ಜಿಲ್ಲಾ ಸುದ್ದಿತಾಜಾ ಸುದ್ದಿಶಿಕ್ಷಣ

ವಿದ್ಯಾರ್ಥಿಗಳಿಗೆ ಉತ್ತಮ ಬದುಕು ರೂಪಿಸಿಕೊಳ್ಳುವಂತೆ ಮಾಡುವ ಜವಾಬ್ದಾರಿ ಶಿಕ್ಷಕರ ಮೇಲಿದೆ…

Share Below Link

ಶಿಕಾರಿಪುರ : ಸಮಾಜದಲ್ಲಿ ಎಲ್ಲ ವೃತ್ತಿಗಿಂತ ಶಿಕ್ಷಕ ವೃತ್ತಿ ಅತ್ಯಂತ ಪವಿತ್ರವಾಗಿದ್ದು, ವಿದ್ಯಾರ್ಥಿಗಳಿಗೆ ನೈತಿಕ ಶಿಕ್ಷಣದ ಮೂಲಕ ಉತ್ತಮ ಭವಿಷ್ಯ ರೂಪಿಸಿ ದೇಶಕ್ಕಾಗಿ ಬದುಕುವುದನ್ನು ಹೇಳಿಕೊಡಬೇಕಾಗಿದೆ ಎಂದು ಸಂಸದ ಬಿ.ವೈ ರಾಘವೇಂದ್ರ ಹೇಳಿದರು.
ಪಟ್ಟಣದ ಸಾಂಸ್ಕೃತಿಕ ಭವನದಲ್ಲಿ ಶಿಕ್ಷಣ ಇಲಾಖೆ, ಶಿಕಾರಿಪುರ ತಾಲೂಕು ಶಿಕ್ಷಕರ ದಿನಾಚರಣೆ ಸಮಿತಿ ವತಿಯಿಂದ ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಶಿಕ್ಷಕ ವೃತ್ತಿಗೆ ಸಮಾಜದಲ್ಲಿ ಬಹು ಮಹತ್ವವಾದ ಸ್ಥಾನವಿದ್ದು, eನ ನೀಡುವ ಪ್ರತಿಯೊಬ್ಬರೂ ಗುರುವಿನ ಸ್ಥಾನದಲ್ಲಿದ್ದು ಎಲ್ಲರೂ ಪ್ರಾತಃಸ್ಮರಣೀಯರಲ್ಲದೇ, ಮಕ್ಕಳಿಗೆ ಕೇವಲ ಪಾಠದ ಮೂಲಕ ಪರೀಕ್ಷೆಗೆ ಸಜ್ಜುಗೊಳಿಸುವುದು ಮಾತ್ರವಲ್ಲದೆ ಕಲಿಕೆಯ ಬಗ್ಗೆ ಆಸಕ್ತಿ, ಉತ್ಸಾಹ ಹೆಚ್ಚಿಸುವ ಬಗ್ಗೆ ಶಿಕ್ಷಕರು ಹೆಚ್ಚಿನ ಗಮನ ನೀಡಬೇಕಾಗಿದೆ ಈ ಸಮಾಜ ಶಿಕ್ಷಕರಿಂದ ಅತಿ ಹೆಚ್ಚಿನ ನಿರೀಕ್ಷೆ ಹೊಂದಿದ್ದು ವಿದ್ಯಾರ್ಥಿಗಳಿಗೆ ಪಾಠದ ಜತೆಗೆ ನೈತಿಕ ಶಿಕ್ಷಣದ ಮೂಲಕ ಸಂಸ್ಕಾರಯುತ ಪ್ರಜೆಯ ನ್ನಾಗಿಸಿ ದೇಶಕ್ಕಾಗಿ ಬದುಕುವುದನ್ನು ಹೇಳಿಕೊಡಬೇಕಾಗಿದೆ ಎಂದರು.
ಪ್ರತಿ ವಿದ್ಯಾರ್ಥಿಯಲ್ಲಿ ಆತ್ಮವಿಶ್ವಾಸ ಹೆಚ್ಚಳದ ಮೂಲಕ ಭವಿಷ್ಯವನ್ನು ಧೈರ್ಯದಿಂದ ಎದುರಿಸುವ ಬಗ್ಗೆ ಸಜ್ಜುಗೊಳಿಸ ಬೇಕಾಗಿದೆ ಎಂದ ಅವರು, ಈ ಬಾರಿಯ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ತಾಲೂಕಿಗೆ ಅತ್ಯುತ್ತಮ ಫಲಿತಾಂಶ ಲಭಿಸು ವಂತೆ ಹೆಚ್ಚು ಶ್ರಮವಹಿಸುವಂತೆ ತಿಳಿಸಿದರು.


