ನೀಟ್ ಅಕ್ರಮ: ಎನ್‌ಎಸ್‌ಯುಐ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ…
ಶಿವಮೊಗ್ಗ, ಜು.೧: ನೀಟ್ ಪರೀಕ್ಷೆಯಲ್ಲಿನ ಅಕ್ರಮಕ್ಕೆ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವಂತೆ ಒತ್ತಾಯಿಸಿ ಎನ್‌ಎಸ್‌ಯುಐ ಜಿ ಘಟಕದ ನೇತೃತ್ವದಲ್ಲಿ ವಿವಿಧ ಕಾಲೇಜಿನ ವಿದ್ಯಾರ್ಥಿಗಳು ನಗರ ದಲ್ಲಿಂದು ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದರು.
ನೀಟ್ ರದ್ದುಗೊಳಿಸಿ, ಸಿಇಟಿ ಜಾರಿಗೆ ತನ್ನಿ ಎನ್ನುವ ಘೋಷಣೆ ಯೊಂದಿಗೆ ನಗರದ ಸೈನ್ಸ್ ಮೈದಾನ ಹಾಗೂ ಬಸ್ ನಿಲ್ದಾಣದಿಂದ ಗೋಪಿ ವೃತ್ತದವರೆಗೂ ಎರಡು ಪ್ರತ್ಯೇಕ ಮೆರವಣಿಗೆಯ ಮೂಲಕ ಬಂದ ವಿದ್ಯಾರ್ಥಿಗಳು, ವಿದ್ಯಾರ್ಥಿ ಗಳ ಭವಿಷ್ಯದ ಜತೆಗೆ ಚೆಟವಾ ಡುವುದನ್ನು ನಿಲ್ಲಿಸಿ ಎಂದು ಸರ್ಕಾರಗಳ ವಿರುದ್ಧ ಗುಡುಗಿದರು.
ಪ್ರತಿಭಟನಾ ಮೆರವಣಿಗೆ ನಂತರ ಗೋಪಿ ವೃತ್ತದಲ್ಲಿ ನೀಟ್ ಪರೀಕ್ಷೆಯಲ್ಲಿನ ಅಕ್ರಮ ಖಂಡಿಸಿ, ಸಿಇಟಿ ಜಾರಿಗೆ ಒತ್ತಾಯಿಸಿ ಜಿ ಕಾಂಗ್ರೆಸ್ ಸಮಿತಿ ನೇತೃತ್ವದಲ್ಲಿ ಬಹಿರಂಗ ಸಭೆ ನಡೆಸಲಾಯಿತು. ಸಭೆಯನ್ನುzಶಿಸಿ ಮಾತನಾಡಿದ ವಿದ್ಯಾರ್ಥಿಗಳು ಹಾಗೂ ಜಿ ಕಾಂಗ್ರೆಸ್ ಮುಖಂಡರು, ನೀಟ್ ಪರೀಕ್ಷೆಯಲ್ಲಿನ ಅಕ್ರಮಕ್ಕೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ವೈಫಲ್ಯವೇ ಕಾರಣ ವಾಗಿದ್ದು, ತಕ್ಷಣವೇ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದರು.

ವಿಧಾನ ಪರಿಷತ್ ಸದಸ್ಯೆ ಬಲ್ಕೀಶ್ ಬಾನು ಮಾತನಾಡಿ, ಕೇಂದ್ರ ಸರ್ಕಾರವು ದೇಶದ ಬಡ ಮತ್ತು ಮಧ್ಯಮ ವರ್ಗದ ಮಕ್ಕಳ ಜತೆಗೆ ಚೆಟವಾಡುತ್ತಿದೆ. ಕೇಂದ್ರದ ವೈಫಲ್ಯಕ್ಕೆ ಈಗ ೧೩ ಮಕ್ಕಳು ಬಲಿಯಾಗಿzರೆ. ಪ್ರಧಾನಿ ಮತ್ತು ಕೇಂದ್ರ ಶಿಕ್ಷಣ ಸಚಿವರು ಕೊನೆ ಪಕ್ಷ ಆ ಮಕ್ಕಳ ಕುಟುಂಬದವರಿಗೆ ಸಾಂತ್ವಾನ ಹೇಳುವ ಕೆಲಸ ಮಾಡಿಲ್ಲ. ಅಷ್ಟು ದುರಂಹಕಾರ ಕೇಂದ್ರದ ಬಿಜೆಪಿ ಸರ್ಕಾರಕ್ಕೆ ಬಂದಿದೆ ಎಂದು ವಾಗ್ದಾಳಿ ನಡೆಸಿದರು.
