ಅಲೆಮಾರಿ ಜನಾಂಗಕ್ಕೆ ವಸತಿ-ಸರ್ಕಾರಿ ಸೌಲಭ್ಯ ಒದಗಿಸಿ…
ಶಿವಮೊಗ್ಗ : ಅಲೆಮಾರಿ ಜನಾಂಗದವರು ವಸತಿ ಮತ್ತು ಸರ್ಕಾರಿ ಸೌಲಭ್ಯ ಪಡೆಯಲು ಬೇಕಾಗಿರುವ ಜತಿ ಪ್ರಮಾಣ ಪತ್ರ, ಇತರೆ ಪೂರಕ ದಾಖಲೆಗಳನ್ನು ಸರಳೀಕರಿಸಿ ನೀಡಲು ಎ ತಾಲ್ಲೂಕು ತಹಶೀಲ್ದಾರರಿಗೆ ನಿರ್ದೇಶನ ನೀಡಲಾಗಿದೆ ಎಂದು ಪರಿಶಿಷ್ಟ ಜತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ದಿ ನಿಗಮದ ಅಧ್ಯಕ್ಷೆ ಪಲ್ಲವಿ.ಜಿ ತಿಳಿಸಿದರು.
ಜಿಡಳಿತ ಕಚೇರಿ ಸಭಾಂಗಣದಲ್ಲಿ ಇಂದು ಏರ್ಪಡಿಸಲಾಗಿದ್ದ ಪರಿಶಿಷ್ಟ ಜತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ದಿ ನಿಗಮದಿಂದ ಜರಿಯಾದ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನೆ ಮತ್ತು ಸಮಾಲೋಚನಾ ಸಭೆಯ ನಂತರ ಪತ್ರಿಕಾಗೋಷ್ಟಿಯನ್ನುzಶಿಸಿ ಅವರು ಮಾತನಾಡಿದ ಅವರು, ಈಗಾಗಲೇ ೨೧ ಜಿಗಳನ್ನು ತಾಲ್ಲೂಕುವಾರು ಪ್ರವಾಸ ಕೈಗೊಂಡು, ಅಲೆಮಾರಿ ಜನಾಂಗದ ಸ್ಥಿತಿಗತಿಗಳನ್ನು ಪರಿಶೀಲಿಸುತ್ತಿzನೆ. ಟೆಂಟ್, ಜೋಪಡಿ ಮತ್ತು ಅವರು ವಾಸ ಮಾಡುತ್ತಿರುವ ಪ್ರದೇಶಗಳಿಗೆ ಖುದ್ದು ಭೇಟಿ ನೀಡಿ, ವಸತಿ, ಶಿಕ್ಷಣ, ಸರ್ಕಾರಿ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಿzನೆ ಎಂದರು.
ರಾಜ್ಯದಲ್ಲಿ ೧೧ ಲಕ್ಷ ಪರಿಶಿಷ್ಟ ಜತಿ ಪರಿಶಿಷ್ಟ ಪಂಗಡ ಅಲೆಮಾರಿ ಸಮುದಾಯವಿದ್ದು ಜಿಯಲ್ಲಿ ೨೦,೦೮೪ ಪ.ಜ ಮತ್ತು ೨೭೨೮ ಪ.ಪಂ ದ ಜನಸಂಖ್ಯೆ ಇದೆ. ೨೦೨೬ ರ ಬಜೆಟ್ನಲ್ಲಿ ಅಲೆ ಮಾರಿ ಜನಾಂ ಗದ ಅಭಿವೃದ್ದಿಗಾಗಿ ರೂ.೧೦೦ ಕೋಟಿ ವಿಶೇಷ ಅನುದಾನ ಹಾಗೂ ಈ ಜನಾಂಗದ ಮಕ್ಕಳು ಶೈಕ್ಷಣಿಕ ವಾಗಿ ಮುಂದೆ ಬರಲು ೪ ವಸತಿ ನಿಲಯಗಳನ್ನು ಘೋಷಣೆ ಮಾಡ ಲಾಗಿದೆ ಎಂದರು.
ಶಿವಮೊಗ್ಗ ತಾಲ್ಲೂಕಿನ ಗೋಂದಿ ಚಟ್ನಹಳ್ಳಿ, ಕಪುರ, ಮಲ್ಲಿಗೇನಹಳ್ಳಿ, ನಗರದ ಎಂಆರ್ಎಸ್ ಭಾಗದಲ್ಲಿ ವಾಸವಾಗಿ ರುವ ಸುಡುಗಾಡು ಸಿದ್ದ, ಹಂದಿ ಜೋಗಿ, ಗೋಸಂಗಿ, ಶಿಳ್ಳೇಕ್ಯಾತ, ಕೊರಚ ಇತರೆ ಅಲೆಮಾರಿ ಜನಾಂಗದವರು ವಾಸವಾಗಿರುವ ಪ್ರದೇಶಗಳಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಿ, ಅವರು ಶಾಶ್ವತವಾಗಿ ನೆಲೆ ನಿಲ್ಲಲು ವಸತಿ, ನಿವೇಶನ ಕೊಡಿಸುವ ಬಗ್ಗೆ, ಸರ್ಕಾರ ದ ಸೌಲಭ್ಯಗಳನ್ನು ಒದಗಿಸುವ ಬಗ್ಗೆ ಕ್ರಮ ವಹಿಸಲಾಗುತ್ತಿದೆ.
