ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಜೂ.೨೩: ಸರ್ಕಾರಿ ನೌಕರರ ಸಂಘದ ನವಿಕೃತ ಭವನದ ಉದ್ಘಾಟನೆ…

Share Below Link

ಶಿವಮೊಗ್ಗ : ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಶಾಖೆ ವತಿಯಿಂದ ಜೂ.೨೩ರ ಬೆಳಿಗ್ಗೆ ೧೦.೩೦ಕ್ಕೆ ಕುವೆಂಪು ರಂಗಮಂದಿರದಲ್ಲಿ ನೂತನ ವಾಗಿ ಆಯ್ಕೆಯಾಗಿರುವ ಜಿಲ್ಲೆಯ ಜನಪ್ರತಿನಿಧಿಗಳಿಗೆ ಅಭಿನಂದನೆ, ಸಂಘದ ನವೀಕೃತ ಭವನದ ಉದ್ಘಾಟನೆ, ಸರ್ವ ಸದಸ್ಯರ ವಾರ್ಷಿಕ ಮಹಾಸಭೆ ಹಾಗೂ ಜಿಲ್ಲೆಯ ರಾಜ್ಯ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಜಿಲ್ಲಾಧ್ಯಕ್ಷ ಹಾಗೂ ರಾಜಧ್ಯಕ್ಷ ಸಿ.ಎಸ್. ಷಡಾಕ್ಷರಿ ಸುದ್ದಿಗೋಷ್ಟಿಯಲ್ಲಿ ತಿಳಿಸಿದರು.
ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹಾಗೂ ನವೀಕೃತ ಸರ್ಕಾರಿ ನೌಕರರ ಭವನವನ್ನು ಸಂಸದ ಬಿ.ವೈ. ರಾಘವೇಂದ್ರ ಉದ್ಘಾಟಿಸಲಿದ್ದಾರೆ. ಶಾಸಕರಾದ ಚನ್ನಬಸಪ್ಪ ಹಾಗೂ ಡಿ.ಎಸ್. ಅರುಣ್ ಅವರು ಪ್ರತಿಭಾ ಪುರಸ್ಕಾರ ವಿತರಿಸಲಿದ್ದಾರೆ ಎಂದರು.
ನೂತನ ಸಂಸದ ಬಿ.ವೈ. ರಾಘವೇಂದ್ರ, ಶಾಸಕರಾದ ಎಸ್.ಎಲ್. ಭೋಜೇಗೌಡ, ಡಾ. ಧನಂಜಯ ಸರ್ಜಿ, ಬಲ್ಕಿಶ್ ಬಾನು, ಎಂ.ಐ.ಡಿ.ಬಿ. ಅಧ್ಯಕ್ಷ ಆರ್.ಎಂ. ಮಂಜುನಾಥಗೌಡ, ಸೂಡಾ ಅಧ್ಯಕ್ಷ ಹೆಚ್.ಎಸ್. ಸುಂದರೇಶ್, ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಸ್. ರವಿ ಕುಮಾರ್, ಸಾಂಬಾರು ಅಭಿವೃದ್ಧಿ ಮಂಡಳಿ ಅಧ್ಯಕ್ಷೆ ಜಿ.ಪಲ್ಲವಿ ಅವರಿಗೆ ಅಭಿನಂದಿಸಲಾಗುವುದು ಎಂದರು.
ಮುಖ್ಯ ಅತಿಥಿಯಾಗಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಜಿ.ಪಂ. ಸಿಇಓ ಸ್ನೇಹಲ್ ಸುಧಾಕರ್ ಲೋಖಂಡೆ, ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ. ಮಿಥುನ್ ಕುಮಾರ್, ಹಾಗೂ ರಾಜ್ಯ ಸಂಘದ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ ಎಂದ ಅವರು, ಸರ್ವಜ್ಞ ವೃತ್ತದಲ್ಲಿ ೨೬ ಕೋಟಿ ರೂ.ವೆಚ್ಚದಲ್ಲಿ ನಿರ್ಮಾಣ ವಾಗುತ್ತಿರುವ ಸಮುದಾಯ ಭವನ ವನ್ನು ಇನ್ನೆರಡು ತಿಂಗಳಲ್ಲಿ ಉದ್ಘಾಟಿಸ ಲಾಗುವುದು. ಈ ತಿಂಗಳ ಅಂತ್ಯ ಅಥವಾ ಮುಂದಿನ ತಿಂಗಳ ಮೊದಲ ವಾರದಲ್ಲಿ ಶಿವಮೊಗ್ಗದಲ್ಲಿ ರಾಜ್ಯ ಮಟ್ಟದ ಸರ್ಕಾರಿ ನೌಕರರ ಕ್ರೀಡಾ ಕೂಟವನ್ನು ಹಮ್ಮಿಕೊಂಡಿದ್ದು, ೧೦೨ ಕ್ರೀಡೆಗಳಿದ್ದು, ಸುಮಾರು ೧೧ ಸಾವಿರ ಸ್ಪರ್ಧಿಗಳು ಭಾಗವಹಿಸಲಿದ್ದಾರೆ ಎಂದರು.
ಸುದ್ದಿಗೋಷ್ಟಿಯಲ್ಲಿ ಸಂಘದ ರಾಜ್ಯ ಉಪಾಧ್ಯಕ್ಷ ಆರ್. ಮೋಹನ್ ಕುಮಾರ್, ಜಿಲ್ಲಾ ಕಾರ್ಯದರ್ಶಿ ಡಿ.ಟಿ. ಕೃಷ್ಣಮೂರ್ತಿ, ಪದಾಧಿಕಾರಿಗಳಾದ ಆರ್. ಪಾಪಣ್ಣ, ಉದಯಸಿಂಗ್, ಸಿ.ಎ.ಹಿರೇಮಠ್ ಇನ್ನಿತರರು ಉಪಸ್ಥಿತರಿದ್ದರು.