ತಾಜಾ ಸುದ್ದಿ

ಕೆಎಸ್‌ಎಂಸಿಎ ಸಂಸ್ಥೆಯಿಂದ ಸರ್ಕಾರಕ್ಕೆ ವಿಶೇಷ ಲಾಭಾಂಶ ಮೊತ್ತ ೩೪.೧೩ ಕೋಟಿ ರೂ. ನೀಡಿಕೆ…

Share Below Link

ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರದ ಏಕೈಕ ಜಹೀರಾತು ಸಂಸ್ಥೆಯಾದ ಮೆ| ಕರ್ನಾಟಕ ಸ್ಟೇಟ್ ಮಾರ್ಕೆಂಟಿಗ್ ಕಮ್ಯೂನಿಕೇ ಷನ್ ಅಂಡ್ ಅಡ್ವರ್ಟೈಸಿಂಗ್ ಲಿಮಿಟೆಡ್ (ಕೆಎಸ್‌ಎಂಸಿಎ) ಕಂಪನಿಯು ವಿಶೇಷ ಲಾಭಾಂಶದ ಮೊತ್ತ ರೂ.೩೪.೧೩ ಕೋಟಿಗಳನ್ನು ಇಂದು ಸರ್ಕಾರಕ್ಕೆ ನೀಡಿತು.
ಕಂಪನಿಯ ಪರವಾಗಿ ಮಾನ್ಯ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ್ ಮತ್ತು ಕೆಎಸ್‌ಎಂಸಿಎ ಸಂಸ್ಥೆಯ ಅಧ್ಯಕ್ಷರು ಹಾಗೂ ಕಾರವಾರ ವಿಧಾನಸಭಾ ಕ್ಷೇತ್ರದ ಶಾಸಕರೂ ಆದ ಸತೀಶ ಕೃಷ್ಣ ಸೈಲ್ ಅವರು ವಿಧಾನಸೌಧ ದಲ್ಲಿ ವಿಶೇಷ ಲಾಭಾಂಶದ ಚೆಕ್ ಅನ್ನು ಸಿಎಂ ಸಿದ್ದರಾಮಯ್ಯ ರವರಿಗೆ ಹಸ್ತಾಂತರಿಸಿದರು.


ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ಎಂ.ಬಿ. ಪಾಟೀಲ್, ಸಂಸ್ಥೆಯು ಇದುವರೆಗೆ ಯಶಸ್ಸಿನ ಪಥದಲ್ಲಿ ಲಾಭದಾಯಕವಾಗಿ ಮುನ್ನಡೆಯು ತ್ತಿರುವುದು ಶ್ಲಾಘನೀಯ. ಆದರೆ, ಸಂಸ್ಥೆಯು ಈ ಹಿಂದೆ ನಿರ್ವಹಿಸಿ ಕೊಂಡು ಬಂದಿದ್ದ ಅಬಕಾರಿ ಭದ್ರತಾ ಚೀಟಿ ಮುದ್ರಣ ಮತ್ತು ಮಾರಾಟ ವ್ಯವಹಾರವು ಸಂಸ್ಥೆ ಯಿಂದ ಕೈಬಿಟ್ಟು ಹೋಗಿರುವುದ ರಿಂದ ಸಂಸ್ಥೆಯ ವಹಿವಾಟು ಮತ್ತು ಲಾಭದಾಯಕತೆ ಕಡಿಮೆಯಾಗಿದೆ. ಮುಖ್ಯಮಂತ್ರಿಗಳು ಈ ಅಬಕಾರಿ ಭದ್ರತಾ ಚೀಟಿ ಮುದ್ರಣ ಮತ್ತು ಮಾರಾಟ ವ್ಯವಹಾರವನ್ನು ಮತ್ತೆ ಕೆಎಸ್‌ಎಂಸಿಎ ಸಂಸ್ಥೆಗೆ ವಹಿಸಿ ಕೊಡಬೇಕೆಂದು ಹಾಗೂ ಸಂಸ್ಥೆಯ ಆರ್ಥಿಕಾಭಿವೃದ್ಧಿಗೆ ಬೆಂಬಲಿಸ ಬೇಕೆಂದು ಕೋರಿದರು.
ಕೆಎಸ್‌ಎಂಸಿಎ ಅಧ್ಯಕ್ಷ ಸತೀಶ ಕೃಷ್ಣ ಸೈಲ್ ಮಾತನಾಡಿ, ಸರ್ಕಾರವು ಸಂಸ್ಥೆಗೆ ನೀಡಲಾಗಿರುವ ೪ಜಿ ವಿನಾಯಿತಿಯಲ್ಲಿ ಹೆಚ್ಚುವರಿಯಾಗಿ ಡಿಜಿಟಲೈಜೇಶನ್ ಕಾರ್ಯ ಚಟುವಟಿಕೆಗಳನ್ನು ಸೇರ್ಪಡೆ ಮಾಡಲು ಹಾಗೂ ಸಂಸ್ಥೆಯ ಜಾಹೀರಾತು ಬಿಡುಗಡೆ ಬಾಕಿ ಮೊತ್ತವನ್ನು ಸಕಾಲದಲ್ಲಿ ಪಾವತಿ ಮಾಡಲು ಎಲ್ಲ ಇಲಾಖೆಗಳಿಗೆ ನಿರ್ದೇಶನ ನೀಡುವಂತೆ ಮನವಿ ಸಲ್ಲಿಸಲಾಗಿದ್ದು ಮುಖ್ಯಮಂತ್ರಿಗಳು ಇದನ್ನು ಪರಿಗಣಿಸಿ ಅನುಮೋದನೆ ನೀಡಬೇಕೆಂದು ವಿನಂತಿಸಿದರು.
ಈ ಸಂದರ್ಭದಲ್ಲಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಮೊಹಮದ್ ಅತೀಕುಲ್ಲಾ ಶರೀಫ್ ಹಾಗೂ ಉಪ ಪ್ರಧಾನ ವ್ಯವಸ್ಥಾಪಕ ನಂದೀಶರವರು ಉಪಸ್ಥಿತರಿದ್ದರು.