ಪೊಲೀಸ್ ದೌರ್ಜನ್ಯಖಂಡಿಸಿ ಮಹಿಳಾ ಮೋರ್ಚಾದಿಂದ ಪ್ರತಿಭಟನೆ…
ಶಿವಮೊಗ್ಗ ಹುಬ್ಬಳ್ಳಿ ಯಲ್ಲಿ ಬಿಜೆಪಿ ಕಾರ್ಯಕರ್ತೆಯ ಮೇಲೆ ನಡೆದ ಪೊಲೀಸ್ ದೌರ್ಜನ್ಯ ಖಂಡಿಸಿ ಹಾಗೂ ತಪ್ಪಿತಸ್ತರ ವಿರುದ್ಧ ಕ್ರಮಕೈಗೊಳ್ಳು ವಂತೆ ಆಗ್ರಹಿಸಿ ಬಿಜೆಪಿ ಶಿವಮೊಗ್ಗ ನಗರ ಮಹಿಳಾ ಮೋರ್ಚಾದಿಂದ ಡಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಿ, ಜಿಡಳಿತ ಮೂಲಕ ಗೃಹ ಸಚಿವರಿಗೆ ಮನವಿ ಸಲ್ಲಿಸಲಾಯಿತು.
ಬಿಜೆಪಿ ಮಹಿಳಾ ಕಾರ್ಯಕರ್ತೆ ಸುಜಾತ ಹಂಡಿ ಅವರನ್ನು ಬಂಧಿಸುವ ಸಮಯ ದಲ್ಲಿ ವಿವಸ್ತ್ರಗೊಳಿಸಿ ದೈಹಿಕವಾಗಿ ಹ ಮಾಡಲಾಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಇದು ಮಹಿಳೆಯರ ಘನತೆಗೆ ಧಕ್ಕೆ ತರುವ ಕೆಲಸವಾಗಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿರು ವುದಕ್ಕೆ ಸಾಕ್ಷಿಯಾಗಿದೆ ಹಾಗೂ ಇಡೀ ನಾಗರೀಕ ಸಮಾಜವೇ ತಲೆತಗ್ಗಿಸುವಂತಾಗಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ಈ ಘಟನೆಯ ಬಗ್ಗೆ ತಟಸ್ತ ಮತ್ತು ಉನ್ನತ ಮಟ್ಟದ ನ್ಯಾಯಾಂಗ ತನಿಖೆಯಾಗಬೇಕು. ಘಟನೆಯ ವೀಡಿಯೋ ಸಾಮಾಜಿಕ ಜಲತಾಣಗಳಲ್ಲಿ ಹರಡುತ್ತಿರುವ ಬಗ್ಗೆ ಪೊಲೀಸ್ ಇಲಾಖೆಯು ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಳ್ಳಲು ಮುಂದಾಗಿದೆ. ಆದರೆ ಈ ಸುಮೋಟೋ ಪ್ರಕರಣವು ಕೇವಲ ವೀಡಿಯೋ ಮಾಡಿದವರ ವಿರುದ್ಧ ಸೀಮಿತ ವಾಗಬಾರದು. ಘಟನೆಗೆ ಪ್ರಚೋದನೆ ನೀಡಿದವರು ಮತ್ತು ಮಹಿಳೆಯ ಮೇಲೆ ಹಮಾಡಿದ ಪೊಲೀಸ್ ಸಿಬ್ಬಂದಿಗಳ ವಿರುದ್ಧವೂ ಕಠಿಣ ಕ್ರಮಕೈಗೊಳ್ಳಬೇಕೆಂದು ಆಗ್ರಹಿಸಿದರು.
ಕಾಂಗ್ರೆಸ್ ಮಹಿಳಾ ಕಾರ್ಪೊರೇಟರ್‌ರವರ ಒತ್ತಡಕ್ಕೆ ಮಣಿದು ಪೊಲೀಸರು ಕಾರ್ಯ ಕರ್ತೆ ಮೇಲೆ ಹ ನಡೆಸಿzರೆ. ಇದು ಸಂವಿಧಾನಬದ್ಧವಾಗಿ ಮಹಿಳೆಯರಿಗೆ ರಕ್ಷಣೆಯ ಹಕ್ಕನ್ನು ಉಲ್ಲಂಘಿಸಿದಂತಾಗಿದೆ. ಕರ್ತವ್ಯ ಲೋಪವೆಸಗಿರುವ ಪೊಲೀಸ್ ಅಧಿಕಾರಿಗಳನ್ನು ತಕ್ಷಣವೇ ಸೇವೆಯಿಂದ ಅಮಾನತುಗೊಳಿಸಬೇಕೆಂದು ಆಗ್ರಹಿಸಿದರು.
ಮಹಿಳಾ ಮೋರ್ಚಾ ನಗರಾಧ್ಯಕ್ಷೆ ರಶ್ಮಿ ಶ್ರೀನಿವಾಸ್, ಪ್ರಧಾನ ಕಾರ್ಯದರ್ಶಿಗಳಾದ ಯಶೋಧ, ವೈಷ್ಣವ್, ನಿರ್ಮಲಾ, ಪ್ರಮುಖರಾದ ಸುಮಾ ಭೂಪಾಳಂ, ಚೈತ್ರಾನಾಯಕ್, ಶಾಂತಾ ಸುರೇಂದ್ರ ಮೊದಲಾದವರಿದ್ದರು.
