ಮಾ. ೩೦: ಜೆಎನ್‌ಎನ್‌ಸಿಇ ಕಾಲೇಜಿನಲ್ಲಿ ಬೃಹತ್ ರಕ್ತದಾನ ಶಿಬಿರ…
ಶಿವಮೊಗ್ಗ : ನಗರದ ಸವಳಂಗ ರಸ್ತೆಯ ಜೆಎನ್‌ಎನ್‌ಸಿಇ ಕಾಲೇಜಿನಲ್ಲಿ ಪ್ರತೀ ವರ್ಷದಂತೆ ಈ ವರ್ಷವೂ ಕೂಡ ಮಾ. ೩೦ರ ಗುರುವಾರ ಬೃಹತ್ ರಕ್ತದಾನ ಶಿಬಿರ ನಡೆಯಲಿದೆ ಎಂದು ಸ್ವಯಂ ಪ್ರೇರಿತ ರಕ್ತದಾನಿಗಳ ಸೇವಾ ಸಂಸ್ಥೆ ಕಾರ್ಯದರ್ಶಿ ಹೆಚ್ ಬಸವರಾಜ್ ತಿಳಿಸಿzರೆ.
ಅಂದು ಬೆಳಿಗ್ಗೆ ೯ ಗಂಟೆಗೆ ಜಿಧಿಕಾರಿ ಡಾ. ಆರ್ ಸೆಲ್ವಮಣಿ ಶಿಬಿರವನ್ನು ಉದ್ಘಾಟಿಸಲಿದ್ದು, ಸಂಸ್ಥೆಯ ಅಧ್ಯಕ್ಷ ಧರಣೇಂದ್ರ ದಿನಕರ್ ಅಧ್ಯಕ್ಷತೆ ವಹಿಸಲಿzರೆ. ನಗರದ ರೋಟರಿ ಕ್ಲಬ್, ರಾಷ್ಟ್ರೀಯ ಶಿಕ್ಷಣ ಸಂಸ್ಥೆ, ಜಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ರಾಷ್ಟ್ರೀಯ ಸೇವಾ ಯೋಜನಾ ಘಟಕ, ಯುವ ರೆಡ್ ಕ್ರಾಸ್ ಘಟಕ, ಜೆಎನ್ ಎನ್ ಸಿ ಇ ಕಾಲೇಜು ಇವರುಗಳ ಸಂಯುಕ್ತ ಆಶ್ರಯದಲ್ಲಿ ನಡೆಯುವ ಈ ಶಿಬಿರದ ಮುಖ್ಯ ಅತಿಥಿಗಳಾಗಿ ಎನ್ ಇ ಎಸ್ ಕಾರ್ಯದರ್ಶಿ ಎಸ್.ಎನ್. ನಾಗರಾಜ್, ಜೆಎನ್ ಎನ್ ಸಿ ಇ ಕಾಲೇಜಿನ ಪ್ರಾಂಶುಪಾಲ ಡಾ.ಕೆ.ನಾಗೇಂದ್ರ ಪ್ರಸಾದ್, ಕಾಲೇಜಿನ ಡೀಮ್ ಅಕಾಡೆಮಿಕ್ಸ್‌ನ ಡಾ.ಪಿ. ಮಂಜುನಾಥ್, ರೋಟರಿ ಕ್ಲಬ್ ಅಧ್ಯಕ್ಷ ಎನ್ ಜೆ ಸುರೇಶ್, ಕಾರ್ಯದರ್ಶಿ ವೆಂಕಟೇಶ್ ಗುತ್ತಲ್, ಸುನೀತಾ ಶ್ರೀಧರ್, ಆನಂದರಾಜ್, ಅರುಣ್ ಕುಮಾರ್ ಸೇರಿದಂತೆ ಇನ್ನಿತರರು ಭಾಗವಹಿಸಲಿzರೆ ಎಂದು ಅವರು ಮಾಹಿತಿ ನೀಡಿದರು.
ಕಾಲೇಜಿನ ಸಿಬ್ಬಂದಿ ವರ್ಗ, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಈ ಶಿಬಿರದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಬಸವರಾಜ್ ಅವರು ಕೋರಿzರೆ.