ವಿಧಾನ ಪರಿಷತ್ ಸದಸ್ಯ ಧನಂಜಯ ಸರ್ಜಿ ಅವರು ಮಾತನಾಡಿ, ವಿದ್ಯಾರ್ಥಿಗಳನ್ನು ಸರಿದಾರಿಗೆ ಕೊಂಡೊಯ್ಯುವ ಜವಾಬ್ದಾರಿ ಶಿಕ್ಷಕರ ಮುಂದಿದ್ದು ಕತ್ತಲೆಯಿಂದ ಬೆಳಕಿನ ಕಡೆ ಕರೆದೊಯ್ಯುವ ಶಿಕ್ಷಕರು ತರಗತಿ ಯಲ್ಲಿ ಒತ್ತಡಕ್ಕೆ ಒಳಗಾಗದಂತೆ ತಿಳಿಸಿ ಒತ್ತಡ ಮುಕ್ತ ಬದುಕಿಗೆ ಯೋಗ ನಿದ್ರೆ ಸಹಕಾರಿಯಾಗಿದೆ ಎಂದರು.
ತಾಲೂಕು ಗ್ಯಾರೆಂಟಿ ಯೋಜನೆ ಸಮಿತಿ ಅಧ್ಯಕ್ಷ ನಾಗರಾಜಗೌಡ ಮಾತನಾಡಿ, ಗ್ಯಾರೆಂಟಿ ಯೋಜನೆಯಿಂದಾಗಿ ಗ್ರಾಮೀಣ ಭಾಗದಲ್ಲಿ ಶೈಕ್ಷಣಿಕ ಪ್ರಗತಿ ಮೂಲಕ ಸಾಮಾಜಿಕ ಕ್ರಾಂತಿಗೆ ಕಾರಣವಾಗಿದೆ. ತಾಲೂಕಿನ ನೂತನ ಕೆಎಸ್‌ಆರ್‌ಟಿಸಿ ಡಿಪೋದಲ್ಲಿ ಕೇವಲ ೩೦ ಬಸ್‌ಗಳಿದ್ದು ಹಲವು ಬಸ್ ಸಂಚರಿಸಲು ಯೋಗ್ಯವಾಗಿಲ್ಲ ಸಂಸದರು ವಿಮಾನ, ರೈಲ್ವೆ ಜತೆಗೆ ಬಸ್ ಬಗ್ಗೆ ಹೆಚ್ಚು ಗಮನ ಹರಿಸಬೇಕು ಎಂದು ತಿಳಿಸಿ ಈಗಾಗಲೇ ಮುಖ್ಯಮಂತ್ರಿಗಳು ೭ನೇ ವೇತನ ಆಯೋಗದ ವರದಿ ಯಥಾವತ್ ಜರಿಗೊಳಿಸಿದ್ದು ಶಿಕ್ಷಕರ ಬೇಡಿಕೆಯನ್ನು ಈಡೇರಿಸುವ ಭರವಸೆಯನ್ನು ಶಿಕ್ಷಣ ಸಚಿವರು ನೀಡಿzರೆ ಎಂದು ತಿಳಿಸಿದರು.
ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಸಕ ವಿಜಯೇಂದ್ರ, ಶಿಕ್ಷಣ ಕೇವಲ ಉದ್ಯೋಗಕ್ಕಾಗಿ ಮಾತ್ರವಲ್ಲದೆ ಸಂಸ್ಕಾರ ರೂಪಿಸಲು ಅತ್ಯಂತ ಅವಶ್ಯಕವಾಗಿದೆ ಮಾನವೀಯ ಮಲ್ಯ ಬೆಳೆಸುವ ಶಿಕ್ಷಣ ಇಂದಿನ ತುರ್ತು ಅಗತ್ಯವಾಗಿದ್ದು ಕೌಶಲ ಕಲಿಕೆ ಮೂಲಕ ಸ್ವಯಂ ಉದ್ಯೋಗ ಕೈಗೊಳ್ಳುವ ರೀತಿಯ ಶಿಕ್ಷಣಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡಬೇಕಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಶಿಕ್ಷಕ ಆರ್. ಎಂ ಘಾಸಿ, ಕೊಟ್ರೇಶ್ವರಪ್ಪ, ಮಾಲತೇಶ್ ಸಂಗ್ರಹದ ನಮ್ಮ ಹೆಮ್ಮೆಯ ಶಿಕಾರಿಪುರ ಪುಸ್ತಕ ಬಿಡುಗಡೆಗೊಳಿಸಲಾಯಿತು. ನಿವೃತ್ತ ಶಿಕ್ಷಕರನ್ನು ಸನ್ಮಾನಿಸಲಾಯಿತು. ಪುರಸಭಾಧ್ಯಕ್ಷೆ ಶೈಲಾ ಮಡ್ಡಿ, ಉಪಾಧ್ಯಕ್ಷೆ ರೂಪ ಮಂಜುನಾಥ್, ತಾ.ಪಂ ಪ್ರಭಾರಿ ಇಒ ಕಿರಣ್ ಕುಮಾರ್ ಹರ್ತಿ, ಬಿಇಒ ಲೋಕೇಶಪ್ಪ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಮಧುಕೇಶ್ವರ್, ರಾಜ್ಯ ಪ್ರೌಢ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಸಿದ್ದಬಸಪ್ಪ, ಜಿ ಸಂಘದ ಅಧ್ಯಕ್ಷ ರುದ್ರಪ್ಪ, ಗೌರವಾಧ್ಯಕ್ಷ ಬಿ.ಆರ್ ಮಂಜಪ್ಪ, ತಾಲೂಕು ಘಟಕದ ಅಧ್ಯಕ್ಷ ಚಂದ್ರಶೇಖರ್, ಮಾಜಿ ಅಧ್ಯಕ್ಷ ಚನ್ನೇಶ್, ಎಂ.ಜಿ ಪ್ರಕಾಶ್, ಬಸವನಗೌಡ ಕೊಣ್ತಿ ಮತ್ತಿತರರು ಉಪಸ್ಥಿತರಿದ್ದರು.