ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಶೀಘ್ರವೇ ತಾಲೂಕಿನಲ್ಲಿ ನೀರಾವರಿ ಯೋಜನೆ ಅನುಷ್ಠಾನ…

Share Below Link

ಹೊನ್ನಾಳಿ: ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಡಾ| ಪ್ರಭಾ ಮಲ್ಲಿಕಾರ್ಜುನ್ ಅವರನ್ನು ಗೆಲ್ಲಿಸಿದರೆ ನೀರಾವರಿ ಯೋಜನೆ ಗಳನ್ನು ಅನುಷ್ಠಾನಗೊಳಿಸುವ ಮೂಲಕ ರೈತರ ಶ್ರೇಯೋಭಿವೃದ್ಧಿಗೆ ಶ್ರಮಿಸುವುದಾಗಿ ಸಚಿವ ಎಸ್. ಎಸ್. ಮಲ್ಲಿಕಾರ್ಜುನ್ ಭರವಸೆ ನೀಡಿದರು.
ತಾಲೂಕಿನ ಸಾಸ್ವೆಹಳ್ಳಿಯಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಎ ಕೆರೆಗಳನ್ನೂ ತುಂಬಿಸುವ ಮೂಲಕ ಎಲ್ಲಾ ಹಳ್ಳಿಗಳಿಗೂ ನೀರು ಪೂರೈಕೆ ಮಾಡುವುದು ನಮ್ಮ ಗುರಿಯಾಗಿದೆ. ಅಡಿಕೆ ತೋಟಗಳು ಸೇರಿದಂತೆ ಕೃಷಿ ಭೂಮಿಗೆ ನೀರು ಲಭಿಸುವಂತಾಗಬೇಕು. ಕೆರೆ-ಕಟ್ಟೆ ಗಳು ತುಂಬಿದರೆ ಅಂತರ್ಜಲ ವೃದ್ಧಿಯಾಗಿ ಎಲ್ಲರಿಗೂ ಅನುಕೂಲ ವಾಗುತ್ತದೆ ಎಂದು ತಿಳಿಸಿದರು.


