ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಸಿದ್ದರಾಮಯ್ಯರನ್ನು ಬಯ್ಯದೆ ಹೋದರೆ ಈಶ್ವರಪ್ಪನವರಿಗೆ ಏಳಿಗೆಯೇ ಇಲ್ಲ: ಆರ್‌ಪಿ ವ್ಯಂಗ್ಯ

Share Below Link

ಶಿವಮೊಗ್ಗ: ಶಿವಮೊಗ್ಗ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಆಯ್ಕೆಗೆ ಸಂಬಂಧಿಸಿದಂತೆ ಪಕ್ಷದ ಹೈಕಮಾಂಡ್ ಕೈಗೊಳ್ಳುವ ತೀರ್ಮಾನಕ್ಕೆ ಬದ್ದರಾಗಿದ್ದೇವೆ ಎಂದು ಕಾಂಗ್ರೆಸ್ ಮುಖಂಡರು ಸುದ್ದಿಗೋಷ್ಟಿಯಲ್ಲಿ ತಿಳಿಸಿದ್ದಾರೆ.
ವಿಧಾನ ಪರಿಷತ್ ಮಾಜಿ ಶಾಸಕ ಆರ್ ಪ್ರಸನ್ನಕುಮಾರ್ ಮಾತನಾಡಿ, ಸಿದ್ದರಾಮಯ್ಯ ಅವರನ್ನು ಬಯ್ಯದೆ ಹೋದರೆ ಈಶ್ವರಪ್ಪನವರಿಗೆ ಏಳಿಗೆಯೇ ಇಲ್ಲ. ಶಾಸಕರಾದವರು, ಉಪಮುಖ್ಯಮಂತ್ರಿಯಾಗಿದ್ದವರು ಎಚ್ಚರದಿಂದ ಮಾತನಾಡಬೇಕು. ಕ್ಷೇತ್ರದಲ್ಲಿ ಈಶ್ವರಪ್ಪ ಅವರು ಯಾವ ಅಭಿವೃದ್ದಿ ಕೆಲಸಗಳನ್ನು ಮಾಡಿಲ್ಲ ಎಂಬುದನ್ನು ಅವರ ಪಕ್ಷದವರೆ ಹೇಳುತ್ತಿದ್ದಾರೆ. ಈಶ್ವರಪ್ಪ ತನ್ನ ಅಸ್ತಿತ್ವನ್ನು ತೋರಿಸಿಕೊಳ್ಳಲು ಸಿದ್ದರಾಮಯ್ಯ ವರನ್ನು ಟೀಕಿಸುತ್ತಿದ್ದಾರೆ ಎಂದು ಈಶ್ವರಪ್ಪ ವಿರುದ್ದ ವಾಗ್ದಾಳಿ ನಡೆಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಜಿ ವಿಧಾನ ಪರಿಷತ್ ಸದಸ್ಯ ಆರ್. ಪ್ರಸನ್ನಕುಮಾರ್, ಪ್ರಚಾರ ಸಮಿತಿ ರಾಜ್ಯ ಸಂಯೋಜಿಕ ಎಸ್.ಪಿ. ದಿನೇಶ್, ಪ್ರಚಾರ ಸಮಿತಿ ಜಿಲ್ಲಾಧ್ಯಕ್ಷ ಎನ್.ರಮೇಶ್ , ಓಬಿಸಿ ವಿಭಾಗದ ರಾಜ್ಯ ಪ್ರಧಾನ ಕಾರ್ಯದರ್ಶಿ ಕಾಶಿವಿಶ್ವನಾಥ್, ಉತ್ತರಬ್ಲಾಕ್ ಅಧ್ಯಕ್ಷ ದೀಪಕ್ ಸಿಂಗ್, ಆಸೀಫ್ ಉಪಸ್ಥಿತರಿದ್ದರು.