ಇತರೆತಾಜಾ ಸುದ್ದಿರಾಜಕೀಯ

ಗ್ರಾಮಸ್ಥರಿಂದ ಅಹವಾಲು ಸ್ವೀಕರಿಸಿದ ಶಾಸಕ ಬಸವಂತಪ್ಪ; ಕುಡಿವ ನೀರಿನ ಸಮಸ್ಯೆ ಪರಿಹಾರಕ್ಕೆ ಸೂಚನೆ..

Share Below Link

ದಾವಣಗೆರೆ: ಮಾಯಕೊಂಡ ವಿಧಾನಸಭಾ ಕ್ಷೇತ್ರದ ಚನ್ನಗಿರಿ ತಾಲೂಕಿನ ವಿವಿಧ ಗ್ರಾಮಗಳಿಗೆ ಮಾಯಕೊಂಡ ಶಾಸಕ ಕೆ.ಎಸ್. ಬಸವಂತಪ್ಪ ಭೇಟಿ ನೀಡಿ ಗ್ರಾಮಸ್ಥರ ಸಮಸ್ಯೆಗಳನ್ನು ಆಲಿಸಿ, ಗೆಲುವಿಗೆ ಕಾರಣರಾದ ಮತದಾರರಿಗೆ ಕೃತಜ್ಞತೆ ಸಲ್ಲಿಸಿದರು.
ಚನ್ನಗಿರಿ ತಾಲೂಕಿನ ಬಸವಾ ಪಟ್ಟಣ, ಹರಲಿಪುರ, ಮರಬನ ಹಳ್ಳಿ, ಕೋಟೆಹಾಳು, ಹರೋಸಾಗರ ಸೇರಿದಂತೆ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಸಾರ್ವಜನಿಕರಿಂದ ಅಹವಾಲು ಆಲಿಸಿ, ಸ್ಥಳದಲ್ಲಿಯೇ ಕೆಲವು ಸಮಸ್ಯೆಗಳಿಗೆ ಪರಿಹಾರ ಕೊಡಿಸಿದರು.
ಹರಲಿಪುರ ಗ್ರಾಮದ ಆಸ್ಪತ್ರೆ ಮತ್ತು ಕ್ವಾಟ್ರಸ್ ನಿರ್ಮಾಣದ ಕಾಮಗಾರಿ ಪರಿಶೀಲನೆ ನಡೆಸಿದರು. ಬಳಿಕ ಉರ್ದು ಶಾಲೆಗೆ ಭೇಟಿ ನೀಡಿ ಮಕ್ಕಳ ಶಿಕ್ಷಣ ಪ್ರಗತಿ ಬಗ್ಗೆ ಮಾಹಿತಿ ಪಡೆದರು. ಇದೇ ಸಂದರ್ಭದಲ್ಲಿ ಮತದಾರರಿಗೆ ಕೃತಜ್ಞತೆ ಸಲ್ಲಿಸಿದ ವೇಳೆ ಗ್ರಾಮಸ್ಥರು ಶಾಸಕರನ್ನು ಅಭಿನಂದಿಸಿದರು.
ಮರಬನಹಳ್ಳಿ ಗ್ರಾಮಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ದೇವಸ್ಥಾನ ನಿರ್ಮಿಸಿ ಕೊಡುವಂತೆ ಮನವಿ ಮಾಡಿದ ಗ್ರಾಮಸ್ಥರಿಗೆ ನಿರ್ಮಿಸಿ ಕೊಡುವುದಾಗಿ ಭರವಸೆ ನೀಡಿದರು. ನಂತರ ಕೋಟೆಹಾಳ್ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಭೇಟಿ ನೀಡಿ ರೈತರಿಗೆ ಸಾಲಸೌಲಭ್ಯ ನೀಡಿರುವ ಬಗ್ಗೆ ಪರಿಶೀಲನೆ ನಡೆಸಿದರು. ಬಳಿಕ ನ್ಯಾಯಬೆಲೆ ಅಂಗಡಿಗೆ ಭೇಟಿ ನೀಡಿದ ಶಾಸಕರು, ಪಡಿತರದಾರ ರಿಗೆ ಸಮರ್ಪಕವಾಗಿ ಪಡಿತರ ವಿತರಣೆ ಬಗ್ಗೆ ಮಾಹಿತಿ ಪಡೆದರು.
ಬಸವಾಪಟ್ಟಣ ಹೋಬಳಿ ವ್ಯಾಪ್ತಿಯ ಕೆಲವು ಗ್ರಾಮಗಳಿಗೆ ಶಾಸಕ ಕೆ.ಎಸ್.ಬಸವಂತಪ್ಪ ಭೇಟಿ ನೀಡಿದ ಸಂದರ್ಭದಲ್ಲಿ ಗ್ರಾಮಸ್ಥರು ಕುಡಿಯುವ ನೀರಿನ ಸಮಸ್ಯೆ ಬಗೆಹರಿಸುವಂತೆ ಅಹವಾಲು ಸಲ್ಲಿಸಿದರು. ಕೂಡಲೇ ಸಂಬಂಧ ಪಟ್ಟ ಅಧಿಕಾರಿಗಳಿಗೆ ದೂರವಾಣಿ ಮೂಲಕ ಮಾತನಾಡಿ ಕುಡಿಯುವ ನೀರಿನ ಸಮಸ್ಯೆಗೆ ಪರಿಹಾರ ಸೂಚಿಸಿದರು.
ಈ ಸಂದರ್ಭದಲ್ಲಿ ಹರೋ ಸಾಗರ ಪ್ರಕಾಶ್, ಸಂಗಾನಹಳ್ಳಿ ಹನುಮಂತಪ್ಪ, ಸೈಯದ್ ಜಹೀರ್ ಸೇರಿದಂತೆ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಇದ್ದರು.