ಜಿಲ್ಲಾ ಸುದ್ದಿತಾಜಾ ಸುದ್ದಿಶಿಕ್ಷಣ

ಅಣಕು ಸಂಸತ್ ಸ್ಪರ್ಧೆಗಳು ವಿದ್ಯಾರ್ಥಿಗಳಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆಯ ಅರಿವು ಮೂಡಿಸುತ್ತದೆ…

Share Below Link

ಶಿವಮೊಗ್ಗ : ಅಣಕು ಸಂಸತ್ ಸ್ಪರ್ಧೆಗಳು ವಿದ್ಯಾರ್ಥಿಗಳಲ್ಲಿ ಪ್ರಜಪ್ರಭುತ್ವ ವ್ಯವಸ್ಥೆಯ ಅರಿವನ್ನು ವಿಸ್ತರಿಸುತ್ತವೆ ಎಂದು ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಶಿವಮೊಗ್ಗ ನಿರ್ದೇಶಕ ಚಂದ್ರಪ್ಪ ಎಸ್. ಗುಂಡಪಲ್ಲಿ ಹೇಳಿದರು.
ಅವರು ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನಾ ಇಲಾಖೆ ಬೆಂಗಳೂರು, ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಮತ್ತು ಡಿ.ವಿ.ಎಸ್. ಸಂಯುಕ್ತ ಪದವಿ ಪೂರ್ವ ಕಾಲೇ ಜು, ಶಿವಮೊಗ್ಗ ಇವರ ಸಹಯೋಗ ದೊಂದಿಗೆ ೨೦೨೫-೨೬ನೇ ಸಾಲಿನ ಪದವಿ ಪೂರ್ವ ಕಾಲೇಜು ವಿದ್ಯಾ ರ್ಥಿಗಳಿಗಾಗಿ ಜಿ.ಪಂ. ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಅಣಕು ಸಂಸತ್ ಸ್ಪರ್ಧೆಯ ಉದ್ಘಾಟನಾ ಸಮಾ ರಂಭದ ಅಧ್ಯಕ್ಷತೆ ವಹಿಸಿ ಮಾತ ನಾಡಿದರು.


ದೈನಂದಿನ ಜೀವನದಲ್ಲಿ ನಡೆಯುವ ಪ್ರಚಲಿತ ಘಟನೆ ಗಳು, ಪ್ರಶ್ನೆಗಳನ್ನು ಗಮನಿಸಿದರೆ ಇವತ್ತಿನ ಯುವ ಪೀಳಿಗೆ ಎತ್ತ ಸಾಗುತ್ತಿದೆ ಎಂಬ ಪ್ರಶ್ನೆ ಮೂಡುತ್ತದೆ. ಅರ್ಥ ಪೂರ್ಣ ವಾಗಿ ಭಾಗವಹಿಸುವ ಮೂಲಕ ರಾಜ್ಯ,ರಾಷ್ಟ್ರ ಮಟ್ಟಕ್ಕೆ ಆಯ್ಕೆ ಆಗಬೇಕು. ತೀರ್ಪುಗಾರರು ನ್ಯಾಯಾಧೀಶರ ಸ್ಥಾನದಲ್ಲಿದ್ದು ನಿಷ್ಪಕ್ಷಪಾತವಾಗಿ ತೀರ್ಪು ನೀಡುತ್ತಾರೆಂದರು.
ಕಾರ್ಯಕ್ರಮವನ್ನು ಉದ್ಘಾಟಿ ಸಿದ ಶಿವಮೊಗ್ಗ ಜಿಪಂ ಉಪ ಕಾರ್ಯದರ್ಶಿ-೨ ಅನ್ನಪೂರ್ಣ ಮಾತನಾಡಿ, ಈ ರೀತಿಯ ಕಾರ್ಯ ಕ್ರಮಗಳಿಂದ ನಮ್ಮ ರಾಷ್ಟ್ರದ ರಾಜಕೀಯ ವ್ಯವಸ್ಥೆ, ಸಂಸದೀಯ ವ್ಯವಹಾರಗಳು ಹೇಗೆ ನಡೆಯುತ್ತವೆ ಎಂಬ eನ ವಿದ್ಯಾರ್ಥಿಗಳಿಗೆ ತಿಳಿಯುತ್ತದೆ ಎಂದರು.
ಡಿ.ವಿ.ಎಸ್. ಅಧ್ಯಕ್ಷ ಕೆ.ಎನ್. ರುದ್ರಪ್ಪ ಕೊಳಲೆ ಮುಖ್ಯ ಅತಿಥಿಯಾಗಿ ಮಾತನಾಡಿ, ಅವರು ೬೩ ವರ್ಷಗಳ ಹಿಂದಿನ ತಮ್ಮ ವಿದ್ಯಾರ್ಥಿ ಜೀವನದ ಕಾಲೇಜು ದಿನಗಳನ್ನು ನೆನಪು ಮಾಡಿಕೊಂಡು ತಾವು ವಿರೋಧ ಪಕ್ಷವಾಗಿ ಕಾರ್ಯನಿರ್ವಹಿಸಿz ಎಂದರು.
ಡಿವಿಎಸ್ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಹೆಚ್.ಸಿ. ಉಮೇಶ್ ಕಾರ್ಯ ಕ್ರಮ ಆಯೋಜಿಸಿ ಸ್ವಾಗತಿಸಿದರು. ಕಾರ್ಯಕ್ರಮದಲ್ಲಿ ಜಿ ಪ್ರಾಚಾರ್ಯರ ಸಂಘದ ಅಧ್ಯಕ್ಷ ಪಂಡರೀನಾಥ್ ಎಸ್., ಜಿ ಉಪನ್ಯಾಸಕರ ಸಂಘದ ಅಧ್ಯಕ್ಷ ಯೋಗೀಶ್ ಎಸ್., ಜಿ ರಾಜ್ಯಶಾಸ್ತ್ರ ಉಪನ್ಯಾಸಕರ ವೇದಿಕೆಯ ಅಧ್ಯಕ್ಷ ಮಂಜುನಾಥ ಬಣಕಾರ, ಜಿ ಅನುದಾನಿತ ಪದವಿ ಪೂರ್ವ ಕಾಲೇಜುಗಳ ಪ್ರಾಚಾರ್ಯರ ಸಂಘದ ರಾಜು ಕೆ.ಹೆಚ್., ಜಿ.ಎಫ್. ಕುಟ್ರಿ, ರಾಜ್ಯಶಾಸ್ತ್ರ ಉಪನ್ಯಾಸಕರಾದ ದೇವಕುಮಾರ ಎ.ಜಿ. ಘನ ಶಾಮ್, ಡಾ. ವಸಂತ ನಾಯ್ಕ್, ತೀರ್ಥಪ್ಪ ಉಪಸ್ಥಿತರಿದ್ದರು.
ಕು.ವಾರುಣಿ ಪ್ರಾರ್ಥಿಸಿ, ಉಪನ್ಯಾಸಕ ಸಂದೇಶ ನಾಡಿಗ್ ನಿರೂಪಿಸಿ, ಉಪನ್ಯಾಸಕಿ ಆಶಾ ವಂದಿಸಿದರು.