ಜಿಲ್ಲಾ ಸುದ್ದಿತಾಜಾ ಸುದ್ದಿ

ಶಿಕ್ಷಕರು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿzರೆ: ಶಾಸಕ ಡಿ.ಜಿ.ಶಾಂತನಗೌಡ

Share Below Link

ಹೊನ್ನಾಳಿ: ಶೇ.೯೯ ದೂರುಗಳಿ ಲ್ಲದೇ ಶಿಕ್ಷಕರು ಅವಳಿ ತಾಲ್ಲೂಕು ಗಳಲ್ಲಿ ಅತ್ಯುತ್ತಮವಾಗಿ ತಮ್ಮ ಸೇವೆ ಸಲ್ಲಿಸುತ್ತಿzರೆ ಎಂದು ಶಾಸಕ ಡಿ.ಜಿ. ಶಾಂತನಗೌಡ ಅವರು ಶಿಕ್ಷಕರ ಕಾರ್ಯವೈಖರಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಶ್ರೀ ಚನ್ನಪ್ಪಸ್ವಾಮಿ ಸಮುದಾಯ ಭವನದಲ್ಲಿ ಶಿಕ್ಷಣ ಇಲಾಖೆ ವತಿಯಿಂದ ಹಮ್ಮಿಕೊಳ್ಳ ಲಾಗಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಶಿಕ್ಷಣ ಇಲಾಖೆಯು ಲಂಚಮುಕ್ತ ಮತ್ತು ರಾಜಕೀಯ ಹಸ್ತಕ್ಷೇಪವಿಲ್ಲದೇ ಕಾರ್ಯ ನಿರ್ವಹಿಸುತ್ತಿರುವ ಏಕೈಕ ಇಲಾಖೆಯಾಗಿದ್ದು ಎ ಶಿಕ್ಷಕರು ತಮ್ಮ ಕರ್ತವ್ಯವನ್ನು ಪ್ರಾಮಾಣಿಕವಾಗಿ ನಿರ್ವಹಿಸು ವಂತೆ ಸಲಹೆ ನೀಡಿದರು.
ಹಳೆಯ ಪಿಂಚಣಿ ಯೋಜನೆ ಯನ್ನು ಮುಂದುವರೆಸುವ ಬಗ್ಗೆ ಸರ್ಕಾರಿ ನೌಕರರ ಬಹು ದಿನಗಳ ಬೇಡಿಕೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮುಂಬರುವ ಬಜೆಟ್‌ನಲ್ಲಿ ಜಾರಿಗೆ ತರುವ ನಿಟ್ಟಿನಲ್ಲಿ ಈಗಾಗಲೇ ಭರವಸೆ ನೀಡಿದ್ದು, ನಾನು ಕೂಡ ಹಳೆಯ ಪಿಂಚಣಿ ಯೋಜನೆ ಸೇರಿ ದಂತೆ ಶಿಕ್ಷಕರ ಎ ಬಹು ಕಾಲದ ಬೇಡಿಕೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿಗಳಿಗೆ ಒತ್ತಾಯಿಸುತ್ತೇನೆ ಎಂದು ಭರವಸೆ ನೀಡಿದರು.
೧೨೨ ವರ್ಷಗಳ ನಂತರ ಭೀಕರ ಬರಗಾಲ ತಲೆದೋರಿದ್ದು ರೈತ ಸಮುದಾಯ ತೀವ್ರ ಸಮಸ್ಯೆ ಎದುರಿಸುತ್ತಿzರೆ ಎಂದು ಆತಂಕ ವ್ಯಕ್ತಪಡಿಸಿದ ಅವರು, ಈ ಹಿಂದೆ ಗೋವಿಂದೇಗೌಡರು ಶಿಕ್ಷಣ ಸಚಿವ ರಾಗಿzಗ ೧.೧೦ ಸಾವಿರ ಶಿಕ್ಷಕರ ನೇಮಕಾತಿಯನ್ನು ಪಾರದರ್ಶಕ ವಾಗಿ ನೇಮಕ ಮಾಡಿದ್ದರು. ಎ ಶಿಕ್ಷಕರು ಶಿಕ್ಷಕರ ದಿನಾಚರಣೆ ಯಂದು ಅವರನ್ನೂ ಸ್ಮರಿಸಬೇಕು ಎಂದು ವಿವರಿಸಿದರು.
