ಕ್ರೈಂಜಿಲ್ಲಾ ಸುದ್ದಿತಾಜಾ ಸುದ್ದಿದೇಶಶಿಕ್ಷಣ

ನೀಟ್ ಪರೀಕ್ಷೆ ಅಕ್ರಮ: ಮಳೆಯನ್ನು ಲೆಕ್ಕಿಸದೇ ಎನ್‌ಎಸ್‌ಯುಐನಿಂದ ಬೃಹತ್ ಪ್ರತಿಭಟನೆ

Share Below Link

ಶಿವಮೊಗ್ಗ : ಈ ಸಾಲಿನ ನೀಟ್ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವ ಶಂಕೆ ಇದ್ದು, ಉನ್ನತ ಮಟ್ಟದ ತನಿಖೆ ನಡೆಸಬೇಕು ಹಾಗೂ ಈಗ ನಡೆದಿರುವ ಪರೀಕ್ಷೆ ರದ್ದುಪಡಿಸಿ ಮರು ಪರೀಕ್ಷೆ ನಡೆಸಬೇಕು ಎಂದು ಆಗ್ರಹಿಸಿ ಎನ್‌ಎಸ್‌ಯುಐ ಜಿ ಘಟಕದ ವತಿಯಿಂದ ಇಂದು ನಗರದ ಮಹಾವೀರ ವೃತ್ತದಲ್ಲಿ ಮಳೆಯಲ್ಲೇ ಪ್ರತಿಭಟನೆ ನಡೆಸಿ, ನಂತರ ಜಿಡಳಿತದ ಮೂಲಕ ರಾಷ್ಟ್ರಪತಿ ಗಳಿಗೆ ಮನವಿ ಸಲ್ಲಿಸಲಾಯಿತು.