ಸಮಾಜ ಕಲ್ಯಾಣ ಇಲಾಖೆ, ಕಂದಾಯ ಇಲಾಖೆ, ಗ್ರಾಮೀಣಾ ಭಿವೃದ್ದಿ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕಾರ್ಮಿಕ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳು ಅಲೆಮಾರಿ ಜನಾಂಗದವರಿಗೆ ಶಾಶ್ವತ ನೆಲೆ ಒದಗಿಸಲು ಹಾಗೂ ಅವರ ಇತರೆ ಸಮಸ್ಯೆಗಳ ನಿವಾರಣೆ ಕುರಿತು ಸಭೆಯಲ್ಲಿ ನಿರ್ಣಯ ಕೈಗೊಳ್ಳ ಲಾಗಿದೆ. ತೀರ್ಥಹಳ್ಳಿಯಲ್ಲಿ ದೊಂಬರು, ಸುಡುಗಾಡು ಸಿದ್ದರು ಹೊಳೆದಂಡೆಯಲ್ಲಿ ನೆಲೆಸುತ್ತಿದ್ದು ರಾಜೀವ್ ಗಾಂಧಿ ವಸತಿ ನಿಗಮ ದಿಂದ ಅವರಿಗೆ ವಸತಿ ಮಂಜೂರು ಮಾಡಲಾಗಿದೆ. ಶೀಘ್ರದ ಹಕ್ಕು ಪತ್ರಗಳನ್ನು ವಿತರಣೆ ಮಾಡಲಾಗು ವುದು ಎಂದು ತಿಳಿಸಿದರು.
ಭದ್ರಾವತಿಯಲ್ಲಿ ಅತಿವೃಷ್ಟಿ ಯಿಂದ ಶಿಳ್ಳೇಕ್ಯಾತರು ವಾಸವಾಗಿದ್ದ ಟೆಂಟ್ ಬಿದ್ದು ಹೋಗಿ, ಗಂಗಮ್ಮ ಮತ್ತು ಹನುಮಂತಪ್ಪನವರ ಮಗಳು ಮರಣ ಹೊಂದಿದ್ದು, ಇನ್ನೂ ಪರಿಹಾರ ದೊರೆತಿಲ್ಲ. ಪರಿಹಾರ ನೀಡಲು ಜಿಧಿಕಾರಿಗಳು ಶೀಘ್ರವೇ ಕ್ರಮ ವಹಿಸುವುದಾಗಿ ತಿಳಿಸಿzರೆ.
ದಾಖಲೆ ಒದಗಿಸಲು ತಹಶೀ ಲ್ದಾರರಿಗೆ ಸೂಚನೆ : ಅಲೆಮಾರಿ ಜನಾಂಗಗಳಿಗೆ ಯಾವುದೇ ರೀತಿಯ ಸರ್ಕಾರಿ ಸೌಲಭ್ಯಗಳನ್ನು ನೀಡಬೇ ಕಾದರೆ ಮುಖ್ಯವಾಗಿ ದಾಖಲೆಗಳು ಬೇಕು. ಆಧಾರ್, ಜತಿ ಪ್ರಮಾಣ ಪತ್ರಗಳು ಬಹು ಮುಖ್ಯವಾಗಿ ಬೇಕಾಗಿದ್ದು, ಎಲ್ಲ ತಾಲ್ಲೂಕುಗಳ ತಹಶೀಲ್ದಾರ ರಿಗೆ ವಿಶೇಷ ಶಿಬಿರ ಮಾಡಿ ಜತಿ ಪ್ರಮಾಣ ಪತ್ರ ನೀಡುವಂತೆ ಹಾಗೂ ಸ್ಥಾನಿಕ ಚೌಕಾಸಿ ಮಾಡಿ ಜತಿ ಪ್ರಮಾಣ ಪತ್ರ ಒದಗಿಸಲು ಸೂಚಿಸಲಾಗಿದೆ.
