ಜಿಲ್ಲಾ ಸುದ್ದಿತಾಜಾ ಸುದ್ದಿ

ಮಹಾತ್ಮ ಗಾಂಧಿ ಅಲೋಚನೆ ಇಂದಿಗೂ ಸ್ಫೂರ್ತಿ…

Share Below Link

ಶಿವಮೊಗ್ಗ: ಮಹಾತ್ಮ ಗಾಂಧಿಯವರ ಚಿಂತನೆಗಳು ಇಡೀ ಜಗತ್ತಿ ನಲ್ಲಿ ಸ್ಫೂರ್ತಿಯ ಆಲೋಚನೆ ಗಳನ್ನು ಮೂಡಿಸಿದ್ದು, ಇಂದಿನ ಯುವ ಪೀಳಿಗೆಗೆ ಮಹಾತ್ಮ ಗಾಂಧಿಯವರು ಸದಾ ಕಾಲಕ್ಕೂ ಮಾರ್ಗ ದರ್ಶಕರು ಎಂದು ದೇಶಿಯ ವಿದ್ಯಾ ಶಾಲಾ ಸಮಿತಿ ಕಾರ್‍ಯದರ್ಶಿ ಎಸ್.ರಾಜಶೇಖರ್ ಹೇಳಿ ದರು.
ದೇಶಿಯ ವಿದ್ಯಾಶಾಲಾ ಸಮಿತಿ ವತಿಯಿಂದ ಡಿವಿಎಸ್ ಸ್ವತಂತ್ರ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಿದ್ದ ಮಹಾತ್ಮ ಗಾಂಧಿ ಹಾಗೂ ಲಾಲ್ ಬಹಾದ್ದೂರ್ ಶಾಸ್ತ್ರಿ ಅವರ ಜನ್ಮದಿನ ಆಚರಣೆ ಕಾರ್ಯ ಕ್ರಮದಲ್ಲಿ ಮಾತನಾಡಿದರು.


