೦ಕ್ಕೂ ಅಧಿಕ ಕಂಪನಿಗಳು ಭಾಗವಹಿಸುವ ನಿರೀಕ್ಷೆ ಇದ್ದು, ಹೈದರಾಬಾದ್‌ನ ಫ್ಯಾಕ್ಟ್ ಸೆಟ್, ಇಎಕ್ಸ್‌ಎಲ್ ಸರ್ವಿಸ್, ಮಹೀಂದ್ರಾ ಫೈನಾನ್ಸ್, ಪ್ರತಿಷ್ಠಿತ ಬ್ಯಾಂಕ್ ಗಳಾದ ಹೆಚ್.ಡಿ.ಎಫ್.ಸಿ., ಆಕ್ಸಿಸ್, ಐ.ಡಿ.ಎಫ್.ಸಿ., ಫಸ್ಟ್ ಬ್ಯಾಂಕ್, ಬಂಧನ್ ಬ್ಯಾಂಕ್, ಫ್ಲಿಪ್ ಕಾರ್ಟ್, ಇವೈ ಕಂಪನಿ ಮುಂತಾದ ಪ್ರತಿಷ್ಠಿತ ಕಂಪನಿಗಳು ಭಾಗವಹಿಸಲಿದ್ದು, ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳುವ ಕಂಪನಿಗಳ ಹಾಗೂ ನವೀಕೃತ ಮಾಹಿತಿಗಳನ್ನು ಅಧಿಕೃತ ವೆಬ್ ಸೈಟ್ ಡಿಡಿಡಿ.ZqZomZಜZಠಿಜಿ.ಟಞ ನಲ್ಲಿ ಪಡೆಯಬಹುದಾಗಿದೆ. ಅಭ್ಯರ್ಥಿಗಳು ಈ ವೆಬ್‌ಸೈಟ್‌ನಲ್ಲಿ ಕಡ್ಡಾಯವಾಗಿ ಉಚಿತ ಆನ್‌ಲೈನ್ ನೋಂದಣಿ ಮಾಡಿಕೊಳ್ಳ ಬಹುದಾಗಿದೆ. ಮಾಹಿತಿಗಾಗಿ ೯೦೦೮೯ ೦೭೭೧೬, ೯೬೬೩೧ ೯೦೫೯೦ ಸಂಪರ್ಕಿಸಬಹುದು. ಎಂದವರು ಹೇಳಿದರು. ಗೋಷ್ಠಿಯಲ್ಲಿ ಕೆ.ಆರ್. ನಿತಿನ್ ಉಪಸ್ಥಿತರಿದ್ದರು.

This image has an empty alt attribute; its file name is Arya-coll.gif