ರಾಜ್ಯದಲ್ಲಿ ವಸತಿರಹಿತ ಅಲೆಮಾರಿಗಳಿಗೆ ೩೨೦೦ ಮನೆ ನೀಡುವ ಅವಕಾಶ ನಿಗಮಕ್ಕಿದ್ದು, ಜಿಗಳಿಂದ ಬೇಡಿಕೆ ಬರಬೇಕಿದೆ. ಸಮರ್ಪಕ ದಾಖಲಾತಿಗಳಿಲ್ಲದ ಕಾರಣ ಬೇಡಿಕೆ ಕಡಿಮೆ ಇದ್ದು ವಸತಿ ಸೌಲಭ್ಯ ನೀಡಲಾಗುತ್ತಿಲ್ಲ. ಆದ್ದರಿಂದ ಎಲ್ಲ ತಾಲ್ಲೂಕು ಅಧಿಕಾರಿಗಳು ಇಚ್ಚಾಶಕ್ತಿಯಿಂದ ಕೆಲಸ ಮಾಡಿ ಇವರಿಗೆ ಅನುಕೂಲ ಮಾಡಿಕೊಡಬೇಕೆಂದರು.
ಶಿಕಾರಿಪುರ ತಾಲ್ಲೂಕಿನಲ್ಲಿ ಶಿಳ್ಳೇಕ್ಯಾತರು, ಹಂದಿಗೊಲ್ಲರು, ದೊಂಬರ ಜನಾಂಗದವರ ನಿವೇಶನಕ್ಕೆ ಸಂಬಂಧಿಸಿದಂತೆ ಸಮಸ್ಯೆಗಳಿವೆ. ಸಾಗರ ಮತ್ತು ಸೊರಬ ತಾಲ್ಲೂಕಿನಲ್ಲಿ ಕೊರಚ, ಶಿಳ್ಳೇಕ್ಯಾತರ ಜತಿಪ್ರಮಾಣ ಪತ್ರ ಮತ್ತು ಆಧಾರ್ ಪಡೆಯುವಲ್ಲಿ ಸಮಸ್ಯೆ ಇದ್ದು, ತಹಶೀಲ್ದಾರರು ಈ ದಾಖಲಾತಿ ನೀಡುವಲ್ಲಿ ಅನುಕೂಲ ಮಾಡಿಕೊಟ್ಟಿzರೆ. ಶಿವಮೊಗ್ಗದಲ್ಲಿಯೂ ಜತಿ ಪ್ರಮಾಣ ಪತ್ರ ಒದಗಿಸುವ ಕೆಲಸ ಪ್ರಗತಿಯಲ್ಲಿದೆ ಎಂದರು
ನಿವೇಶನ ರಹಿತರ ಪಟ್ಟಿ ನೀಡಲು ಸೂಚನೆ : ಅಲೆಮಾರಿ ಜನಾಂಗದವರಿಗೆ ವಸತಿ ಸೌಲಭ್ಯ ನೀಡುವ ಸಲುವಾಗಿ ಇನ್ನು ಒಂದು ವಾರದೊಳಗೆ ವಸತಿರಹಿತರ ಮಾಹಿತಿ ನೀಡುವಂತೆ ಸಮಾಜ ಕಲ್ಯಾಣ ಇಲಾಖೆ ಹಾಗೂ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿzನೆ.
ನಿಗಮದಿಂದ ನೀಡಲಾಗುವ ಸೌಲಭ್ಯಗಳ ಕುರಿತು ಅಲೆಮಾರಿ ಜನಾಂಗದವರಿಗೆ ಅಷ್ಟಾಗಿ eನ ಇಲ್ಲವಾಗಿದ್ದು, ಕಾಲ ಕಾಲಕ್ಕೆ ಇವರು ಇರುವ ಸ್ಥಳಗಳಲ್ಲಿ ಅರಿವು ಮೂಡಿ ಸುವ ಕಾರ್ಯಕ್ರಮ ಮಾಡಲು ನಿಗಮದಿಂದ ವಿಶೇಷ ಅನುದಾನ ನೀಡಲಾಗುತ್ತಿದ್ದು, ಸಮಾಜ ಕಲ್ಯಾಣ ಇಲಾಖೆಗೆ ಮಾಹಿತಿ ಶಿಕ್ಷಣ ಸಂಹವಹ ಚಟುವಟಿಕೆ ಕೈಗೊಳ್ಳಲು ಸೂಚಿಸಲಾಗಿದೆ ಎಂದರು.
ಪತ್ರಿಕಾಗೋಷ್ಟಿಯಲ್ಲಿ ಜಿಧಿಕಾರಿಗಳಾದ ಪ್ರಭುಲಿಂಗ ಕವಳಿಕಟ್ಟಿ, ಹೆಚ್ಚುವರಿ ಪೊಲೀಸ್ ವರಿಷ್ಟಾಧಿಕಾರಿ ರಮೇಶ್ ಕುಮಾರ್, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಮಶಪ್ಪ ಡಿ, ನಿಗದಮ ಸದಸ್ಯರು, ನಿಗದಮ ಕೋಆರ್ಡಿನೇಟರ್ ಆನಂದಕುಮಾರ್ ಹಾಜರಿದ್ದರು.
