ಮೇಲ್ಮನೆ ಚುನಾವಣೆಯಲ್ಲಿ ಎನ್ಡಿಎಗೆ -ನಾಲ್ಕಕ್ಕೆ ನಾಲ್ಕೂ ಸ್ಥಾನ: ಡಿ.ಎಸ್. ಅರುಣ್
ಶಿವಮೊಗ್ಗ: ವಿಧಾನ ಪರಿಷತ್ತಿನ ನಾಲ್ಕು ಸ್ಥಾನಗಳಲ್ಲಿ ಎನ್ಡಿಎ ಅಭ್ಯರ್ಥಿಗಳು ಗೆಲುವು ಸಾಧಿಸಿರುವುದು ಬಿಜೆಪಿಯ ವಿಜಯಯಾತ್ರೆಗೆ ನಾಂದಿಯಾಗಿದೆ. ಮುಂಬರುವ ಚುನಾವಣೆಗಳಲ್ಲೂ ಬಿಜೆಪಿ ಭರ್ಜರಿ ಜಯಗಳಿಸಲಿದೆ ಎಂದು ವಿಧಾನ ಪರಿಷತ್ ಸದಸ್ಯ ಡಿ.ಎಸ್. ಅರುಣ್ ವಿಶ್ವಾಸ ವ್ಯಕ್ತಪಡಿಸಿದರು.
ನಗರದ ಜಿಲ್ಲಾ ಬಿಜೆಪಿ ಕಾರ್ಯಾಲಯದ ಮುಂಭಾಗ ವಿಧಾನ ಪರಿಷತ್ ಚುನಾವಣೆಯ ಗೆಲುವಿನ ಹಿನ್ನೆಲೆಯಲ್ಲಿ ಆಯೋಜಿಸಿದ್ದ ವಿಜಯೋತ್ಸವದಲ್ಲಿ ಅವರು ಮಾತನಾಡಿದರು.
ಮುಂಬರುವ ಜಿ ಪಂಚಾಯಿತಿ, ತಾಲೂಕು ಪಂಚಾಯಿತಿ, ಮಹಾನಗರ ಪಾಲಿಕೆ ಹಾಗೂ ೨೦೨೮ರ ವಿಧಾನಸಭೆ ಮತ್ತು ಮುಂದಿನ ಲೋಕಸಭಾ ಚುನಾವಣೆಗಳಲ್ಲೂ ಬಿಜೆಪಿ ಉತ್ತಮ ಸಾಧನೆ ಮಾಡಲಿದೆ. ರಾಜ್ಯ ಸರ್ಕಾರದ ಭ್ರಷ್ಟಾಚಾರದಿಂದ ಜನರು ಬೇಸತ್ತಿದ್ದು, ಕಾಂಗ್ರೆಸ್ ಪಕ್ಷವನ್ನು ರಾಜ್ಯದಲ್ಲಿ ಏಕ ಅಂಕಿಗೆ ಇಳಿಸಲಿzರೆ ಎಂದು ಭವಿಷ್ಯ ನುಡಿದರು.ಱಱನಾಲ್ಕು ಸ್ಥಾನಗಳ ಗೆಲುವು ಮುಂದಿನ ಚುನಾವಣೆಗಳಿಗೆ ದಿಕ್ಸೂಚಿಯಾಗಿದೆ. ಮತಪತ್ರದ ಮೂಲಕ ಚುನಾವಣೆ ನಡೆಸಬೇಕೆಂದು ಒತ್ತಾಯಿಸುತ್ತಿದ್ದ ಕಾಂಗ್ರೆಸ್ಗೆ ಶಿಕ್ಷಕರು ಮತ್ತು ಪದವೀಧರ ಮತದಾರರು ತಕ್ಕ ಉತ್ತರ ನೀಡಿzರೆ. ನಾಲ್ಕೂ ಕ್ಷೇತ್ರಗಳಲ್ಲಿ ಎನ್ಡಿಎ ಅಭ್ಯರ್ಥಿಗಳು ಮೊದಲ ಸುತ್ತಿನ ಮುನ್ನಡೆ ಸಾಧಿಸಿ ಗೆಲುವು ಪಡೆದಿರುವುದು ವಿಶೇಷ ಎಂದರು.
ಬಿಜೆಪಿ ಕಾರ್ಯಕರ್ತರು ಒಗ್ಗಟ್ಟಿನಿಂದ ಕೆಲಸ ಮಾಡಿದರೆ ಗೆಲುವು ಖಚಿತ ಎಂಬುದನ್ನು ಈ ಫಲಿತಾಂಶ ಸಾಬೀತುಪಡಿಸಿದೆ. ಅಭಿವೃದ್ಧಿ ವಿಚಾರದಲ್ಲಿ ವಿಫಲವಾಗಿರುವ ರಾಜ್ಯ ಸರ್ಕಾರಕ್ಕೆ ಮತದಾರರು ತಕ್ಕ ಪಾಠ ಕಲಿಸಿzರೆ ಎಂದು ಹೇಳಿದರು.
ವಿಜಯೋತ್ಸವದಲ್ಲಿ ಬಿಜೆಪಿ ನಗರ, ಗ್ರಾಮಾಂತರ ಹಾಗೂ ಜಿ ಘಟಕಗಳ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಸಿಹಿ ಹಂಚಿ, ಪಟಾಕಿ ಸಿಡಿಸಿ ಸಂಭ್ರಮಿಸಿದರು.
ಜಿಧ್ಯಕ್ಷ ಎನ್.ಕೆ. ಜಗದೀಶ್, ನಗರಾಧ್ಯಕ್ಷ ಮೋಹನ್ ರೆಡ್ಡಿ, ಮಾಜಿ ಶಾಸಕ ಕೆ.ಜಿ. ಕುಮಾರಸ್ವಾಮಿ, ಜ್ಯೋತಿ ಪ್ರಕಾಶ್, ಬಳ್ಳಕೆರೆ ಸಂತೋಷ್, ಮಾಲತೇಶ್, ಸುರೇಖಾ ಮುರಳೀಧರ್, ಮಧುರಾ ಶಿವಾನಂದ್ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.
