ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಸಿಎಂ ಮಾಧ್ಯಮ ಸಲಹೆಗಾರರಾಗಿ ಕೆ.ವಿ. ಪ್ರಭಾಕರ್ ನೇಮಕ; ಐಎಫ್‌ಎಸ್‌ಎಂಎನ್ ಅಭಿನಂದನೆ…

Share Below Link

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾಧ್ಯಮ ಸಲಹೆಗಾರರಾಗಿ ಹಿರಿಯ ಪತ್ರಕರ್ತ ಕೆ.ವಿ. ಪ್ರಭಾಕರ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಸೋಮ ವಾರ ಆದೇಶ ಹೊರಡಿಸಿದೆ.
ಈ ಹಿಂದೆ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಮುಖ್ಯಮಂತ್ರಿ ಯವರ ಮಾಧ್ಯಮ ಸಮನ್ವಯಕ ರಾಗಿದ್ದ ಕೆ ವಿ ಪ್ರಭಾಕರ್ ಅವರನ್ನು ಈ ಬಾರಿ ಮುಖ್ಯಮಂತ್ರಿಯವರ ಮಾಧ್ಯಮ ಸಲಹೆಗಾರರನ್ನಾಗಿ ನೇಮಕ ಮಾಡಲಾಗಿದೆ.
ಕೆ.ವಿ. ಪ್ರಭಾಕರ್ ಅವರಿಗೆ ಸಂಪುಟ ದರ್ಜೆ ಸಚಿವರ ಸ್ಥಾನಮಾನವನ್ನೂ ಸಹ ನೀಡಲಾಗಿದ್ದು, ಸಚಿವರಿಗೆ ಸಿಗುವ ಎಲ್ಲ ಸೌಲಭ್ಯಗಳು ಅವರಿಗೆ ಸಿಗಲಿದೆ ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಅಧೀನ ಕಾರ್ಯದರ್ಶಿ ಟಿವಿ ಸುನಂದಮ್ಮ ಅವರು ಆದೇಶ ಹೊರಡಿಸಿzರೆ.


ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದ ಮೊದಲ ಅವಧಿಯ ಸಂದರ್ಭದಲ್ಲಿ ವಿಶೇಷಾಧಿಕಾರಿಯಾಗಿದ್ದ ಕೆಎಎಸ್ ಅಧಿಕಾರಿ ಎಂ ವೆಂಕಟೇಶಯ್ಯ ಅವರನ್ನು ಮುಖ್ಯಮಂತ್ರಿಯವರ ಪದಾವಧಿಯವರೆಗೆ ಅಥವಾ ಮುಂದಿನ ಆದೇಶದವರೆಗೆ ಇವುಗಳಲ್ಲಿ ಯಾವುದು ಮೊದಲೋ ಅಲ್ಲಿಯವರೆಗೆ ಮುಖ್ಯಮಂತ್ರಿ ಯವರ ವಿಶೇಷಾಧಿಕಾರಿಯಾಗಿ ಗುತ್ತಿಗೆ ಆಧಾರದ ಮೇರೆಗೆ ನೇಮಕ ಮಾಡಲಾಗಿದೆ.
ಇನ್ನು ರಾಜ್ಯ ಸರ್ಕಾರದ ಗೃಹ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಡಾ|ರಜನೀಶ್ ಗೋಯಲ್ ಅವರನ್ನು ಮುಖ್ಯಮಂತ್ರಿಯವರ ಆಪ್ತ ಮುಖ್ಯ ಕಾರ್ಯದರ್ಶಿ ಹುzಗೆ ಸಮವರ್ತಿ ಪ್ರಭಾರದಲ್ಲಿರಿಸಿ ನೇಮಕ ಮಾಡಲಾಗಿದೆ.
ಪೌರಾಡಳಿತ ಇಲಾಖೆಯ ಜಂಟಿ ನಿರ್ದೇಶಕ ಬಿ. ಶಿವಸ್ವಾಮಿ ಅವರನ್ನು ಮುಖ್ಯಮಂತ್ರಿಯವರ ಜಂಟಿ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ.
ಅಭಿನಂದನೆ: ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾಗಿ ನೇಮಕಗೊಂಡ ಹಿರಿಯ ಪತ್ರಕರ್ತ ಕೆ.ವಿ. ಪ್ರಭಾಕರ್ ಅವರನ್ನು ಭಾರತೀಯ ಸಣ್ಣ ಮತ್ತು ಮಧ್ಯಮ ಪತ್ರಿಕೆಗಳ ಒಕ್ಕೂಟದ ರಾಷ್ಟ್ರೀಯ ಅಧ್ಯಕ್ಷ ಬಿ.ಜಿ. ವಿಜಯ್, ರಾಜ್ಯ ಘಟಕದ ಅಧ್ಯಕ್ಷ ರಮೇಶ್, ಪ್ರಧಾನ ಕಾರ್ಯದರ್ಶಿ ಅಲ್ಫೋನ್ಸ್ ರಾಕೇಶ್ ಡಿಸೋಜ, ಶಿವಮೊಗ್ಗ ಜಿಲ್ಲಾ ಘಟಕದ ಅಧ್ಯಕ್ಷ ಷಡಾಕ್ಷರಿ, ಪ್ರಮುಖರಾದ ಎಸ್.ಎಲ್. ನಿಖಿಲ್, ಪ್ರೇಮ್ ಕುಮಾರ್, ಸತೀಶ್, ಕಮಲಾಕ್ಷ ಶೇಟ್ ಸೇರಿದಂತೆ ಇನ್ನಿತರರು ಅಭಿನಂದನೆ ಸಲ್ಲಿಸಿದ್ದಾರೆ.