ನೀಟ್ ಪರೀಕ್ಷೆಯ ಫಲಿತಾಂಶ ವಿವಾದಗಳಿಂದ ಕೂಡಿದ್ದು, ಭಾರಿ ಅಕ್ರಮ ನಡೆದಿರುವ ಸಾಧ್ಯತೆಯಿದೆ. ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ವಿವಾದಾತ್ಮಕ ಫಲಿತಾಂಶದ ಕಾರಣದಿಂದ ದೇಶದ ಲಕ್ಷಾಂತರ ವೈದ್ಯಕೀಯ ಸೀಟು ಆಕಾಂಕ್ಷಿಗಳಿಗೆ ಅನ್ಯಾಯವಾಗುತ್ತಿದೆ. ವಿದ್ಯಾರ್ಥಿಗಳಿಗೆ ಆಗುತ್ತಿರುವ ಅನ್ಯಾಯ ಸರಿಪಡಿಸಲು ಕೇಂದ್ರ ಸರ್ಕಾರವು ನೀಟ್ ಅಕ್ರಮದ ಬಗ್ಗೆ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.
ನೀಟ್ ಫಲಿತಾಂಶ ವಿವಾದವಾಗಲು ಅನೇಕ ಅಂಶಗಳು ಕಾರಣವಾಗಿದ್ದು, ಒಟ್ಟು ೬೭ ವಿದ್ಯಾರ್ಥಿಗಳು ಮೊದಲ ರ್‍ಯಾಂಕ್ ಬಂದಿರುವುದು ಹಾಗೂ ಒಂದೇ ಪರೀಕ್ಷಾ ಕೇಂದ್ರದ ೮ ವಿದ್ಯಾರ್ಥಿಗಳು ಪ್ರಥಮ ರ್‍ಯಾಂಕ್ ಪಡೆದಿರುವುದು ನೀಟ್ ಅಕ್ರಮ ನಡೆದಿರುವುದಕ್ಕೆ ಸಾಕ್ಷಿಯಂತಿದೆ. ರ್‍ಯಾಂಕ್ ಬಂದಿರುವವರಲ್ಲಿ ಆರು ವಿದ್ಯಾರ್ಥಿಗಳು ಒಂದೇ ತರಬೇತಿ ಕೇಂದ್ರದವರಾಗಿರುವುದು ಇನ್ನಷ್ಟು ಅನುಮಾನಗಳನ್ನು ಹುಟ್ಟಿಹಾಕಿದೆ. ಪ್ರಶ್ನೆ ಪತ್ರಿಕೆ ಸೋರಿಕೆ, ಒಂದೇ ತರಬೇತಿ ಕೇಂದ್ರ ಇವೆಲ್ಲವೂ ನೀಟ್ ಪರೀಕ್ಷೆಯಲ್ಲಿ ಅಕ್ರಮಕ್ಕೆ ಕಾರಣ ವಾಗಿರುವ ಸಾಧ್ಯತೆ ಇದೆ ಎಂದು ಎಂದು ಸಂಶಯ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಯುವ ಮುಖಂಡರಾದ ಹೆಚ್.ಸಿ. ಯೋಗೇಶ್ ಮಾತನಾಡಿ, ಕೇಂದ್ರ ಸರ್ಕಾರ ತರಾತುರಿಯಲ್ಲಿ ಕೃಪಾಂಕ ನೀಡಿರುವುದು, ಲೋಕಸಭೆ ಚುನಾವಣಾ ಫಲಿತಾಂಶ ದಿನ ದಂದು ನೀಟ್ ಫಲಿತಾಂಶ ಪ್ರಕಟಿಸಿರುವುದು ಅನುಮಾನ ಗಳನ್ನು ಹೆಚ್ಚಿಸಿದೆ. ನೀಟ್ ಪರೀಕ್ಷೆ ಫಲಿತಾಂಶ ನಂತರ ದೇಶದ ಕೆಲವೆಡೆ ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿ ಕೊಂಡಿzರೆ. ಯುವ ವಿದ್ಯಾರ್ಥಿ ಗಳು ಪ್ರಾಣ ಕಳೆದುಕೊಳ್ಳ ದಂತೆ ಸೂಕ್ತ ನಿರ್ಧಾರ ತೆಗೆದು ಕೊಳ್ಳ ಬೇಕಿದೆ ಎಂದು ಆಗ್ರಹಿಸಿದರು.
ನೀಟ್ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವುದರಿಂದ ಉನ್ನತ ಮಟ್ಟದ ತನಿಖೆ ನಡೆಸಬೇಕು ಹಾಗೂ ಈಗ ನಡೆದಿರುವ ಪರೀಕ್ಷೆ ರದ್ದುಪಡಿಸಿ ಕೂಡಲೇ ಮರು ಪರೀಕ್ಷೆ ನಡೆಸಬೇಕು ಎಂಬುದು ದೇಶದ ವೈದ್ಯಕೀಯ ಸೀಟು ಆಕಾಂಕ್ಷಿಗಳು ಹಾಗೂ ಆಗ್ರಹವಾಗಿದೆ. ಈ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಅಗ್ರಹಿಸಿದರು.
ಜಿಧ್ಯಕ್ಷ ವಿಜಯ, ನಗರ ಅಧ್ಯಕ್ಷ ಚರಣ್, ಗ್ರಾಮಾಂತರ ಅಧ್ಯಕ್ಷ ಹರ್ಷಿತ್, ಕಾರ್ಯಧ್ಯಕ್ಷ ರವಿ ಕಾಟಿಕೆರೆ, ಚಂದ್ರು ಜಿ ರಾವ್, ರವಿ, ಆಕಾಶ, ಜೀವನ್, ಲಿಂಗರಾಜು, ಗಿರೀಶ್, ಶಿವು, ಕುಮಾರ್, ಪ್ರದೀಪ್, ನಿಖಿಲ್, ಫರಾಜ್, ವರುಣ್ ವಿ ಪಂಡಿತ್, ನಾಗೇಂದ್ರ, ಸಾಗರ್, ಮಂಜು ಮಧುಸೂದನ್ ಸೇರಿದಂತೆ ನೂರಾರು ವಿದ್ಯಾರ್ಥಿಗಳು ಪ್ರತಿ ಭಟನೆಯಲ್ಲಿ ಪಾಲ್ಗೊಂಡಿದ್ದರು.

Leave a Reply

Your email address will not be published. Required fields are marked *