ಇತರೆಕ್ರೈಂಜಿಲ್ಲಾ ಸುದ್ದಿತಾಜಾ ಸುದ್ದಿ

ಅಕ್ರಮ ಮರಳು ಸಂಗ್ರಹ ಅಡ್ಡೆಗಳ ಮೇಲೆ ಅಧಿಕಾರಿಗಳ ದಾಳಿ…

Share Below Link

ಹೊಸನಗರ: ತಾಲೂಕಿನ ಶರಾವತಿ ಹಿನ್ನೀರ ಭೂ ಪ್ರದೇಶದಲ್ಲಿ ಅಕ್ರಮವಾಗಿ ಮರಳು ಸಂಗ್ರಹಿಸಿ ಸಾಗಾಟ ಮಾಡಲಾಗುತ್ತಿದೆ ಎಂದು ಜನಸಂಗ್ರಾಮ ಪರಿಷತ್ತಿನ ತಾಲೂಕು ಸಂಚಾಲಕ, ಪರಿಸರ ಹೋರಾಟಗಾರ ಗಿರೀಶ್ ಆಚಾರ್ ಜಿಧಿಕಾರಿಗಳಿಗೆ ದೂರು ನೀಡಿ, ಈ ಬಗ್ಗೆ ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ಮಾಡಿದ ಹಿನ್ನೆಲೆಯಲ್ಲಿ ಜಿ ಗಣಿ ಮತ್ತು ಭೂ ವಿeನ ಇಲಾಖೆಯ ಅಧಿಕಾರಿಗಳು ದಿಢೀರ್ ದಾಳಿ ಮಾಡಿ ನೂರಾರು ಲೋಡ್ ಅಕ್ರಮ ಮರಳನ್ನು ವಶಕ್ಕೆ ಪಡೆದಿzರೆ.
ತಾಲೂಕಿನ ಕಸಬಾ ಹೋಬಳಿ ಮೇಲಿನಬೆಸಿಗೆ ಗ್ರಾಪಂ ವ್ಯಾಪ್ತಿಯ ಬಾಳೆಕೊಪ್ಪ, ಸಣ್ಣ ಎರಗಿ, ಮಣಸಟ್ಟೆ, ಹೆಚ್. ಹೊನ್ನೆಕೊಪ್ಪ ಸುತ್ತಮುತ್ತ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ನೂರಾರು ಲೋಡ್ ಮರಳನ್ನು ಅಧಿಕಾರಿಗಳ ತಂಡ ವಶಕ್ಕೆ ಪಡೆದಿದೆ.


ಜೆಸಿಬಿ ಯಂತ್ರ ಬಳಸಿ ಹೊಸನಗರ ತಾಲೂಕಿನ ಶರಾವತಿ ನದಿ ಹಿನ್ನೀರ ಭೂ ಪ್ರದೇಶದಲ್ಲಿ ಅಕ್ರಮ ಮರಳು ಗಣಿಗಾರಿಕೆ ನಡೆಯುತ್ತಿದೆ. ನೂರಾರು ಲೋಡ್ ಮರಳು ಅಕ್ರಮ ಸಂಗ್ರಹವಾಗಿದೆ. ಅಹೋರಾತ್ರಿ ಮರಳು ಸಾಗಾಟ ನಿರಂತರವಾಗಿ ನಡೆದಿದೆ. ಈ ಬಗ್ಗೆ ಟಾಸ್ಕ್ ಫೋರ್ಸ್ ಸಮಿತಿ ಸೂಕ್ತ ಕ್ರಮಕೈಗೊಳ್ಳುತ್ತಿಲ್ಲ. ಅರಣ್ಯ ಹಾಗೂ ಖನಿಜ ಸಂಪತ್ತನ್ನು ಲೂಟಿ ಮಾಡಲಾಗುತ್ತಿದೆ. ಸರ್ಕಾರದ ಬೊಕ್ಕಸಕ್ಕೆ ಕೋಟ್ಯಂತರ ಹಣ ನಷ್ಟವಾಗುತ್ತಿದೆ. ಕೂಡಲೇ ಕ್ರಮ ಕೈಗೊಳ್ಳಿ ಎಂದು ಗಿರೀಶ್ ತಮ್ಮ ದೂರಿನಲ್ಲಿ ತಿಳಿಸಿದ್ದರು.
ಜಿಧಿಕಾರಿಗಳ ಸೂಚನೆ ಮೇರೆಗೆ ಕಂದಾಯ, ಅರಣ್ಯ ಹಾಗೂ ಗಣಿ ಮತ್ತು ಭೂ ವಿeನ ಇಲಾಖೆ ಸಿಬ್ಬಂದಿಗಳು ಈ ದಾಳಿ ಮಾಡಿzರೆ. ಅಕ್ರಮ ಮರಳು ಸಂಗ್ರಹಣೆ ಕೆಪಿಸಿ ಹಾಗೂ ಅರಣ್ಯ ಇಲಾಖೆ ಸರಹದ್ದಿನಲ್ಲಿ ಕಂಡು ಬಂದ ಹಿನ್ನೆಲೆಯಲ್ಲಿ ಗಣಿ ಮತ್ತು ಭೂ ವಿeನ ಇಲಾಖೆ ಅಧಿಕಾರಿಗಳು ಪ್ರಕರಣವನ್ನು ಅರಣ್ಯ ಇಲಾಖೆ ಹಸ್ತಾಂತರಿಸುವುದಾಗಿ ತಿಳಿಸಿzರೆ.
ಗಣಿ ಮತ್ತು ಭೂ ವಿeನ ಇಲಾಖೆಯ ಕಿರಿಯ ಗಣಿ ವಿeನಿ ಮಾನಸ, ಕಂದಾಯ ಇಲಾಖೆಯ ಗಾಮ ಲೆಕ್ಕಿಗ ಕೌಶಿಕ್, ಗ್ರಾಮ ಸಹಾಯಕಿ ದೀಪಾ, ಅರಣ್ಯ ಇಲಾಖೆ ಗಾರ್ಡ್ ಮಂಜುನಾಥ್ ಹಾಗೂ ದೂರುದಾರ ಗಿರೀಶ್ ಆಚಾರ ಸಹ ಈ ಕಾರ್‍ಯಾಯಚಾರಣೆ ಯಲ್ಲಿ ಭಾಗವಹಿಸಿದ್ದರು.