ಮಾಜಿ ಸಂಸದ ಆಯನೂರು ಮಂಜುನಾಥ್ ಮಾತನಾಡಿ, ಪರೀಕ್ಷಾ ಕಾ ಪೇ ಚರ್ಚೆ ನಡೆಸುವ ಈ ದೇಶದ ಪ್ರಧಾನಿಗಳಿಗೆ, ಒಳ್ಳೆಯ ರೀತಿಯಲ್ಲಿ ಪರೀಕ್ಷೆ ಹೇಗೆ ನಡೆಸಬೇಕೆನ್ನುವುದೆ ಗೊತ್ತಿಲ್ಲ ಎಂದು ಲೇವಡಿ ಮಾಡಿದರು.
ಸೂಡಾ ಅಧ್ಯಕ್ಷ ಹೆಚ್.ಎಸ್. ಸುಂದರೇಶ್ ಮಾತನಾಡಿ, ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ನೀಟ್ ಮಾತ್ರವಲ್ಲ, ಎ ರೀತಿಯ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆಗಿವೆ. ಧರ್ಮೇಂದ್ರ ಪ್ರಧಾನ್ ಅತ್ಯಂತ ಭ್ರಷ್ಟ ಮಂತ್ರಿ ಎನ್ನುವ ಕುಖ್ಯಾತಿ ಹೊಂದಿzರೆ. ಇವರನ್ನು ಸಚಿವ ಸ್ಥಾನದಿಂದ ವಜ ಗೊಳಿಸದ ಪ್ರಧಾನಿಗಳು, ಈ ದೇಶದ ಯುವ ಜನರಿಗೆ ಮೋಸ ಮಾಡುತ್ತಿz ರೆಂದು ವಾಗ್ದಾಳಿ ನಡೆಸಿದರು.
ಜಿ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಆರ್. ಪ್ರಸನ್ನ ಕುಮಾರ್, ಎನ್‌ಎಸ್‌ಯುಐ ಜಿಧ್ಯಕ್ಷ ವಿಜಯ್, ಮಾಜಿ ಅಧ್ಯಕ್ಷ ಇಸ್ಮಾಯಿಲ್ ಖಾನ್, ರಾಜ್ಯ ಜವಳಿ ಕೈಮಗ್ಗ ನಿಗಮದ ಅಧ್ಯಕ್ಷ ಚೇತನ್ ಗೌಡ, ಮುಖಂಡರಾದ ಶ್ರೀನಿವಾಸ್ ಕರಿಯಣ್ಣ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶ್ವೇತಾ ಬಂಡಿ, ರಾಜ್ಯ ಭೋವಿ ಅಭಿವೃದ್ದಿ ನಿಗಮದ ಮಾಜಿ ಅಧ್ಯಕ್ಷ ಎಸ್. ರವಿ ಕುಮಾರ್, ಕಲಗೋಡು ರತ್ನಾಕರ್, ಎನ್. ರಮೇಶ್, ಹೆಚ್.ಸಿ. ಯೋಗೇಶ್ ಮಾತನಾಡಿದರು.
ಜಿ ಕಾಂಗ್ರೆಸ್ ವಕ್ತಾರ ಜಿ.ಡಿ.ಮಂಜುನಾಥ್ ಹಾಗೂ ರಮೇಶ್ ಶಂಕರಘಟ್ಟ, ಉಪಾಧ್ಯಕ್ಷ ಎಸ್.ಟಿ. ಚಂದ್ರಶೇಖರ್, ಮುಖಂಡರಾದ ವಿಜಯ್ ಕುಮಾರ್ (ದನಿ), ಕೆ. ದೇವೇಂದ್ರಪ್ಪ, ಆರ್. ರಾಜಶೇಖರ್, ಡಾ. ನೇತ್ರಾವತಿ, ಸ್ಟೇಲಾ ಮಾರ್ಟಿನ್, ಅರ್ಚನಾ ನಿರಂಜನ್, ಸಮಿನಾ ಕೌಸರ್, ಯು. ಶಿವಾನಂದ್, ಮಧು ಸೂದನ್, ಸುವರ್ಣ ನಾಗರಾಜ್, ಎಸ್.ಪಿ.ಶೇಷಾದ್ರಿ, ಶಿವಕುಮಾರ್, ಪಾಲಾಕ್ಷಿ, ಹರ್ಷಿತ್‌ಗೌಡ, ಬಸವರಾಜ್, ಶಿವಣ್ಣ, ಸವಿತಾ ಮತ್ತಿತರರು ಇದ್ದರು.
