ಜಿಲ್ಲಾ ಸುದ್ದಿತಾಜಾ ಸುದ್ದಿ

ಭಾರತ ಜಾಗತಿಕವಾಗಿ ಮುಂಚೂಣಿಗೆ ಬರಲು ಸ್ವಾತಂತ್ರ್ಯ ಹೋರಾಟಗಾರರ ಕೊಡಿಗೆ ಕಾರಣ: ಶಾಲಿನಿ

Share Below Link

ಶಿವಮೊಗ್ಗ : ಮೈತ್ರಿ ಶಿಕ್ಷಣ ಮಹಾವಿದ್ಯಾಲಯ ದಲ್ಲಿ ೭೯ನೇ ಸ್ವಾತಂತ್ರ್ಯೋತ್ಸವ ಆಚರಿಸಲಾಯಿತು.
ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಪ್ರಾಂಶುಪಾಲೆ ಡಾ| ಶಾಲಿನಿ ಅವರು, ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಮತ್ತು ಬಲಿದಾನದ ಫಲವಾಗಿ ಭಾರತ ಇಂದು ಸ್ವಾತಂತ್ರ್ಯ ದಿನವನ್ನು ಹೆಮ್ಮೆಯಿಂದ ಆಚರಿಸುತ್ತಿದ್ದು, ವಿಶ್ವಗುರುವಾಗಿ ಜಾಗತಿಕವಾಗಿ ಮುಂಚೂಣಿಗೆ ಬಂದು ನಿಂತಿದೆ ಎಂದು ಹೇಳಿದರು.


ಭಾರತೀಯರಾದ ನೇವೆಲ್ಲರೂ ಸ್ವಾವಲಂಭಿ ದೇಶ ನಿರ್ಮಾಣಕ್ಕಾಗಿ ಸದಾ ದೇಶಸೇವೆಯಲ್ಲಿ ನಮ್ಮನ್ನು ತೊಡಗಿಸಿಕೊಳ್ಳಬೇಕು. ದುಡಿದ ಹಣದಲ್ಲಿ ಸ್ವಲ್ಪವನ್ನು ದೀನ ದುರ್ಬಲರಿಗೆ ನೆರವು ನೀಡಲು ಮೀಸಲಿಟ್ಟು, ಸದೃಢ ಭಾರತ ನಿರ್ಮಾಣಕ್ಕೆ ಕೈಜೋಡಿಸಬೇಕೆಂದು ಕರೆ ನೀಡಿದರು.
ಮೈತ್ರಿ ಕಾಲೇಜ್ ಆಫ್ ನರ್ಸಿಂಗ್‌ನ ಪ್ರಾಂಶುಪಾಲರಾದ ಡಾ.ಶೃತಿ ಅವರು ಮಾತನಾಡಿ, ಪ್ರಸ್ತುತ ಯುವ ಜನತೆಯು ವಿಜ್ಞಾನ ಮತ್ತು ಮಾಹಿತಿ ತಂತ್ರಜ್ಞಾನ ಕ್ಷೇತ್ರ ದಲ್ಲಿ ಸಕ್ರಿಯವಾಗಿ ತೊಡಗಿಕೊಂಡು ನಮ್ಮ ದೇಶವನ್ನು ಹೊಸ ಜಾಗತಿಕ ಆವಿಷ್ಕಾರದೆಡೆಗೆ ಕೊಂಡೊಯ್ಯ ಬೇಕೆಂದು ಕರೆ ನೀಡಿದರು.
ಮೈತ್ರಿ ಶಿಕ್ಷಣ ಸಮೂಹದ ಬೋಧಕ, ಬೋಧಕೇತರ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಉಪನ್ಯಾಸಕಿ ಶ್ರೀಮತಿ ಮಮತ ಸ್ವಾಗತಿಸಿ, ನಿರೂಪಿಸಿದರು. ಕೊನೆಯಲ್ಲಿ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.