ಮಾಜಿ ಶಾಸಕ ಎಂ.ಪಿ. ರೇಣುಕಾಚಾರ್ಯ ಮಾತನಾಡಿ ಶಿಕ್ಷಕರು ಗುಣಾತ್ಮಕ ಮತ್ತು ಮೌಲ್ಯಯುತ ಶಿಕ್ಷಣ ನೀಡುವತ್ತ ಹೆಚ್ಚು ಗಮನ ಹರಿಸಬೇಕಾಗಿ ಸಲಹೆ ನೀಡಿದರು. ನ್ಯಾಮತಿ ತಹಶೀ ಲ್ದಾರ್ ಆರ್.ವಿ. ಕಟ್ಟಿ ಮಾತನಾಡಿ ಒಳ್ಳೆಯ ವ್ಯಕ್ತಿತ್ವ ಹೊಂದಿದ ವ್ಯಕ್ತಿಗಳ ನಿರ್ಮಾಣ ಶಿಕ್ಷಕ ಸಮುದಾಯ ದಿಂದ ಮಾತ್ರವೇ ಸಾಧ್ಯವಿದ್ದು ಈ ನಿಟ್ಟಿನಲ್ಲಿ ಶಿಕ್ಷಕ ಸಮುದಾಯ ಕಾರ್ಯಪ್ರವೃತ್ತರಾಗಬೇಕಿದೆ ಎಂದು ಕಿವಿ ಮಾತು ಹೇಳಿದರು.
ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಆರ್.ಎಸ್. ಪಾಟೀಲ್ ಮಾತನಾಡಿ, ಉತ್ತಮ ರಾಷ್ಟ್ರ ನಿರ್ಮಾಣ ಮಾಡುವಲ್ಲಿ ಶಿಕ್ಷಕರ ಪಾತ್ರ ಮಹತ್ವದಾಗಿದೆ ಈ ನಿಟ್ಟಿನಲ್ಲಿ ಶಿಕ್ಷಕರು ಪ್ರಾಮಾಣಿಕವಾಗಿ ಕಾರ್ಯ ನಿರ್ವಹಿಸಬೇಕೆಂದು ಮನವಿ ಮಾಡಿದರು.
ಬಿಆರ್‌ಸಿ ತಿಪ್ಪೇಶಪ್ಪ ಪ್ರಾಸ್ತಾವಿಕ ವಾಗಿ ಮಾತನಾಡಿ, ಶಿಕ್ಷಕರ ದಿನಾಚರಣೆಯನ್ನು ಹಬ್ಬದ ಸಂಭ್ರಮದೋಪಾದಿಯಲ್ಲಿ ಆಚರಿಸುತ್ತಿದ್ದೇವೆ. ಶಿಕ್ಷಕ ವ್ಯಕ್ತಿಯಲ್ಲ ಸಮಾಜ ಕಟ್ಟುವ ನಿಟ್ಟಿನಲ್ಲಿ ದೊಡ್ಡ ಶಕ್ತಿಯಿದ್ದಂತೆ. ನೈತಿಕ ಶಿಕ್ಷಣ ನೀಡುವತ್ತ ಉರಿಯುತ್ತಿರುವ ಮೇಣದ ಬತ್ತಿಯಂತೆ ವಿದ್ಯಾರ್ಥಿ ಗಳ ಪಾಲಿಗೆ ಬೆಳಕಾಗುವಂತೆ ತಮ್ಮ ಕರ್ತವ್ಯವನ್ನು ಮಾಡಬೇಕೆಂದು ಇಂದಿನಿಂದ ಸಂಕಲ್ಪ ಮಾಡುವಂತೆ ಸಲಹೆ ನೀಡಿದರು.
ಹಿರೇಕಲ್ಮಠದ ಒಡೆಯರ್ ಡಾ. ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ಸಾನಿಧ್ಯ ವಹಿಸಿ ಆರ್ಶೀವಚನ ನೀಡಿದರು.
ಜಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಉಪಾಧ್ಯಕ್ಷ ಎಚ್.ಕೆ. ಚಂದ್ರಶೇಖರ್ ಅವರು ಶಿಕ್ಷಕರ ದಿನಾಚರಣೆ ಪ್ರಯುಕ್ತ ಶಿಕ್ಷಕರಿಗಾಗಿ ಏರ್ಪಡಿಸಿದ್ದ ಆಟೋಟ ಸ್ಪರ್ಧೆಗಳಲ್ಲಿ ವಿಜೇತ ಶಿಕ್ಷಕ-ಶಿಕ್ಷಕಿಯರಿಗೆ ಬಹುಮಾನ ವಿತರಣಾ ಕಾರ್ಯಕ್ರಮವನ್ನು ನಡೆಸಿಕೊಟ್ಟರು.
