ತಂಬಾಕು ಸೇವೆನೆಯಿಂದ ಲಕ್ಷಾಂತರ ಜನರ ಸಾವು…
ಶಿವಮೊಗ್ಗ ತಂಬಾಕು ಸೇವನೆ ಯಿಂದ ಪ್ರತಿ ವರ್ಷ ೧೦ ಲಕ್ಷ ಜನರು ಸಾವನ್ನಪ್ಪುತ್ತಿದ್ದು, ಮಾದಕ ವಸ್ತುಗಳ ವ್ಯಸನದಿಂದ ದೂರ ಇರಬೇಕು ಎಂದು ಆರೋಗ್ಯ ಇಲಾಖೆಯ ಜಿ ಸಲಹೆಗಾರ ಹೇಮಂತ್ ರಾಜ್ ಅರಸ್ ಹೇಳಿ ದರು.
ಶಿವಮೊಗ್ಗ ನಗರದ eನಗಂಗೋತ್ರಿ ಪದವಿಪೂರ್ವ ಕಾಲೇಜಿನಲ್ಲಿ ಜೆಸಿಐ ಸಹ್ಯಾದ್ರಿ ಶಿವಮೊಗ್ಗ ವತಿಯಿಂದ ಆಯೋಜಿ ಸಿದ್ದ ತಂಬಾಕು ಹಾಗೂ ಮಾದಕ ವಸ್ತು ಸೇವನೆಯ ದುಷ್ಪರಿಣಾಮ ಗಳು ಕುರಿತ ಜಗೃತಿ ಕಾರ್ಯಕ್ರ ಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿದರು.
ಕೆಲವರು ತಂಬಾಕು, ಮಾದಕ ವಸ್ತುಗಳನ್ನು ತಿನ್ನುವ ಮೂಲಕ ದುಶ್ಚಟಗಳಿಗೆ ದಾಸರಾಗಿ ಜೀವನ ಹಾಳುಮಾಡಿಕೊಳ್ಳುತ್ತಿzರೆ. ತಂಬಾಕು, ಮಾದಕ ವಸ್ತುಗಳು ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟುಮಾಡುವ ಜತೆಯಲ್ಲಿ ಜೀವಕ್ಕೆ ಹಾನಿಯುಂಟು ಮಾಡು ತ್ತದೆ ಎಂದು ತಿಳಿಸಿದರು.
ಯುವಜನರು ಮಾದಕ ವ್ಯಸನಿಗಳಾಗುವುದರಿಂದ ನರ ಮಂಡಲ ವ್ಯವಸ್ಥೆ ಮೇಲೆ ಪರಿ ಣಾಮ ಬೀರಿ ಮಾನಸಿಕವಾಗಿ ತೊಂದರೆ ಅನುಭವಿಸುತ್ತಾರೆ. ನೆನಪಿನ ಶಕ್ತಿ ಕಳೆದುಕೊಳ್ಳುತ್ತಾರೆ. ವಿದ್ಯಾರ್ಥಿಗಳು ಮಾದಕ ವ್ಯಸನ ಗಳ ಸೇವನೆಯಿಂದ ಆಗುವ ದುಷ್ಪ ರಿಣಾಮಗಳ ಬಗ್ಗೆ ಅರಿತುಕೊಳ್ಳ ಬೇಕು ಎಂದರು.
ಜಗೃತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜೆಸಿಐ ಶಿವಮೊಗ್ಗ ಸಹ್ಯಾದ್ರಿ ಅಧ್ಯಕ್ಷೆ ಸುಷ್ಪಾ ಹಿರೇಮಠ್ ಮಾತನಾಡಿ, ಜೆಸಿಐ ಸಪ್ತಾಹದ ಪ್ರಯುಕ್ತ ಶಾಲಾ ಕಾಲೇಜುಗಳಲ್ಲಿ ಜಗೃತಿ ಕಾರ್ಯ ಕ್ರಮಗಳನ್ನು ಹಮ್ಮಿಕೊಂಡಿದ್ದು, ವಿದ್ಯಾರ್ಥಿಗಳು ಜೀವನದಲ್ಲಿ ದುಶ್ಚಟಗಳಿಂದ ದೂರ ಇರಬೇಕು. ಯಾವುದೇ ಕೆಟ್ಟ ಅಭ್ಯಾಸಗಳನ್ನು ಕಲಿಯಬಾರದು ಎಂದರು.
ರೋಟರಿ ಮಾಜಿ ಸಹಾಯಕ ಗವರ್ನರ್ ಜಿ.ವಿಜಯ್‌ಕುಮಾರ್ ಮಾತನಾಡಿ, ವಿದ್ಯಾರ್ಥಿಗಳಿಗೆ ಅರಿವು ಮೂಡಿಸುವ ಇಂತಹ ಕಾರ್ಯಕ್ರಮಗಳ ಆಯೋಜನೆ ಮಾಡಿರುವುದು ಶ್ಲಾಘನೀಯ ಕಾರ್ಯ. ವಿದ್ಯಾರ್ಥಿಗಳು ಮಾದಕ ವ್ಯಸನಕ್ಕೆ ಬಲಿಯಾಗಬಾರದು ಎಂದು ತಿಳಿಸಿದರು.
ಶಿವಮೊಗ್ಗ ಜಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಉಚಿತ ಸಲಹೆ, ಆಪ್ತ ಸಮಾಲೋಚನೆ ಚಿಕಿತ್ಸೆ ದೊರೆ ಯುತ್ತದೆ. ಇದರ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು. ಜೆಸಿಐ ಪದಾಧಿಕಾರಿಗಳು ಉಪಸ್ಥಿತರಿದ್ದರು.