ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಶ್ರೀಕ್ಷೇತ್ರ ಧರ್ಮಸ್ಥಳದ ವಿರುದ್ಧ ಅಪಪ್ರಚಾರ ವಿರೋಧಿಸಿ ಬೃಹತ್ ಪ್ರತಿಭಟನೆ…

Share Below Link

ಶಿವಮೊಗ್ಗ : ದಕ್ಷಿಣಕಾಶೀ ಎಂದೇ ಪ್ರಸಿದ್ಧವಾದ ಪವಿತ್ರ ಧಾರ್ಮಿಕ ಕ್ಷೇತ್ರಗಳ ಂದಾದ ೮೦೦ ವರ್ಷಗಳ ಇತಿಹಾಸವಿರುವ ಶ್ರೀಕ್ಷೇತ್ರ ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮೀ ದೇವಾಲಯ ಹಾಗೂ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಮತ್ತು ಅವರ ಕುಟುಂಬಸ್ಥರ ಹೆಸರಿಗೆ ಕಳಂಕ ತರುವಂತಹ ಕೀಳುಮಟ್ಟದ ಭಾಷೆ ಉಪಯೋಗಿಸಿ, ವೀಡಿಯೋ ತುಣುಕುಗಳನ್ನು ಸಾಮಾಜಿಜ ಜಲತಾಣಗಳಲ್ಲಿ ಹರಿಯಬಿಟ್ಟು ಸುಳ್ಳುಸುದ್ದಿ ಪ್ರಚಾರ ಮಾಡುತ್ತಿರು ವುದನ್ನು ಖಂಡಿಸಿ, ಶ್ರೀ ಧರ್ಮಸ್ಥಳ ಭಕ್ತಾಭಿಮಾನಿಗಳ ವೇದಿಕೆಯಿಂದ ಇಂದು ಗೋಪಿವೃತ್ತ ದಿಂದ ಡಿಸಿ ಕಛೇರಿವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿ, ಜಿಧಿಕಾರಿಗಳ ಮೂಲಕ ರಾಜ್ಯಪಾಲರು, ರಾಷ್ಟ್ರಪತಿ ಗಳಿಗೆ ಮನವಿ ಸಲ್ಲಿಸಲಾಯಿತು.


ಈ ಸಂದರ್ಭದಲ್ಲಿ ಮಾತನಾಡಿದ ಸಮಿತಿಯ ಸೊಪ್ಪುಗುಡ್ಡೆ ರಾಘವೇಂದ್ರ ಇಂದಿನ ಹೋರಾಟ ಬರೀ ಶ್ಯಾಂಪಲ್ ಅಷ್ಟೇ. ರಾಜದ್ಯಂತ ಒಂದು ಕೋಟಿಗೂ ಹೆಚ್ಚು ಜನ ಸೇರಿ ಪ್ರತೀ ತಾಲ್ಲೂಕಿ ನಲ್ಲೂ ಅಪಪ್ರಚಾರದ ವಿರುದ್ಧ ಹೋರಾಟ ಮಾಡುತ್ತೇವೆ. ಹಿಂದೂಗಳು ತಿರುಗಿನಿಂತರೆ ಪರಿಣಾಮ ಬೇರೆಯೇ ಆಗುತ್ತದೆ. ಧರ್ಮಸ್ಥಳವನ್ನು ಉಳಿಸಿ ಕೊಳ್ಳು ವುದು ನಮಗೆ ಗೊತ್ತಿದೆ ಎಂದರು.
ಸುಮಾರು ೧೦ ಸಾವಿರಕ್ಕೂ ಹೆಚ್ಚು ಹಿಂದೂ ದೇವಾಲಯ ಗಳನ್ನು ಮತ್ತು ಕೆರೆಗಳನ್ನು ಧರ್ಮ ಸ್ಥಳದ ಮೂಲಕ ಜೀರ್ಣೋದ್ಧಾರ ಮಾಡಲಾಗಿದೆ. ಆಗ ಜೈನರು ಎಂದು ಯಾರೂ ಕೇಳಿಲ್ಲ. ಈಗ ಹಿಂದೂ ಮತ್ತು ಜೈನ್ ಎಂದು ಒಡೆಯುವ ಪ್ರಯತ್ನ ಮಾಡುತ್ತಿzರೆ. ಯಾವನೋ ಒಬ್ಬ ಅನಾಮಿಕ ಡಿಸಿ ಕಛೇರಿಯ ಕೆಳಗೆ ನಾಲ್ಕು ಹೆಣ ಹೂತಿzನೆ ಎಂದರೆ ನಾಳೆ ಸರ್ಕಾರ ಅದನ್ನು ಅಗೆಯಲು ಸಿದ್ದವಿದೆಯೇ ಎಂದು ಪ್ರಶ್ನಿಸಿದರು.
