ಜಿಲ್ಲಾ ಸುದ್ದಿತಾಜಾ ಸುದ್ದಿಲೇಖನಗಳು

ನ.೮ : ದಾಸ ಶ್ರೇಷ್ಠರಾದ ಶ್ರೀ ಕನಕದಾಸರ ಜಯಂತಿ…

Share Below Link

ನಾಡಿನಾದ್ಯಂತ ನವೆಂಬರ್ ೮ ರಂದು ದಾಸಶ್ರೇಷ್ಟರಾದ ಶ್ರೀ ಕನಕದಾಸರ ಜಯಂತಿಯನ್ನು ವಿಜೃಂಭಣೆಯಿಂದ ಆಚರಿಸಲಾಗುತ್ತದೆ. ಕರ್ನಾಟಕ ರಾಜ್ಯ ಸರ್ಕಾರವೂ ಸಹ ಗ್ರಾಮ, ತಾಲ್ಲೂಕು ಹಾಗೂ ಜಿ ಕೇಂದ್ರಗಳಲ್ಲಿ ಶ್ರೀ ಕನಕದಾಸರ ಜಯಂತಿಯನ್ನು ಹಮ್ಮಿಕೊಂಡು ದಾಸಶ್ರೇಷ್ಟರ ಕುರಿತಾದ ಕಾರ್ಯಕ್ರಮಗಳನ್ನು ನಡೆಸುತ್ತದೆ.
ಶ್ರೀ ಕನಕದಾಸರ ಹಿನ್ನೆಲೆ :
ಶ್ರೀ ಕನಕದಾಸರು ೧೫-೧೬ನೇ (೧೫೦೮-೧೬೦೬) ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ಕನಕದಾಸರ ಮೂಲ ಹೆಸರು ತಿಮ್ಮಪ್ಪನಾಯಕ. ದಾಸ ಪರಂಪರೆಯಲ್ಲಿ ಬರುವ ೨೫೦ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಶೂದ್ರದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನೆಕಾರರು ಮತ್ತು ಪುರಂದರ ದಾಸರೊಂದಿಗೆ ಕರ್ನಾಟಕ ಸಂಗೀತಕ್ಕೆ ಅಪಾರ ಕೊಡುಗೆಯನ್ನು ನೀಡಿದವರು.


ದಾಸ ಸಾಹಿತ್ಯಕ್ಕೆ ವೈಶಿಷ್ಟ ಪೂರ್ಣವಾದ ಮೆರುಗನ್ನು ತಂದಿತ್ತ ಪಾಂಡಿತ್ಯಪೂರ್ಣ ಕವಿ ಶ್ರೀ ಕನಕದಾಸರು. ತಮ್ಮ ಸಹಜ ಬದುಕಿನಿಂದ ಕೀರ್ತನಕಾರರಾಗಿ, ತತ್ವeನಿಯಾಗಿ, ಸಂತರಾಗಿ, ದಾರ್ಶನಿಕರಾಗಿ ಕನ್ನಡ ನಾಡಿನ ಸಾಂಸ್ಕೃತಿಕ ಪರಂಪರೆಗೆ ಕನಕದಾಸರು ಅನನ್ಯ ಕೊಡುಗೆ ಯನ್ನು ನೀಡಿzರೆ.
ಕನಕದಾಸರು ದಂಡನಾಯಕರಾಗಿದ್ದು, ಯುದ್ಧದಲ್ಲಿ ಸೋತ ನಂತರ ಅವರಿಗೆ ವೈರಾಗ್ಯ ಉಂಟಾಗಿ, ಹರಿಭಕ್ತ ದಾಸರಾದರು ಎಂಬ ಮಾತಿದೆ. ಶ್ರೀ ಕನಕದಾಸರು ತಮ್ಮ ಕೀರ್ತನೆಗಳಲ್ಲಿ ಭಕ್ತಿ, ವೈರಾಗ್ಯ, ಭಜನೆಗಳಷ್ಟೇ ಅಲ್ಲದೇ ೧೬ನೇ ಶತಮಾನದ ಸಾಮಾಜಿಕ ವ್ಯವಸ್ಥೆಯ ವಿರುದ್ಧ ಸಮರ ಸಾರಿzರೆ. ಸಾಮಾಜಿಕ ಮಡಿವಂತಿಕೆಯನ್ನು ಕುರಿತು ತಮ್ಮ ಕೀರ್ತನೆಗಳಲ್ಲಿ ವಿಡಂಬಿಸಿzರೆ. ಅಂದಿನ ಸಮಾಜದ ಸ್ಥಿತಿಗತಿಗಳನ್ನು ತಿದ್ದುವ ಪ್ರಯತ್ನ ಮಾಡಿರುವ ದಾಸರಿವರು.
ಶ್ರೀ ಕನಕದಾಸರ ಜನನ:
ಹಾವೇರಿ ಜಿಯ ಶಿಗ್ಗಾಂವಿ ತಾಲ್ಲೂಕಿನ ಗ್ರಾಮದಲ್ಲಿ ೧೫೦೯ ರಲ್ಲಿ ಕುರುಬ ಜನಾಂಗಕ್ಕೆ ಸೇರಿದ ಬಚ್ಚಮ್ಮ ಮತ್ತು ಬೀರಪ್ಪನಾಯಕ ಎಂಬ ದಂಪತಿಗಳ ಮಗನಾಗಿ ಜನಿಸಿದರು.


