ಜಿಲ್ಲಾ ಸುದ್ದಿತಾಜಾ ಸುದ್ದಿಶಿಕ್ಷಣ

ಮಶ್ವರಂ ಕೆಪಿಎಸ್ ಶಾಲೆಗೆ ಭೇಟಿ ನೀಡಿ ವಿದ್ಯಾರ್ಥಿಗಳಿಗೆ ಶುಭಹಾರೈಸಿದ ಸಚಿವ ಮಧು ಬಂಗಾರಪ್ಪ

Share Below Link

ಬೆಂಗಳೂರು : ರಾಜ್ಯದಾದ್ಯಂತ ೨೦೨೬ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-೧ ಇಂದಿನಿಂದ ಆರಂಭವಾಗಿದೆ. ಈ ಹಿನ್ನೆಲೆಯಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಾದ ಎಸ್. ಮಧು ಬಂಗಾರಪ್ಪ ಅವರು ಬೆಂಗಳೂರಿನ ಮಶ್ವರಂನ ೧೩ನೇ ಅಡ್ಡರಸ್ತೆಯ ಲ್ಲಿರುವ ಕರ್ನಾಟಕ ಪಬ್ಲಿಕ್ ಶಾಲೆ (ಕೆಪಿಎಸ್)ಗೆ ಭೇಟಿ ನೀಡಿ ಪರೀಕ್ಷಾ ವ್ಯವಸ್ಥೆಯನ್ನು ಪರಿಶೀಲಿಸಿದರು. ಈ ವೇಳೆ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ಆತ್ಮವಿಶ್ವಾಸ ತುಂಬಿ ಶುಭ ಹಾರೈಸಿದರು.
ಈ ವರ್ಷ ರಾಜ್ಯದಾದ್ಯಂತ ಒಟ್ಟು ೮,೬೫,೯೮೮ ವಿದ್ಯಾರ್ಥಿಗಳು ೨,೮೭೦ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಎದುರಿಸುತ್ತಿzರೆ. ವಿಶೇಷ ವಾಗಿ ೧೬ ಮಂದಿ ದೃಷ್ಟಿಮಾಂದ್ಯ ವಿದ್ಯಾರ್ಥಿಗಳು ಬರಹಗಾರರ ಸಹಾಯವಿಲ್ಲದೆ ಸ್ವತಃ ಲ್ಯಾಪ್ ಟಾಪ್ ಬಳಸಿ ಪರೀಕ್ಷೆ ಬರೆಯುತ್ತಿರು ವುದು ಗಮನಾರ್ಹ ಸಾಧನೆಯಾಗಿದೆ.
ಪರೀಕ್ಷೆಗೆ ಹಾಜರಾಗುತ್ತಿರುವ ವರಲ್ಲಿ ಸರ್ಕಾರಿ ಶಾಲೆಗಳ ೩,೫೯,೫೯೪ ವಿದ್ಯಾರ್ಥಿಗಳು, ಅನುದಾನಿತ ಶಾಲೆಗಳ ೨,೧೧,೪೮೬ ವಿದ್ಯಾರ್ಥಿಗಳು ಹಾಗೂ ಅನುದಾನರಹಿತ ಶಾಲೆಗಳ ೨,೯೪,೯೦೮ ವಿದ್ಯಾರ್ಥಿಗಳು ಸೇರಿzರೆ.


ವಿದ್ಯಾರ್ಥಿಗಳಿಗೆ ಸಚಿವರ ಸಲಹೆ:
ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿಗಳೊಂದಿಗೆ ಮಾತನಾಡಿದ ಸಚಿವರು, ಯಾವುದೇ ಆತಂಕವಿಲ್ಲದೆ ಮತ್ತು ಒತ್ತಡವಿಲ್ಲದೆ ಪರೀಕ್ಷೆ ಬರೆಯುವಂತೆ ಸಲಹೆ ನೀಡಿದರು. ಪೋಷಕರು ಕೂಡ ಮಕ್ಕಳ ಮೇಲೆ ಒತ್ತಡ ಹೇರುವುದನ್ನು ತಪ್ಪಿಸಬೇಕು ಎಂದು ಮನವಿ ಮಾಡಿದರು. ಪರೀಕ್ಷೆಗೆ ಪೂರ್ವಭಾವಿಯಾಗಿ ಮೂರು ಪೂರ್ವಸಿದ್ಧತಾ ಪರೀಕ್ಷೆಗಳು ನಡೆಸಿರುವುದರಿಂದ ವಿದ್ಯಾರ್ಥಿ ಗಳಲ್ಲಿ ಆತ್ಮವಿಶ್ವಾಸ ಹೆಚ್ಚಿದೆ ಎಂದರು. ಸಾಮಾಜಿಕ ಜಲತಾಣಗಳಲ್ಲಿ ಹರಡುವ ಸುಳ್ಳು ಸುದ್ದಿಗಳು ಹಾಗೂ ಆಮಿಷಗಳಿಗೆ ಒಳಗಾಗಿ ತಪ್ಪು ದಾರಿ ಹಿಡಿಯಬಾರದು ಎಂದು ಎಚ್ಚರಿಸಿದರು.
ಪರೀಕ್ಷಾ ಅಕ್ರಮಗಳನ್ನು ತಡೆಯುವ ನಿಟ್ಟಿನಲ್ಲಿ ಎ ಕೇಂದ್ರಗಳಲ್ಲಿ ವೆಬ್‌ಕಾಸ್ಟಿಂಗ್ ಮೂಲಕ ನಿಗಾ ವಹಿಸಲಾಗಿದೆ. ಪ್ರತಿದಿನ ಪ್ರಶ್ನೆಪತ್ರಿಕೆಗಳನ್ನು ಪೊಲೀಸ್ ಭದ್ರತೆಯಲ್ಲಿ ಪರೀಕ್ಷಾ ಕೇಂದ್ರಗಳಿಗೆ ತಲುಪಿಸಲಾಗುತ್ತಿದೆ. ಜಿ ಆಡಳಿತದ ಸಹಕಾರದಿಂದ ಪರೀಕ್ಷೆಯನ್ನು ಸುಗಮವಾಗಿ ನಡೆಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದರು.
ವಿದ್ಯಾರ್ಥಿಗಳು ಭಯಮುಕ್ತವಾಗಿ ಹಾಗೂ ಸಂತೋಷದಿಂದ ಪರೀಕ್ಷೆ ಬರೆಯಲಿ, ಎಲ್ಲರಿಗೂ ಯಶಸ್ಸು ದೊರಕಲಿ ಎಂದು ಸಚಿವ ಮಧು ಬಂಗಾರಪ್ಪ ಅವರು ಹಾರೈಸಿದರು.

Leave a Reply

Your email address will not be published. Required fields are marked *