ಇತರೆಜಿಲ್ಲಾ ಸುದ್ದಿತಾಜಾ ಸುದ್ದಿ

ಪ್ಲಾಸ್ಟಿಕ್ ಮುಕ್ತ ಪರಿಸರಕ್ಕೆ ಸಾರ್ವಜನಿಕರ ಸಹಕಾರ ಅಗತ್ಯ: ಪೂರ್ಣಿಮಾ ಸುನಿಲ್

Share Below Link

ಶಿವಮೊಗ್ಗ: ಪ್ಲಾಸ್ಟಿಕ್ ಮುಕ್ತ ಪರಿಸರ ನಿರ್ಮಾಣ ಮಾಡುವಲ್ಲಿ ಪ್ರತಿಯೊಬ್ಬರ ಸಹಕಾರ ಅಗತ್ಯ. ಸಾರ್ವಜನಿಕರು ಪ್ಲಾಸ್ಟಿಕ್ ಬಳಕೆ ಮಾಡುವುದನ್ನು ನಿಲ್ಲಿಸಬೇಕು. ಮಾರುಕಟ್ಟೆಗೆ ಉತ್ಪನ್ನಗಳನ್ನು ತರುವುದಕ್ಕೆ ಬಟ್ಟೆ ಬ್ಯಾಗ್ ಬಳಸಬೇಕು ಎಂದು ಜೆಸಿಐ ಶಿವಮೊಗ್ಗ ಭಾವನಾ ಅಧ್ಯಕ್ಷೆ ಪೂರ್ಣಿಮಾ ಸುನೀಲ್ ಹೇಳಿದರು.
ನಗರದ ಗಾಂಧಿಬಜರ್‌ನಲ್ಲಿ ಜೆಸಿಐ ಶಿವಮೊಗ್ಗ ಭಾವನಾ ಸಂಸ್ಥೆ ವತಿಯಿಂದ ಆಯೋಜಿಸಿದ್ದ ಪರಿಸರ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿ, ಪರಿಸರ ಸಂರಕ್ಷಣೆ ಯಲ್ಲಿ ಪ್ರತಿಯೊಬ್ಬರ ಪಾತ್ರವು ಇದ್ದು, ಪರಿಸರ ಹಾನಿಯಾಗುವು ದನ್ನು ತಡೆಗಟ್ಟಬೇಕು ಎಂದರು.
ಸಂಚಾರ ನಿಯಮಗಳನ್ನು ಪ್ರತಿಯೊಬ್ಬರೂ ಪಾಲಿಸುವುದರಿಂದ ಅಪಘಾತ ಪ್ರಕರಣಗಳು ಕಡಿಮೆ ಆಗುತ್ತವೆ. ಸಾರ್ವಜನಿಕರು ಸುರಕ್ಷತೆ ದೃಷ್ಠಿಯಿಂದ ಹೆಲ್ಮೆಟ್ ಕಡ್ಡಾಯ ಬಳಕೆ ಸೇರಿದಂತೆ ಎಲ್ಲ ನಿಯಮ ಗಳನ್ನು ಪಾಲಿಸಬೇಕು. ನೋ ಪಾರ್ಕಿಂಗ್ ಸ್ಥಳದಲ್ಲಿ ವಾಹನಗಳನ್ನು ನಿಲ್ಲಿಸಬಾರದು ಎಂದರು.
ಜೆ ಸಿ ಐ ಶಿವಮೊಗ್ಗ ಭಾವನದ ಸಂಸ್ಥೆ ವತಿಯಿಂದ ಸಾರ್ವಜನಿಕರಲ್ಲಿ ಪರಿಸರದ ಬಗ್ಗೆ ಅರಿವು ಮೂಡಿಸಲು ಗಾಂಧಿ ಬಜರ್ ಆರಂಭದ ರಸ್ತೆಯಲ್ಲಿ ನೋ ಪಾರ್ಕಿಂಗ್ ಹಾಗೂ ಪ್ಲಾಸ್ಟಿಕ್ ತ್ಯಜಿಸಿ ಪರಿಸರ ಉಳಿಸಿ ಎಂಬ ಸ್ಲೋಗನ್ ಇರುವ ನಾಮಫಲಕವನ್ನು ಅಧ್ಯಕ್ಷೆ ಪೂರ್ಣಿಮಾ ಸುನಿಲ್ ಅವರ ಅಧ್ಯಕ್ಷತೆಯಲ್ಲಿ ಅನಾವರಣ ಗೊಳಿಸಲಾಯಿತು.
ರಾಷ್ಟ್ರೀಯ ಉಪಾಧ್ಯಕ್ಷ ಅಂಕುರ್ ಜುಂಜುನ್‌ವಾಲಾ ಅವರು ಜೆಸಿಐ ಶಿವಮೊಗ್ಗ ಭಾವನಾ ಸಂಸ್ಥೆಯ ಕಾರ್ಯಕ್ರಮಗಳನ್ನು ಶ್ಲಾಸಿದರು. ಮುಂದಿನ ದಿನಗಳಲ್ಲಿ ಹೆಚ್ಚು ಜಗೃತಿ ಕಾರ್ಯಕ್ರಮಗಳನ್ನು ಆಯೋಜಿಸುವಂತೆ ಸಲಹೆ ನೀಡಿದರು.
ಜೆಸಿಐ ವಲಯ ಅಧ್ಯಕ್ಷ ಅನುಷ್ ಗೌಡ, ಸತೀಶ್ ಚಂದ್ರ, ದಿವ್ಯಾ ಪ್ರವೀಣ್, ಶಾರದಾ ಶೇಷಗಿರಿಗೌಡ, ಕಾರ್ಯದರ್ಶಿ ಲಲಿತಾ, ಸುನೀಲ್, ಪೊಲೀಸ್ ಸಿಬ್ಬಂದಿ, ಜೆಸಿಐ ಭಾವನಾ ಪದಾಧಿಕಾರಿಗಳು ಉಪಸ್ಥಿತರಿದ್ದರು.