ಶ್ರೀ ಕನಕದಾಸರ ಸಾಧನೆ:
ಶ್ರೀ ಕನಕದಾಸರು ಶ್ರೀ ವ್ಯಾಸರಾಯರ ಮೆಚ್ಚಿನ ಶಿಷ್ಯ ರಾಗಿದ್ದರು. ಮಧ್ವ ತತ್ವಶಾಸ್ತ್ರವನ್ನು ಕಲಿತು, ಒಪ್ಪಿಕೊಂಡ ಕನಕದಾಸರು ಉಡುಪಿ ಶ್ರೀ ಕೃಷ್ಣನ ಅನನ್ಯ ಭಕ್ತರೂ ಹೌದು. ಕಾಗಿನೆಲೆಯ ಆದಿಕೇಶವನ ಭಕ್ತರಾದ ಕನಕದಾಸರು ಜತಿ ಪದ್ಧತಿಯ ತಾರತಮ್ಯಗಳನ್ನು ಅಲ್ಲಗಳೆದವರು. ಕಾಗಿನೆಲೆಯ ಆದಿಕೇಶವ ರಾಯ ಎಂಬುದು ಇವರ ಕೀರ್ತನೆಗಳ ಅಂಕಿತನಾಮ.
ಶ್ರೀ ಕನಕದಾಸರ ಸಾಹಿತ್ಯ ರಚನೆ:
ಕನಕದಾಸರು ಸಾಹಿತ್ಯದ ವಿವಿಧ ಪ್ರಕಾರಗಳಾದ ಕೀರ್ತನೆಗಳು, ಸುಳಾದಿಗಳು, ಉಗಾಭೋಗಗಳನ್ನು ಕನ್ನಡ ಸಾಹಿತ್ಯ ಲೋಕಕ್ಕೆ ಅರ್ಪಿಸಿರುವುದಲ್ಲದೆ, ಸಂಗೀತ ಪ್ರಪಂಚಕ್ಕೆ ತನ್ನದೇ ಆದಂತಹ ಕೊಡುಗೆಯನ್ನು ಮುಂಡಿಗೆಗಳ ರೂಪದಲ್ಲಿ ನೀಡಿzರೆ.
ಸುಮಾರು ೩೧೬ ಕೀರ್ತನೆ ಗಳು ಹಾಗೂ ಇನ್ನಿತರ ಸಾಹಿತ್ಯ ಮಾತ್ರ ಲಭ್ಯವಾಗಿರುವುದನ್ನು ಕಾಣಬಹುದಾಗಿದೆ. ಅವರ ಐದು ಮುಖ್ಯ ಕಾವ್ಯಕೃತಿಗಳು ಇಲ್ಲಿವೆ.
೧. ಮೋಹನತರಂಗಿಣಿ,
೨. ನಳಚರಿತ್ರೆ
೩. ರಾಮಧಾನ್ಯ ಚರಿತೆ,
೪. ಹರಿಭಕ್ತಿ ಸಾರ,
೫. ನೃಸಿಂಹಸ್ತವ..
ಉಡುಪಿಯ ಶ್ರೀ ಕೃಷ್ಣ ದೇವಸ್ಥಾನದ ಕುರಿತು:
ಅನೇಕರ ನಂಬಿಕೆಯಂತೆ, ಉಡುಪಿಯ ಶ್ರೀ ಕೃಷ್ಣ ದೇವಸ್ಥಾನದಲ್ಲಿ ಕನಕದಾಸರಿಗೆ ಪ್ರವೇಶ ದೊರೆಯದೇ ಹೋದಾಗ, ದೇವಸ್ಥಾನದ ಹಿಂದೆ ನಿಂತು ಹಾಡ ತೊಡಗಿದರಂತೆ.. (ಬಾಗಿಲನು ತೆರೆದು ಸೇವೆಯನು ಕೊಡೊ ಹರಿಯೆ). ಆಗ ದೇವಸ್ಥಾನದ ಹಿಂಭಾಗ ಗೋಡೆ ಒಡೆದು ಕೃಷ್ಣನ ವಿಗ್ರಹ ಹಿಮ್ಮುಖವಾಗಿ ತಿರುಗಿತಂತೆ. (ಈಗಲೂ ಉಡುಪಿ ಶ್ರೀ ಕೃಷ್ಣ ದೇವಸ್ಥಾನದ ಹಿಂದುಗಡೆಯಿಂದ ಗೋಡೆಯಲ್ಲಿರುವ ಬಿರುಕಿನಲ್ಲಿ ಶ್ರೀ ಕೃಷ್ಣನನ್ನು ಕಾಣಬಹುದು. ಅಲ್ಲಿ ಒಂದು ಕಿಟಕಿಯನ್ನು ನಿರ್ಮಿಸಿ ಅದನ್ನು ‘ಕನಕನ ಕಿಂಡಿ’ ಎಂದು ಕರೆಯಲಾಗಿದೆ).
ನಾಡಿನ ಸಮಸ್ತ ಜನತೆಗೆ ದಾಸಶ್ರೇಷ್ಟರಾದ ಶ್ರೀ ಕನಕದಾಸರ ಜಯಂತಿಯ ಹಾರ್ದಿಕ ಶುಭಾಶಯಗಳು.

  • ಮುರುಳೀಧರ್ ಹೆಚ್.ಸಿ.
    ಪತ್ರಕರ್ತರು, ಶಿವಮೊಗ್ಗ