ಕರ್ನಾಟಕ ಸಂಘಕ್ಕೆ ರಾಜ್ಯೋತ್ಸವ ಪ್ರಶಸ್ತಿ ಪ್ರಧಾನ
ಶಿವಮೊಗ್ಗ: ನಿನ್ನೆ ಸಂಜೆ ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ನಡೆದ ಅದ್ಧೂರಿ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಶಿವಮೊಗ್ಗದ ಹೆಮ್ಮೆಯ ಪ್ರತಿಷ್ಠಿತ ಕರ್ನಾಟಕ ಸಂಘಕ್ಕೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡ ಲಾಯಿತು. ಸಂಘದ ಪರವಾಗಿ ಸಂಘದ ಅಧ್ಯಕ್ಷ ಎಂ.ಎನ್. ಸುಂದರ ರಾಜ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಪ್ರಶಸ್ತಿ ಸ್ವೀಕರಿಸಿದರು.
ಹಾಗೆಯೇ ಜಿಲ್ಲೆಯ ರಂU ಭೂಮಿ ಕ್ಷೇತ್ರದಲ್ಲಿ ಸಾಧನೆಗೈದ ಎ.ಜಿ. ಚಿದಂಬರರಾವ್ ಜಂಬೆ ಅವರಿಗೂ ಸಹ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್, ಗೃಹ ಸಚಿವ ಡಾ. ಜಿ. ಪರಮೇಶ್ವರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಹಾಗೂ ಇನ್ನಿತರ ಗಣ್ಯರ ಸಮ್ಮುಖದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಪ್ರಶಸ್ತಿ ಪುರಸ್ಕೃತರಿಗೆ ೫ಲಕ್ಷ ರೂ. ನಗದು, ೨೫ ಗ್ರಾಂ ಚಿನ್ನದ ಪದಕ, ಪ್ರಶಸ್ತಿ ಪತ್ರ ನೀಡಿ ಮೈಸೂರು ಪೇಟ ತೊಡಿಸಿ ಸನ್ಮಾನಿಸಲಾಯಿತು.