ನಿರುದ್ಯೋಗ ನಿವಾರಿಸುವ ನಿಟ್ಟಿನಲ್ಲಿ ನಾವು ಶ್ರಮಿಸುತ್ತೇವೆ. ಪದವಿ ಪೂರೈಸಿ ಹೊರಬರುವ ಯುವಜನರಿಗೆ ತಕ್ಷಣ ಉದ್ಯೋಗ ಲಭಿಸಿದರೆ ಒಳಿತಾಗುತ್ತದೆ. ಮುಂದಿನ ದಿನಗಳಲ್ಲಿ ಆ ನಿಟ್ಟಿನಲ್ಲಿ ಕಾರ್ಯಪ್ರವತ್ತರಾಗುತ್ತೇವೆ ಎಂದು ಹೇಳಿದರು.
ಎಸ್‌ಎಸ್ ಹೆಲ್ತ್ ಕೇರ್ ಟ್ರಸ್ಟ್ ಮೂಲಕ ಡಾ| ಪ್ರಭಾ ಅವರು ಜನತೆಗೆ ಉಚಿತವಾಗಿ ವೈದ್ಯಕೀಯ ಸವಲತ್ತುಗಳನ್ನು ನೀಡುವ ಮೂಲಕ ಆರೋಗ್ಯ ರಕ್ಷಣೆಗೆ ಶ್ರಮಿಸುತ್ತಿzರೆ. ಗ್ರಾಮೀಣ ಭಾಗಗಳಲ್ಲಿ ಆರೋಗ್ಯ ತಪಾಸಣಾ ಶಿಬಿರಗಳನ್ನು ಏರ್ಪಡಿಸಿ, ಮಹಿಳೆಯರ ಆರೋಗ್ಯ ರಕ್ಷಣೆಗೆ ಮುಂದಾಗಿ zರೆ. ಆರೋಗ್ಯ ತಪಾಸಣೆ-ವಿವಿಧ ಪರೀಕ್ಷೆಗಳಿಗೆ ಸಂಕೋಚಗೊಂಡು ಮಹಿಳೆಯರು ಸಮಸ್ಯೆಗಳನ್ನು ಅನುಭವಿಸುತ್ತಾರೆ. ಇಂಥ ಶಿಬಿರಗಳಲ್ಲಿ ಸ್ತನ ಕ್ಯಾನ್ಸರ್‌ನಂಥ ಪ್ರಕರಣಗಳನ್ನು ಪ್ರಾರಂಭದ ಪತ್ತೆ ಹಚ್ಚಿ ಚಿಕಿತ್ಸೆ ನೀಡುವ ಮೂಲಕ ಡಾ|ಪ್ರಭಾ ಮಹಿಳೆಯರಿಗೆ ಆಶಾಕಿರಣವಾಗಿzರೆ ಎಂದು ವಿವರಿಸಿದರು.
ಶಾಸಕ ಡಿ.ಜಿ. ಶಾಂತನಗೌಡ ಮಾತನಾಡಿ, ಪಂಚ ಗ್ಯಾರಂಟಿ ಯೋಜನೆಗಳ ಅಭೂತಪೂರ್ವ ಯಶಸ್ಸಿನಿಂದಾಗಿ ಬಿಜೆಪಿಗೆ ನಡುಕ ಶುರುವಾಗಿದೆ. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಡಾ|ಪ್ರಭಾ ಗೆಲುವು ಶತಸ್ಸಿದ್ಧವಾಗಿದೆ. ಕುಡಿಯುವ ನೀರು ಪೂರೈಕೆಗೆ ಹೊನ್ನಾಳಿ ಕ್ಷೇತ್ರಕ್ಕೆ ಮೂರು ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ. ನೀತಿ ಸಂಹಿತೆಯ ಕಾರಣದಿಂದಾಗಿ ಇನ್ನೂ ಎರಡು ತಿಂಗಳುಗಳ ಕಾಲ ಬೇರೆ ಅಭಿವದ್ಧಿ ಕಾಮಗಾರಿಗಳನ್ನು ಚಾಲನೆ ಮಾಡುವಂತಿಲ್ಲ. ಆದ್ದರಿಂದ, ಮುಂದಿನ ದಿನಗಳಲ್ಲಿ ಹೊನ್ನಾಳಿ ಕ್ಷೇತ್ರದಲ್ಲಿ ಅಭಿವೃದ್ಧಿ ಪರ್ವ ಪುನರಾರಂಭಗೊಳ್ಳಲಿದೆ ಎಂದು ತಿಳಿಸಿದರು.
ಸಾಸ್ವೆಹಳ್ಳಿ ಏತ ನೀರಾವರಿ ಯೋಜನೆ ಶೇ.೯೯ರಷ್ಟು ಪೂರ್ಣ ಗೊಂಡಿದ್ದು, ಮುಂದಿನ ದಿನಗಳಲ್ಲಿ ಡಾ.ಸ್ವಾಮೀಜಿ ಸಾನಿಧ್ಯದಲ್ಲಿ, ಲೋಕಸಭಾ ಸದಸ್ಯೆ ಡಾ|ಪ್ರಭಾ, ಸಚಿವ ಮಲ್ಲಿಕಾರ್ಜುನ್ ಹಾಗೂ ಇತರ ನಾಯಕರ ಸಮ್ಮುಖದಲ್ಲಿ ಯೋಜನೆ ಲೋಕಾರ್ಪಣೆ ನಡೆಸುತ್ತೇವೆ ಎಂದು ಹೇಳಿದರು.
ಮಾಜಿ ಶಾಸಕ ಡಾ.ಡಿ.ಬಿ. ಗಂಗಪ್ಪ, ಜಿ ಕಾಂಗ್ರೆಸ್ ಅಧ್ಯಕ್ಷ ಮಂಜಪ್ಪ, ಮುಖಂಡರಾದ ಬಿ. ಸಿದ್ಧಪ್ಪ, ಎ.ಆರ್. ಚಂದ್ರಶೇಖರಪ್ಪ, ಎಚ್.ಎ. ಗದ್ದಿಗೇಶ್, ಕೃಷ್ಣಮೂರ್ತಿ, ಆರ್. ನಾಗಪ್ಪ ಇತರರು ಮಾತನಾಡಿದರು.