ಬಿಆರ್‌ಪಿ ಪಿ.ಎಸ್. ಚಂದ್ರ ಶೇಖರ್ ಅವರು ನಿವೃತ್ತ ಶಿಕ್ಷಕರಿಗೆ ಮತ್ತು ಕಳೆದ ವರ್ಷ ಉತ್ತಮ ಶಿಕ್ಷಕ ಪ್ರಶಸ್ತಿ ಪಡೆದ ಶಿಕ್ಷಕರಿಗೆ ಸನ್ಮಾನ ಕಾರ್ಯಕ್ರಮವನ್ನು ನಡೆಸಿಕೊಟ್ಟರು. ಸ.ಪ್ರ.ದ. ಕಾಲೇಜಿನ ಪ್ರಾಂಶುಪಾಲ ಜಿ.ಬಿ.ಧನಂಜಯ ಉಪನ್ಯಾಸ ಮಾಡಿದರು.
ಬಿಇಒ ಎಸ್.ಸಿ. ನಂಜರಾಜ್ ಸ್ವಾಗತಿಸಿ, ತಾಲ್ಲೂಕು ದೈಹಿಕ ಶಿಕ್ಷಣಾಧಿಕಾರಿ ಕೆ.ಎಸ್.ಈಶ್ವರಪ್ಪ ನಿರೂಪಿಸಿ,ಅಕ್ಷರ ದಾಸೋಹದ ಸಹಾಯಕ ನಿರ್ದೇಶಕ ಕೆ.ಆರ್. ರುದ್ರಪ್ಪ ವಂದಿಸಿದರು.
ಬೆಳಿಗ್ಗೆ ಬಿಇಒ ಕಛೇರಿಯಿಂದ ವೀರ ಸಂಗೊಳ್ಳಿ ರಾಯಣ್ಣ ವೃತ್ತದ ಮೂಲಕ ವಿವಿಧ ಕಲಾ ತಂಡಗ ಳೊಂದಿಗೆ ಡಾ| ಸರ್ವಪಲ್ಲಿ ರಾಧಾP ಷ್ಣ ಅವರ ಭಾವಚಿತ್ರದ ಮೆರವಣಿ ಗೆಯನ್ನು ನಡೆಸಲಾಯಿತು.
ಹೊನ್ನಾಳಿ ತಾಲ್ಲೂಕಿನ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಆಧ್ಯಕ್ಷೆ ನೀಲಮ್ಮ, ನ್ಯಾಮತಿ ತಾಲ್ಲೂಕಿನ ಆಧ್ಯಕ್ಷ ಬಸವರಾಜ್ ಬಾವಿ, ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸೌಹಾರ್ದ ಸಹಕಾರಿ ಸಂಘ ತೀರ್ಥಹಳ್ಳಿ ಅವಳಿ ತಾಲ್ಲೂಕುಗಳ ಅಧ್ಯಕ್ಷ ಎಂ.ಕರಿಬಸವಯ್ಯ,ಸಾವಿತ್ರಿ ಭಾಪುಲೆ ಶಿಕ್ಷಕಿಯರ ಸಂಘದ ಅಧ್ಯಕ್ಷೆ ಷಹಜನ್, ಪ್ರೌಢಶಾಲಾ ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಎನ್.ಎಂ. ದೀಪಕ್, ಹೊನ್ನಾಳಿ ತಾಲ್ಲೂಕು ಪ್ರೌ.ಶಿ. ಸಂಘದ ಅಧ್ಯಕ್ಷ ಎನ್. ಎಚ್. ರವಿಗೌಡ್ರು,ಜಿಜೆಸಿ ಉಪ ಪ್ರಾಂಶುಪಾಲ ಡಿ.ಜಿ. ರಂಗನಾಥ್, ನ್ಯಾಮತಿ ಪ್ರೌ.ಶಿ. ಸಂಘದ ಅಧ್ಯಕ್ಷ ಆಂಜನೇಯ, ಪಿಡಿಒ ಸಂಘದ ಅಧ್ಯಕ್ಷ ಅರುಣ್ ಕುಮಾರ್, ಬಿಆರ್‌ಪಿ ಅರುಣ್ ಕುಮಾರ್, ಎನ್.ಪಿ.ಎಸ್. ಸಂಘದ ಅಧ್ಯಕ್ಷ ಪ್ರಕಾಶ್ ನಾಯ್ಕ್, ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಧನಂಜಯ್, ವೃತ್ತಿ ಶಿಕ್ಷಕರ ಸಂಘದ ಅಧ್ಯಕ್ಷ ಎಚ್.ಕೆ.ರಮೇಶ್ ಮತ್ತಿತರರು ಉಪಸ್ಥಿತರಿದ್ದರು.