ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಈಗ ರಾಮನ ಹೆಸರು; ಮುಂದೆ ಕೃಷ್ಣನ ಹೆಸರು ಹೇಳುತ್ತೇವೆ …

Share Below Link

ಶಿವಮೊಗ್ಗ: ಕೇಂದ್ರ ಸರ್ಕಾರವು ಮನರೇಗಾ ಯೋಜನೆಯ ಬದಲು ಬಿವಿಜಿ ರಾಮ್-ಜೀ ಯೋಜನೆಯನ್ನು ಜಾರಿಗೆ ತಂದಿದ್ದು ಇದರ ವಿರುದ್ಧ ರಾಜ್ಯ ಸರ್ಕಾರ ವಿನಾಕಾರಣ ಗೊಂದಲ ನಿರ್ಮಾಣ ಮಾಡುತ್ತಿದೆ ಎಂದು ಶಾಸಕ ಎಸ್.ಎನ್. ಚನ್ನಬಸಪ್ಪ ಕಾಂಗ್ರೆಸ್ ವಿರುದ್ಧ ಸುದ್ದಿಗೋಷ್ಟಿಯಲ್ಲಿ ತೀವ್ರ ವಾಗ್ಧಾಳಿ ನಡೆಸಿದರು.
ಗ್ರಾಮದ ಮೂಲಭೂತ ಸೌಕರ್ಯ ಮತ್ತು ಜೀವನ ಸುಧಾರಣೆಯ ಮಹತ್ವಾಕಾಂಕ್ಷೆ ಯನ್ನು ಹೊಂದಿ ಗ್ರಾಮಗಳ ಸಂಪೂರ್ಣ ಅಭಿವೃದ್ಧಿಯ ಅಭಿಯಾನದ ಉzಶವನ್ನು ಈ ರಾಮ್-ಜೀ ಯೋಜನೆ ಹೊಂದಿದೆ. ಮನರೇಗಾ ಕೇವಲ ಹರಟೆ ಹೊಡೆಯುವ ಕಟ್ಟೆಯಾಗಿತ್ತು. ಕಾಮಗಾರಿ ಆಯ್ತು ಎಂದು ಬಿಲ್ ಮಾಡಿz ಸಾಧನೆ ಯಾಗಿದೆಯೇ ಹೊರತು ಗ್ರಾಮ ಬದಲಾಗಲಿಲ್ಲ. ಈ ಹಿಂದೆ ಶ್ರೀಮಂತಿ ಇಂದಿರಾಗಾಂಧಿ ಅವರು ಗರಿಬೀ ಹಠಾವೋ ಕಾರ್ಯಕ್ರಮ ವನ್ನು ಜರಿಗೆ ತಂದಿದ್ದರೂ ಇನ್ನೂ ತನಕ ಯಾವುದೇ ಪ್ರಯೋಜನ ವಾಗಲಿಲ್ಲ. ನರೇಗಾ ಯೋಜನೆ ಕೇವಲ ಕೂಲಿ ನೀಡುತ್ತಿದ್ದುದ್ದಕ್ಕೆ ಸೀಮಿತವಾಗಿದ್ದು, ಅದರಿಂದ ಬಡವರಿಗೆ, ಕೂಲಿಕಾರರಿಗೆ ಏನೂ ಪ್ರಯೋಜನವಾಗಲಿಲ್ಲ ಎಂದು ಟೀಕಿಸಿದರು.


