ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಜಿಲ್ಲಾ ಜೆಡಿಎಸ್‌ನಿಂದ ಬೃಹತ್ ಪ್ರತಿಭಟನೆ…

Share Below Link

ಶಿವಮೊಗ್ಗ: ರಾಜ್ಯದಲ್ಲಿ ಭಾರೀ ಸದ್ದು ಮಾಡುತ್ತಿರುವ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪೆನ್ ಡ್ರೈವ್ ಹಂಚಿಕೆ ಪ್ರಕರಣದ ತನಿಖೆ ಯನ್ನು ಸಿಬಿಐಗೆ ಹಸ್ತಾಂತರಿಸಬೇಕು ಎಂದು ಆಗ್ರಹಿಸಿ ಶಿವಮೊಗ್ಗ ಜಿಲ್ಲಾ ಜೆಡಿಎಸ್ ನೇತೃತ್ವದಲ್ಲಿ ಇಂದು ಪ್ರತಿಭಟನೆ ನಡೆಸಿ ಜಿಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.
ಪೆನ್‌ಡ್ರೈವ್ ಹಂಚಿಕೆಗೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರೇ ಮಾಸ್ಟರ್ ಮೈಂಡ್ ಆಗಿzರೆ. ಅವರನ್ನು ಕೂಡಲೇ ಸಚಿವ ಸಂಪುಟದಿಂದ ವಜ ಮಾಡಬೇಕು. ಮಹಿಳೆಯರ ಮಾನಹಾನಿಗೆ ಕಾರಣವಾಗಿರುವ ಅಶ್ಲೀಲ ವಿಡಿಯೋಗಳ ಹಂಚಿಕೆ ಮಾಡುವುದನ್ನು ತಡೆಯಲು ರಾಜ್ಯ ಸರ್ಕಾರ ವಿಫಲವಾಗಿದೆ. ನೊಂದ ಮಹಿಳೆಯರ ಅಶ್ಲೀಲ ವಿಡಿಯೋಗಳನ್ನು ಸುಮಾರು ೨೫ ಸಾವಿರ ಪೆನ್ ಡ್ರೈವ್‌ಗಳ ಮೂಲಕ ಹಂಚಲಾಗಿದೆ. ಇದರಲ್ಲಿ ಡಿ.ಕೆ. ಶಿವಕುಮಾರ್ ಪಾತ್ರವಿದ್ದು, ಅವರನ್ನು ವಜಗೊಳಿಸಬೇಕು ಮತ್ತು ಸೋರಿಕೆ ಮಾಡಿರುವ ಕಿಡಿಗೇಡಿಗಳನ್ನು ಬಂಧಿಸಬೇಕು ಎಂದು ಆಗ್ರಹಿಸಿದರು.
ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು, ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರ ವರ್ಚಸ್ಸನ್ನು ಹಾಳು ಮಾಡಲು, ಜೆಡಿಎಸ್ ಪಕ್ಷ ನಿರ್ನಾಮ ಮಾಡಲು ಈ ಸಂಚು ರೂಪಿಸಲಾಗಿದೆ ಎಂದು ಆರೋಪಿಸಿದ ಪ್ರತಿಭಟನಾಕಾರರು ಎಸ್‌ಐಟಿ ತನಿಖೆಯಿಂದ ಏನೂ ಉಪಯೋಗವಾಗುವುದಿಲ್ಲ. ಇದನ್ನು ರದ್ದುಪಡಿಸಿ ಸಿಬಿಐ ತನಿಖೆಗೆ ವಹಿಸಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.
ಈ ಸಂದರ್ಭದಲ್ಲಿ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಶಾಸಕಿ ಶಾರದಾ ಪೂರ್ಯಾನಾಯ್ಕ್, ಜೆಡಿಎಸ್ ಜಿಧ್ಯಕ್ಷ ಕಡಿದಾಳ್ ಗೋಪಾಲ್, ಜಿಲ್ಲಾ ಕಾರ್‍ಯಾಧ್ಯಕ್ಷರಾದ ದಾದಾಪೀರ್, ರಾಮಕೃಷ್ಣ, ರಾಜ್ಯ ಕಾರ್ಯದರ್ಶಿ ಶಾರದಾ ಅಪ್ಪಾಜಿಗೌಡ, ಮಾಜಿ ಶಾಸಕ ಕೆ.ಬಿ. ಪ್ರಸನ್ನಕುಮಾರ್, ಜೆಡಿಎಸ್ ಯುವ ಘಟಕದ ಅಧ್ಯಕ್ಷ ಮಧು ಕುಮಾರ್, ಕಾರ್‍ಯಾಧ್ಯಕ್ಷ ಎಸ್.ಎಲ್. ನಿಖಿಲ್, ಜೆಡಿಎಸ್ ನಗರ ಘಟಕದ ಅಧ್ಯಕ್ಷ ದೀಪಕ್ ಸಿಂಗ್, ಪ್ರಮುಖರಾದ ನರಸಿಂಹ ಗಂಧದಮನೆ, ಹೆಚ್.ಎಂ. ಸಂಗಯ್ಯ, ತ್ಯಾಗರಾಜ್, ರಾಜಣ್ಣ, ಸಿದ್ದಪ್ಪ, ಗೀತಾ ಸತೀಶ್, ಪುಷ್ಪಾವತಿ, ಲೋಹಿತ್, ಗೋಪಿ, ಮೊದಲಾದವರಿದ್ದರು.

This image has an empty alt attribute; its file name is Arya-coll.gif