ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಜ.4: ರಾಮಭಕ್ತರ ಬಂಧನ ಖಂಡಿಸಿ ಬಿಜೆಪಿಯಿಂದ ಬೃಹತ್ ಪ್ರತಿಭಟನೆ…

Share Below Link

ಶಿವಮೊಗ್ಗ: ಅಯೋಧ್ಯೆಯಲ್ಲಿ ನಡೆದಿದ್ದ ಕರ ಸೇವೆಯಲ್ಲಿ ಪಾಲ್ಗೊಂಡಿದ್ದ ರಾಮ ಭಕ್ತರ ಬಂಧನ ಖಂಡಿಸಿ ಜಿಲ್ಲಾ ಬಿಜೆಪಿ ವತಿಯಿಂದ ಜ.೪ ರಂದು ಬೆಳಿಗ್ಗೆ ೧೧ ಗಂಟೆಗೆ ನಗರದ ಬಸ್ ನಿಲ್ದಾಣ ವೃತ್ತದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು, ಇದರಲ್ಲಿ ಸಂಸದ ಬಿ.ವೈ. ರಾಘವೇಂದ್ರ, ಶಾಸಕರುಗಳಾದ ಎಸ್.ಎನ್. ಚನ್ನಬಸಪ್ಪ, ರುದ್ರೇಗೌಡರು, ಡಿ.ಎಸ್.ಅರುಣ್, ಜಿಲ್ಲಾ ಬಿಜೆಪಿ ಅಧಕ್ಷ ಟಿ.ಡಿ. ಮೇಘರಾಜ್ ಸೇರಿದಂತೆ ಹಲವಾರು ಪ್ರಮುಖರು ಪಾಲ್ಗೊಳ್ಳಲಿ ದ್ದಾರೆಂದು ನಗರ ಬಿಜೆಪಿ ಅಧಕ್ಷ ಜಗದೀಶ್ ಸುದ್ದಿಗೋಷ್ಟಿಯಲ್ಲಿ ತಿಳಿಸಿದರು.
ಅಯೋಧ್ಯೆ ಕರ ಸೇವೆಯಲ್ಲಿ ಪಾಲ್ಗೊಂಡ ಹುಬ್ಬಳ್ಳಿಯ ಶ್ರೀಕಾಂತ ಪೂಜರಿ ಅವರನ್ನು ರಾಜ್ಯದ ಪೊಲೀಸರು ಬಂಧಿಸಿದ್ದಾರೆ. ಇದರ ವಿರುದ್ಧ ಪ್ರತಿಭಟನೆಗೆ ಪಕ್ಷದ ರಾಜಧಕ್ಷ ಬಿ.ವೈ.ವಿಜಯೇಂದ್ರ ಅವರು ಕರೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದರು.
ಇಡೀ ದೇಶಾದ್ಯಂತ ರಾಮಮಂದಿರ ನಿರ್ಮಾಣದ ಸಂತಸ ಮನೆ ಮಾಡಿದೆ. ಈ ಹಿನ್ನೆಲೆಯಲ್ಲಿ ಮನೆ ಮನೆಗೆ ಮಂತ್ರಾಕ್ಷತೆ ತಲುಪಿಸುವ ಕಾರ್ಯ ಭರದಿಂದ ಸಾಗಿದೆ. ಆದರೆ ಕರ್ನಾಟಕ ಕಾಂಗ್ರೆಸ್ ಸರ್ಕಾರ ಆ ಸಂತಸವನ್ನು ಕಸಿದುಕೊಳ್ಳುವ ಹುನ್ನಾರ ನಡೆಸಿದೆ. ತುಷ್ಟೀಕರಣ ನೀತಿ ಅನುಸರಿಸುತ್ತಿರುವ ಕಾಂಗ್ರೆಸ್, ಹಿಂದೂ ಕಾರ್ಯಕರ್ತರ ಮನೋಸ್ಥೈರ್ಯ ಕುಗ್ಗಿಸಲು ಕರ ಸೇವಕರ ಬಂಧನ ಮಾಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಅಲ್ಪಸಂಖ್ಯಾತರ ಓಲೈಕೆಗಾಗಿ ಎಸ್‌ಸಿಪಿ- ಟಿಎಸ್‌ಪಿ ಯೋಜನೆ ಯಲ್ಲಿನ ೧೦,೦೦೦ ಕೋಟಿ ಅನುದಾನ ವನ್ನು ಕೊಡುವುದಾಗಿ ಮುಖ್ಯಮಂತ್ರಿಗಳೇ ಘೋಷಿಸಿದ್ದಾರೆ. ಹಿಜಬ್ ಧರಿಸಲು ಅವಕಾಶ ಕೊಡುವುದಾಗಿ ಹೇಳುತ್ತಾರೆ. ಅಲ್ಪಸಂಖ್ಯಾತರ ಓಲೈಕೆ ಮತ್ತು ಖುಷಿಪಡಿಸಲು ರಾಜಕಾರಣ ಮಾಡು ವುದು ಖಂಡನೀಯ ಎಂದರು.
ಪ್ರಮುಖರಾದ ಮಾಲತೇಶ್, ಬಾಲು, ಪ್ರದೀಪ್, ಮಾಜಿ ಸೂಡಾ ಅಧ್ಯಕ್ಷ ನಾಗರಾಜ್ ಇದ್ದರು.