ಖಾವಂದರ ಬಗ್ಗೆ ಮಾತನಾಡಿದರೆ ಸಹಿಸುವ ಪ್ರಶ್ನೆ ಯಿಲ್ಲ. ಶನಿವಾರ ತೀರ್ಥಹಳ್ಳಿ ಯಿಂದ ಹೋರಾಟ ಪ್ರಾರಂಭಿಸು ತ್ತೇವೆ. ರಾಜ್ಯದ ಎ ತಾಲ್ಲೂಕು ಗಳಲ್ಲೂ ಕನಿಷ್ಠ ೧೦ ಸಾವಿರ ಜನರನ್ನು ಸೇರಿಸಿ ಅಪಪ್ರಚಾರದ ವಿರುದ್ಧ ಹೋರಾಟ ಮಾಡುತ್ತೇವೆ. ಎ ಹಿಂದೂ ನಾಯಕರು ಮಠಾಧೀಶರು ಈ ಬಗ್ಗೆ ಧ್ವನಿಎತ್ತಬೇಕು ಎಂದು ಕರೆ ನೀಡಿದರು.
ರಾಷ್ಟ್ರಭಕ್ತ ಬಳಗದ ಸಂಚಾಲಕ ಕೆ.ಎಸ್. ಈಶ್ವರಪ್ಪ ಮಾತನಾಡಿ, ಧರ್ಮಸ್ಥಳ ಮತ್ತು ಧರ್ಮಾಧಿಕಾರಿಯವರ ಬಗ್ಗೆ ಅವಮಾನ ಮಾಡಿದರೆ ಯಾವುದೇ ತ್ಯಾಗಕ್ಕೂ ನಾವು ಸಿದ್ಧರಿzವೆ ಎಂದು ಈಗಾಗಲೇ ತೀರ್ಮಾನ ಮಾಡಿ ಯಾಗಿದೆ. ಯಾವುದೇ ಸೂಚನೆ ನೀಡದೆ ಇಷ್ಟು ಜನ ಹಿಂದೂಗಳು ಸೇರಿದ್ದೀರಿ. ಮೊದಲು ಅನಾಮಿಕ ನನ್ನು ಅರೆಸ್ಟ್‌ಮಾಡಿ. ಆತ ದಿನಕ್ಕೊಂದು ಜಗ ತೋರಿಸುತ್ತಿ zನೆ. ನಾಳೆ ಸಿಎಂ ಮನೆ ತೋರಿಸಿ ದರೆ ಅದನ್ನು ಒಡೆದುಹಾಕುತ್ತೀರಾ ಎಂದು ಖಾರವಾಗಿ ಪ್ರಶ್ನಿಸಿದರು.
ಧರ್ಮಸ್ಥಳ ಭಕ್ತರು ಜಗೃತ ರಾಗಿzರೆ. ಸುಮ್ಮನೆ ಕೂತಿಲ್ಲ. ಎಲ್ಲರೂ ಎದ್ದರೆ ಈ ಸರ್ಕಾರ ಇರಲ್ಲ. ಅನಾಮಿಕ ಯಾರು, ಎಸ್‌ಐಟಿ ಅಧಿಕಾರಿಗಳ ಪ್ರವೇಶವನ್ನು ಹಿಂದೂಗಳು ತಡೆದರೆ ಅದನ್ನು ಅಸ್ತ್ರವಾಗಿಟ್ಟುಕೊಂಡು ಗಲಭೆ ಎಬ್ಬಿಸುವ ಭ್ರಮೆಯಲ್ಲಿ ಕೆಲವರಿ zರೆ. ಎಸ್‌ಐಟಿ ಅಧಿಕಾರಿಗಳನ್ನು ನಾನು ಅಭಿನಂದಿಸುತ್ತೇನೆ. ಅವರು ಶಾಂತವಾಗಿ ಅನಾಮಿಕ ಹೇಳಿದ ಕಡೆಯಲೆ ಅಗೆದು ತನಿಖೆ ಮಾಡುತ್ತಿzರೆ. ಇದರಿಂದ ರಾಜ್ಯದೆಡೆ ಹಿಂದೂ ಸಮಾಜ ಒಂದು ರೀತಿಯಲ್ಲಿ ಒಟ್ಟಾಗಲು ಸಹಕಾರ ಕೊಡುತ್ತಿzನೆ ಅದಕ್ಕಾಗಿ ಅನಾಮಿಕನಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.