ಮಹಾತ್ಮ ಗಾಂಧಿ ಅವರು ದೇಶಕ್ಕೆ ನೀಡಿದ ಕೊಡುಗೆಗಳ ಬಗ್ಗೆ ಯುವ ಸಮೂಹಕ್ಕೆ ಅರಿವು ಮೂಡಿಸಬೇಕು. ಉಪನ್ಯಾಸಕರು ವಿದ್ಯಾರ್ಥಿಗಳಿಗೆ ಗಾಂಧೀಜಿ ಹಾಗೂ ಶಾಸ್ತ್ರೀಯವರ ಜೀವನ ಚರಿತ್ರೆ ಬಗ್ಗೆ ಮಾಹಿತಿ ನೀಡಬೇಕು. ವಿದ್ಯಾರ್ಥಿಗಳು ಗಾಂಧೀಜಿ ಮತ್ತು ಲಾಲ್ ಬಹಾದ್ದೂರ್ ಶಾಸ್ತ್ರಿ ಅವರ ಆತ್ಮಕಥೆ ಅಧ್ಯಯನ ನಡೆಸಬೇಕು. ಇದು ಉತ್ತಮ ಬದುಕು ರೂಪಿಸಿ ಕೊಳ್ಳಲು ಸಹಕಾರಿ ಎಂದರು.
ಕನ್ನಡ ಉಪನ್ಯಾಸಕ ಡಾ. ಉಮೇಶ್ ಅಂಗಡಿ ಮಾತನಾಡಿ, ಬಾಲ್ಯದಿಂದಲೇ ಮಹಾತ್ಮ ಗಾಂಧಿ ಅವರು ಹೆಚ್ಚು ಹೆಚ್ಚು ಪುಸ್ತಕಗಳನ್ನು ಅಧ್ಯಯನ ನಡೆಸುತ್ತಿದ್ದರು. ವಿವಿಧ ಘಟನೆಗಳಿಂದ ಪ್ರೇರಿತರಾಗಿ ಉತ್ತಮ ಮಲ್ಯಗಳನ್ನು ಜೀವನ ದಲ್ಲಿ ಅಳವಡಿಸಿಕೊಂಡು ಮುನ್ನಡೆ ಸುತ್ತಿದ್ದರು. ಸತ್ಯ ದಾರಿಯಲ್ಲಿ ಬದು ಕುವ ಸಂಕಲ್ಪ ಮಾಡಿದರು. ಗಾಂಧಿ ಅವರ ಕುರಿತು ಇಡೀ ವಿಶ್ವ ಗೌರವ ನೀಡುತ್ತಿತ್ತು ಎಂದು ಹೇಳಿದರು.
ಕನ್ನಡ ಉಪನ್ಯಾಸಕ ಎನ್. ಸಂದೇಶ್ ಮಾತನಾಡಿ, ಜೈ ಜವಾನ್ ಜೈ ಕಿಸಾನ್ ಘೋಷ ವಾಕ್ಯ ನೀಡಿದ ಮಹಾನ್ ವ್ಯಕ್ತಿ ಲಾಲ್ ಬಹಾದ್ದೂರ್ ಶಾಸ್ತ್ರಿ ಇಡೀ ದೇಶಕ್ಕೆ ಸ್ಫೂರ್ತಿ ದಾಯಕ ವ್ಯಕ್ತಿ ಆಗಿದ್ದರು. ಸರಳ ಜೀವನಶೈಲಿ ರೂಢಿಸಿಕೊಂಡಿದ್ದ ಶಾಸ್ತ್ರೀ ಅವರು ದೇಶದ ಪ್ರತಿಯೊಬ್ಬ ವ್ಯಕ್ತಿಗೂ ಪ್ರೇರಣೆ ಆಗಿದ್ದರು. ಲಾಲ್ ಬಹಾ ದ್ದೂರ್ ಶಾಸ್ತ್ರಿ ಜೀವನ ಆದರ್ಶಗ ಳನ್ನು ನಾವೂ ಕೂಡ ಅಳವಡಿಸಿ ಕೊಳ್ಳಬೇಕು ಎಂದು ತಿಳಿಸಿದರು.
ದೇಶಿಯ ವಿದ್ಯಾಶಾಲಾ ಸಮಿತಿ ಅಧ್ಯಕ್ಷ ಕೆ.ಎನ್.ರುದ್ರಪ್ಪ ಕೊಳಲೆ ಅಧ್ಯಕ್ಷತೆ ವಹಿಸಿದ್ದರು. ದತ್ತ ಮೂರ್ತಿ ಭಟ್ ಅವರು ರಾಮ ಭಜನೆಯ ಮಹತ್ವ ಕುರಿತು ವಿಶೇಷ ಉಪನ್ಯಾಸ ನೀಡಿದರು.
ಉಪನ್ಯಾ ಸಕರ ತಂಡವು ಸಭಾ ಕಾರ್‍ಯಕ್ರಮ ಕ್ಕೂ ಮುನ್ನ ಭಜನಾ ಕ್ರಮವನ್ನು ನಡೆಸಿಕೊಟ್ಟಿತು. ವಿವಿಧ ಸ್ಪರ್ಧೆಯ ಲ್ಲಿ ವಿಜೇತ ಉಪನ್ಯಾಸಕರಿಗೆ ಬಹುಮಾನ ವಿತರಿಸಲಾಯಿತು.
ದೇಶಿಯ ವಿದ್ಯಾಶಾಲಾ ಸಮಿತಿ ಸಹ ಕಾರ್‍ಯದರ್ಶಿ ಡಾ. ಎ. ಸತೀಶ್ ಕುಮಾರ್ ಶೆಟ್ಟಿ, ಡಿವಿಎಸ್ ಕಲಾ, ವಾಣಿಜ್ಯ ಮತ್ತು ವಿeನ ಕಾಲೇಜಿನ ಪ್ರಾಚಾರ್ಯ ಡಾ. ಎಂ.ವೆಂಕಟೇಶ್, ಡಿವಿಎಸ್ ಸ್ವತಂತ್ರ ಪಿಯು ಕಾಲೇಜಿನ ಪ್ರಾಚಾರ್‍ಯ ಎ.ಇ.ರಾಜಶೇಖರ್, ಎಚ್.ಸಿ.ಉಮೇಶ್, ಆರ್.ನಿತಿನ್ ಮತ್ತಿತರರು ಉಪಸ್ಥಿತರಿದ್ದರು