ಆರೋಗ್ಯಜಿಲ್ಲಾ ಸುದ್ದಿರಾಜಕೀಯ

ದಿಢೀರ್ ಮೆಗ್ಗಾನ್ ಆಸ್ಪತ್ರೆಗೆ ಎಂಟ್ರಿಕೊಟ್ಟ ಸಚಿವ ಮಧು ಬಂಗಾರಪ್ಪ…

Share Below Link

ಶಿವಮೊಗ್ಗ: ಜಿ ಉಸ್ತುವಾರಿ ಸಚಿವರಾದ ಮಧು ಬಂಗಾರಪ್ಪರವರು ಸೋಮವಾರ ಜಿ ಮೆಗ್ಗಾನ್ ಬೋಧನಾ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿ ಪರಿವೀಕ್ಷಣೆ ನಡೆಸಿದರು.
ಹೊರರೋಗಿಗಳ ವಿಭಾಗ, ಮೂಳೆ ಮತ್ತು ಕೀಲು ವಿಭಾಗ, ಹೊರ ವಿಭಾಗ, ಡಯಾಲಿಸಿಸ್ ವಿಭಾಗ, ಚರ್ಮ ರೋಗ ವಿಭಾಗ ಹಾಗೂ ಜನರಲ್ ಮೆಡಿಸಿನ್ ವಾರ್ಡ್ ಸೇರಿದಂತೆ ವಿವಿಧ ವಿಭಾಗಗಳಿಗೆ ಭೇಟಿ ನೀಡಿ ರೋಗಿಗಳೊಂದಿಗೆ ಸಾರ್ವಜನಿಕರು ಹಾಗೂ ಆಸ್ಪತ್ರೆ ನಾನ್ ಕ್ಲಿನಿಕಲ್ ಸಿಬ್ಬಂದಿಗಳೊಂದಿಗೆ ಮಾತನಾಡಿ ಕುಂದು ಕೊರತೆ ಆಲಿಸಿದರು.
ಹೊರ ಜಿ ಗಳ ರೋಗಿಗಳ ಮಾಹಿತಿ ಹಾಗೂ ಎಂಆರ್‌ಐ ಸ್ಕ್ಯಾನ್ ಸೇರಿದಂತೆ ವಿವಿಧ ವಿಭಾಗಗಳ ಮಾಹಿತಿ ನೀಡಲು ಸೂಚನೆ ನೀಡಿದರು.
ಈ ವೇಳೆ ಜಿಧಿಕಾರಿ ಗುರುದತ್ತ ಹೆಗಡೆ, ಸಿಮ್ಸ್ ನಿರ್ದೇಶಕರು ವಿರೂಪಾಕ್ಷಪ್ಪ, ಮೆಗ್ಗಾನ್ ಆಸ್ಪತ್ರೆ ವೈದ್ಯಕೀಯ ಅಧೀಕ್ಷಕ ಡಾ.ತಿಮ್ಮಪ್ಪ, ಜಿ ಶಸ್ತ್ರಚಿಕಿತ್ಸಕ ಡಾ.ಸಿದ್ದನಗೌಡ ಪಾಟೀಲ್, ಮುಖಂಡರು, ವೈದ್ಯರು, ಸಾರ್ವಜನಿಕರು ಹಾಜರಿದ್ದರು.
ಸಭೆ: ವೀಕ್ಷಣೆ ನಂತರ ಉಸ್ತುವಾರಿ ಸಚಿವರು ಆಸ್ಪತ್ರೆ ಅಧಿಕಾರಿಗಳು ಹಾಗೂ ಜಿಧಿಕಾರಿಗಳೊಂದಿಗೆ ಸಭೆ ನಡೆಸಿವ ಹೊಸ ಓಪಿಡಿ ಕೌಂಟರ್ ನಿರ್ಮಾಣಕ್ಕೆ ಅಂದಾಜುಪಟ್ಟಿ ಸಿದ್ದಪಡಿಸಲು , ೫ ಡಯಾಲಿಸಿಸ್ ಮಷೀನ್ಗಳು, ಡಾರ್ಮೆಟರಿ ನಿರ್ಮಾಣಕ್ಕೆ ಪ್ರಸ್ತಾವನೆ ನೀಡಲು ಸೂಚನೆ ನೀಡಿದರು.
ತಾಯಿ ಮರಣ ಪ್ರಮಾಣ ಕಡಿಮೆ ಮಾಡಲು ಎಲ್ಲ ರೀತಿಯಲ್ಲಿ ಪರಿಣಾಮಕಾರಿ ಕ್ರಮ ವಹಿಸಲು ಸೂಚಿಸಿದ ಅವರು ಹೊರ ಜಿಗಳಿಂದ ಬರುವ ಗರ್ಭಿಣಿಯರು ಇಲ್ಲಿ ಪ್ರಸವ ಆಗುವ ಕುರಿತಾದ ಮಾಹಿತಿ ನೀಡಲು ತಿಳಿಸಿದರು.
ಆಸ್ಪತ್ರೆಗೆ ಅಗತ್ಯವಿರುವ ಹೆಚ್ಚುವರಿ ವೆಂಟಿಲೇಟರ್ ಗಳ ಮಾಹಿತಿ ನೀಡುವಂತೆ ಹಾಗೂ ಎನ್ ಐ ಸಿಯು ಎಂಸಿಹಚ್(ತಾಯಿ ಮತ್ತು ಮಕ್ಕಳ ವಿಭಾಗ) ಬ್ಲಾಕ್, ವಿವರ, ಒಬಿಜಿ, ಪಿಡಿಯಾಟ್ರಿಕ್ ಸೇರಿದಂತೆ ವಿವಿಧ ವಿಭಾಗಗಳ ನೀರು ಲೀಕೇಜ್ ಸಮಸ್ಯೆ ಸೇರಿದಂತೆ ಆಸ್ಪತ್ರೆಯ ಒಟ್ಟಾರೆ ಸಮಸ್ಯೆಗಳು ಹಾಗೂ ಅಗತ್ಯವಿರುವ ಸೌಲಭ್ಯಗಳ ಕುರಿತು ಪ್ರಸ್ತಾವನೆ ಸಿದ್ದಪಡಿಸಲು ಸೂಚಿಸಿದ ಅವರು ಈ ಕುರುತು ಕುರಿತು ೨೩-೦೭-೨೫ ರಂದು ವೈದ್ಯಕೀಯ ಶಿಕ್ಷಣ ಸಚಿವರೊಂದಿಗೆ ಸಭೆ ನಡೆಸಿ ಮಾತನಾಡುತ್ತೇನೆ ಎಂದರು.