ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಗ್ರಾಮಗಳು ಅಭಿವೃದ್ಧಿಯಾದರೆ ದೇಶ ಅಭಿವೃದ್ಧಿಯಾದಂತೆ…

Share Below Link

ದಾವಣಗೆರೆ : ಗ್ರಾಮಗಳು ಅಭಿವೃದ್ಧಿಯಾದರೆ ದೇಶ ಅಭಿವದ್ಧಿ ಯಾದಂತೆ ಎಂಬ ಕಲ್ಪನೆಯಲ್ಲಿ ಪ್ರಧಾನಿ ಮೋದಿ ಅವರು ಗ್ರಾಮಾಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಿದ್ದು, ಪ್ರತಿಯೊಂದು ಗ್ರಾಮಕ್ಕೆ ರಸ್ತೆ, ಚರಂಡಿ, ಡಿಜಿಟಲ್ ಗ್ರಂಥಾಲಯ ಸೇರಿದಂತೆ ಮೂಲ ಸೌಕರ್ಯ ಕಲ್ಪಿಸಲು ಅನೇಕ ಯೋಜನೆಗಳನ್ನು ಜರಿಗೆ ತಂದಿzರೆ ಎಂದು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀಮತಿ ಗಾಯಿತ್ರಿ ಸಿದ್ದೇಶ್ವರ್ ತಿಳಿಸಿದರು.
ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಹದಡಿ ಜಿಪಂ ವ್ಯಾಪ್ತಿಯ ಗ್ರಾಮಗಳಲ್ಲಿ ಮತಬೇಟೆ ನಡೆಸಿ ಮಾತನಾಡಿದ ಅವರು, ಹದಡಿ ಗ್ರಾಮದಲ್ಲಿರುವ ಕೆರೆ ಅಭಿವೃದ್ಧಿಗೆ ಕ್ರಮ ಕೈಗೊಳ್ಳುವ ಜೊತೆಗೆ ವ್ಯಾಪ್ತಿಯ ಎಲ್ಲ ಗ್ರಾಮ ಗಳಿಗೆ ಮೂಲಭೂತ ಸೌಕರ್ಯ ಒದಗಿಸಲು ಯೋಜನೆ ರೂಪಿಸಲಾ ಗುತ್ತಿದ್ದು, ಜನ ನನಗೆ ಬಹುಮತ ನೀಡಿ ಗೆಲ್ಲಿಸಿ, ಸಂಸತ್ತಿಗೆ ಕಳುಹಿ ಬೇಕೆಂದು ಮನವಿ ಮಾಡಿದರು.
ಶಿರಮಗೊಂಡನಹಳ್ಳಿ ಗ್ರಾಮದಲ್ಲಿ ಮಾಜಿ ಸಚಿವ ಎಸ್.ಎ. ರವೀಂದ್ರನಾಥ್ ನಿವಾಸಕ್ಕೆ ಭೇಟಿ ನೀಡಿ ಯೋಗಕ್ಷೇಮ ವಿಚಾರಿಸಿದರು. ಬಳಿಕ ರವೀಂದ್ರನಾಥ್ ಅವರ ಸಾರಥ್ಯದಲ್ಲಿ ಶಿರಮಗೊಂಡನಹಳ್ಳಿ ಸೇರಿದಂತೆ ಅಕ್ಕಪಕ್ಕದ ಗ್ರಾಮದಲ್ಲಿ ಜೊತೆಯಾಗಿ ಪ್ರಚಾರ ನಡೆಸಿದರು.