ಹೆಗ್ಗಡೆಯವರು ೨೫ ಲಕ್ಷಕ್ಕೂ ಹೆಚ್ಚು ಹೆಣ್ಣು ಮಕ್ಕಳಿಗೆ ಸ್ವ- ಉದ್ಯೋಗ ಕಲ್ಪಿಸಿದರು, ನೂರಾರು ಕೆರೆಗಳನ್ನು ಜೀರ್ಣೋದ್ಧಾರ ಮಾಡಿದರು, ಕುಡಿತದ ಚಟವನ್ನು ಬಿಡಿಸಿದರು, ಮತಾಂತರ ನಿಲ್ಲಿಸಿದರು, ಅವರ ವಿರುದ್ಧ ಕೆಲವು ಎಡಪಂಥೀಯರು ಮತ್ತು ಹಿಂದೂ ವಿರೋಧಿಗಳು ಒಗ್ಗಟ್ಟಾಗಿ ಷಡ್ಯಂತ್ರ ಮಾಡಿದರೆ ಹಿಂದೂ ಸಮಾಜ ತಕ್ಕಪಾಠ ಕಲಿಸುತ್ತದೆ ಎಂದರು.
ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಕೆ.ಬಿ. ಪ್ರಸನ್ನಕುಮಾರ್ ಅವರು ಮಾತನಾಡಿ, ಯಾರಿಗೂ ಅನ್ಯಾಯ ಮಾಡದ ಎಲ್ಲರಿಗೂ ಒಳಿತನ್ನೇ ಬಯಸುವ ವೀರೇಂದ್ರ ಹೆಗ್ಗಡೆಯವರ ಕುಟುಂಬಕ್ಕೆ ಅನಾಮಿಕನ ಹೆಸರಿನಲ್ಲಿ ಮಾನಸಿಕ ತೊಂದರೆಯನ್ನು ಕೊಡುತ್ತಿರುವ ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಮಾಡುತ್ತಿರುವ ಎ ದುಷ್ಟಶಕ್ತಿಗಳಿಗೂ ತಕ್ಕ ಉತ್ತರ ಹಿಂದೂಗಳು ನೀಡುತ್ತಾರೆ ಎಂದರು.
ಬಿಜೆಪಿ ಪ್ರಮುಖ ಎಸ್. ದತ್ತಾತ್ರಿ ಮಾತನಾಡಿ, ರಾಷ್ಟ್ರೀಯ ಸ್ವಯಂ ಸೇವಕ ಸಂಘವು ಹಿಂದೂ ಪುಣ್ಯಕ್ಷೇತ್ರಗಳ ಸಂರಕ್ಷಣಾ ಸಮಿತಿ ರಚನೆ ಮಾಡಿದ್ದು, ಧಾರ್ಮಿಕ ಕೇಂದ್ರಗಳ ಶಕ್ತಿ ಕುಗ್ಗಿಸುವ ಕೆಲಸ ಎಲ್ಲಿ ನಡೆಯುತ್ತಿದೆಯೋ ಅಲ್ಲಿ ಜಗೃತಿ ಸಮಾವೇಶ ಹಮ್ಮಿಕೊಂಡು, ಹಿಂದೂ ಧಾರ್ಮಿಕ ಕ್ಷೇತ್ರಗಳ ಸಂರಕ್ಷಣೆ ಮಾಡಲು ಪ್ರಾರಂಭಿಸಿದೆ ಎಂದರಲ್ಲದೇ, ಎಡಪಂಥೀಯರ ಮಾತು ಕೇಳಿ ಧರ್ಮಸ್ಥಳದ ಶಕ್ತಿ ಕುಂದಿಸುವ ಯಾವುದೇ ಪ್ರಯತ್ನ ಫಲಿಸುವುದಿಲ್ಲ ಎಂದರು.
ಪ್ರಮುಖರಾದ ಕೆ.ಈ. ಕಾಂತೇಶ್, ಮೋಹನ್‌ಶೆಟ್ಟಿ ನಿಟ್ಟೂರು, ಜಯರಾಜ್ ಬಿ. ಪಾಂಡೆ, ಧನಕೀರ್ತಿ, ಯಶೋಧರ ಹೆಗ್ಗಡೆ, ವಿಜಯ್ ಕುಮಾರ್ ದಿನಕರ್, ಶಾಂತಾ ಸುರೇಂದ್ರ, ರಶ್ಮೀ ಶ್ರೀನಿವಾಸ್, ಸುರೇಖಾ ಮುರಳೀಧರ್, ಬಳ್ಳೆಕೆರೆ ಸಂತೋಷ್, ದಿವಾಕರ್ ಶೆಟ್ಟಿ, ಜಗದೀಶ್ ಸೇರಿದಂತೆ ಶ್ರೀ ಹೊಂಬಜ ಜೈನ ಮಠದ ಭಕ್ತಾಧಿಗಳು, ಜೈನ್ ಮಿಲನ್ ಶಿವಮೊಗ್ಗ ಸಂಸ್ಥೆಯ ಪದಾಧಿಕಾರಿಗಳು, ದಿಗಂಬರ ಜೈನ ಸಂಘ ಶಿವಮೊಗ್ಗ ಮತ್ತು ಶ್ರೀ ಧರ್ಮಸ್ಥಳ ಭಕ್ತಾಭಿಮಾನಿಗಳ ವೇದಿಕೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.