ದೇಶ ವೇಗವಾಗಿ ಮುಂದುವರೆ ಯುತ್ತಿದೆ. ವಿಕಸಿತ ಭಾರತದ ದೂರದೃಷ್ಟಿಯಿಂದ ರಾಮ್-ಜೀ ಯೋಜನೆ ಜಾರಿಗೆ ಬಂದಿದೆ. ದಾರಿದ್ರ್ಯದಿಂದ ಸ್ವಾವಲಂಬನೆ ಕಡೆ ಹೋಗಬೇಕೆನ್ನುವ ಉzಶ ಇದರಲ್ಲಿ ಇದೆ. ಕಾರ್ಮಿಕರು ಕೌಶಲ್ಯದಿಂದ ಕೆಲಸ ಮಾಡುವ ಉzಶ ರಾಮ್-ಜೀ ಯೋಜನೆ ಯಲ್ಲಿದೆ. ಕೂಲಿಯಿಂದ ಮಲ್ಯ ವೃದ್ಧಿಸುವ ಹಾಗೂ ಉದ್ಯೋಗ ಸೃಷ್ಟಿಗೆ ಶಕ್ತಿಕೊಡುವ ಯೋಜನೆ ಇದಾಗಿದೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ಇದರ ಬಗ್ಗೆ ಗಮನಿಸಬೇಕು. ಕಾಂಗ್ರೆಸ್ ಇದರಲ್ಲಿ ರಾಜಕಾರಣ ಮಾಡಬಾರದು ಎಂದು ಸಲಹೆ ನೀಡಿದರು.
ಈ ಹಿಂದೆ ಕಾಂಗ್ರೆಸ್ ಮುಖಂಡ ಪಿ. ಚಿದಂಬರಂ ಅವರು ಯೋಜನೆಯ ಅನುಷ್ಟಾನದಲ್ಲಿ ಕೇಂದ್ರ ಮತ್ತು ರಾಜ್ಯದ ಪ್ರಮಾಣ ಕ್ರಮವಾಗಿ ೬೦:೪೦ ಇರಬೇಕು ಎಂದಾಗ, ಕಾಂಗ್ರೆಸ್‌ನವರು ಏಕೆ ಮಾತನಾಡಲಿಲ್ಲ ಎಂದು ಪ್ರಶ್ನಿಸಿದ ಅವರು, ನರೇಗದಲ್ಲಿದ್ದ ಕೂಲಿ ದಿನವನ್ನು ೧೦೦ ರಿಂದ ೧೨೫ ದಿನಗಳಿಗೆ ಈಗ ಹೆಚ್ಚಿಸಿದ್ದಲ್ಲದೆ ಅದಕ್ಕೆ ನೀಡುವ ಕೂಲ ಹಣದ ಮೊತ್ತವನ್ನು ಬಿಜೆಪಿ ಸರ್ಕಾರ ಹೆಚ್ಚಿಸಿದೆ. ಅಲ್ಲದೆ ರಾಮ್-ಜೀ ಯೋಜನೆಯನ್ನು ವಿವಿಧ ಸೇವೆಗಳಿಗೆ ವಿಸ್ತರಣೆ ಮಾಡಲಾಗಿದೆ. ಕಾಂಗ್ರೆಸ್ ಇದರಲ್ಲಿ ವಿಷಬೀಜ ಬಿತ್ತುವ ಕೆಲಸ ಮಾಡ ಬಾರದು. ಇದು ಕಾಂಗ್ರೆಸ್ ಅಧೋಗತಿಗೆ ಕಾರಣವಾಗಲಿದೆ ಎಂದು ಭವಿಷ್ಯ ನುಡಿದರು.
ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕು ೧೦೦ನೇ ವರ್ಷ ಪೂರೈಸುವ ೨೦೪೭ನ್ನು ಗಮನದಲ್ಲಿಟ್ಟು ನರೇಗಾಕ್ಕೆ ಮೊದಲಿದ್ದ ೩೩ ಸಾವಿರ ಕೋಟಿ ರೂ. ಅನುದಾನದ ಬದಲಿಗೆ ಈಗ ಕೇಂದ್ರದ ಎನ್‌ಡಿಎ ಸರ್ಕಾರ ೨ಲಕ್ಷ ಕೋಟಿ ರೂ. ಮಿಕ್ಕಿ ಬಜೆಟ್ ನಲ್ಲಿ ಹಣ ಮೀಸಲಿರಿಸಿದೆ. ಇದನ್ನು ಕಾಂಗ್ರೆಸ್ ಮುಖಂಡರು ಗಮನಿಸ ಬೇಕು ಎಂದ ಅವರು, ಯಾವ ಶ್ರೀರಾಮನ ಆದರ್ಶವನ್ನು ಮಹಾತ್ಮ ಗಾಂಧೀಜಿಯವರು ಆರಾಧಿಸುತ್ತಿದ್ದರು ಆ ರಾಮನ ಹೆಸರೇ ನರೇಗಾ ಯೋಜನೆಗೆ ಇಟ್ಟಿದ್ದನ್ನು ಕಾಂಗ್ರೆಸ್‌ನವರು ಏಕೆ ವಿರೋಧಿಸುತ್ತಿzರೆ ಎಂಬುದೇ ಅರ್ಥವಾಗುತ್ತಿಲ್ಲ. ಗಾಂಧೀಜಿ ಬಿಟ್ಟು ಈ ದೇಶ ಇಲ್ಲ, ಶ್ರೀರಾಮ ಆದರ್ಶ ಬಿಟ್ಟು ಜನರಿಲ್ಲ. ಗಾಂಧೀಜಿಯ ಹೆಸರು ಹೇಳಿದರೆ ಕಾಂಗ್ರೆಸ್‌ನವರು ಜೈಕಾರ ಹಾಕುತ್ತಾರೆ. ಶ್ರೀರಾಮನ ಹೆಸರು ಹೇಳಿದರೆ ಧಿಕ್ಕಾರ ಹಾಕು ತ್ತಾರೆ. ಅದು ಇನ್ನು ನಡೆಯುವುದಿಲ್ಲ. ಈಗ ರಾಮನ ಹೆಸರು ಹೇಳುತ್ತೇವೆ. ಮುಂದೆ ಕೃಷ್ಣನ ಹೆಸರು ಹೇಳುತ್ತೇವೆ ಎಂದು ಚಾಟಿ ಬೀಸಿದರು.
ಪತ್ರಿಕಾಗೋಷ್ಠಿಯಲ್ಲಿ ಪಕ್ಷದ ಜಿಧ್ಯಕ್ಷ ಎನ್.ಕೆ. ಜಗದೀಶ್, ನಗರಾಧ್ಯಕ್ಷ ಮೋಹನ್‌ರೆಡ್ಡಿ, ಪ್ರಮುಖರಾದ ದೀನ್‌ದಯಾಳ್, ಮಂಜುನಾಥ್ ನವುಲೆ, ಚಂದ್ರಶೇಖರ್, ಶರತ್ ಕಲ್ಯಾಣಿ ಮೊದಲಾದವರಿದ್ದರು.