ಕ್ರೈಂಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಕಾಂಗ್ರೆಸ್ ಸರ್ಕಾರದಲ್ಲಿ ಮುಗಿಲುಮುಟ್ಟಿದ ಭ್ರಷ್ಟಾಚಾರ…

Share Below Link

ಶಿವಮೊಗ್ಗ: ಕಾಂಗ್ರೆಸ್ ಸರ್ಕಾರ ದಲ್ಲಿ ಭ್ರಷ್ಟಾಚಾರ ಮುಗಿಲು ಮುಟ್ಟಿದ್ದು, ಇದಕ್ಕೆ ಸಾಕ್ಷಿ ಎಂಬಂತೆ ಶಿವಮೊಗ್ಗದ ಅಧಿಕಾರಿ ಚಂದ್ರಶೇಖರ್ ಎಂಬು ವವರು ಆತ್ಮಹತ್ಯೆ ಮಾಡಿಕೊಂಡಿzರೆ. ಇದು ಅತ್ಯಂತ ಖಂಡನೀಯ ಎಂದು ಶಾಸಕ ಎಸ್.ಎನ್. ಚನ್ನಬಸಪ್ಪ ಅವರು ಆಕ್ರೋಶ ವ್ಯಕ್ತಪಡಿಸಿದರು.


ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚಂದ್ರಶೇಖರ್ ಅವರ ಆತ್ಮಹತ್ಯೆ ಕೊಲೆಗಡುಕ ಸರ್ಕಾರ ಎಂಬುದಕ್ಕೆ ಸ್ಪಷ್ಟ ಉದಾಹರಣೆ ಯಾಗಿದೆ. ಕಾಂಗ್ರೆಸ್ ಸರ್ಕಾರದಲ್ಲಿ ಅಧಿಕಾರಿಗಳು ಕೆಲಸ ಮಾಡುವುದೇ ಕಷ್ಟವಾಗಿದೆ. ಹೀಗೆ ಮುಂದುವರೆದರೆ ಮತ್ತಷ್ಟು ಅಧಿಕಾರಿಗಳು ಆತ್ಮಹತ್ಯೆ ಮಾಡಿಕೊಳ್ಳುವ ಕಾಲ ದೂರವಿಲ್ಲ. ಇದು ಸಾವಿನ ಸರ್ಕಾರ ಎಂದರು.
ಚಂದ್ರಶೇಖರ್ ಅವರು ವಾಲ್ಮೀಕಿ ನಿಗಮದಲ್ಲಿ ಅಧೀಕ್ಷಕರಾಗಿ ಕೆಲಸ ನಿರ್ವಹಿಸುತ್ತಿದ್ದರು. ನಿಗಮದಲ್ಲಿದ್ದ ಸುಮಾರು ೧೮೭.೩೩ ಕೋಟಿ ರೂ.ಗಳನ್ನು ವಿವಿಧ ಖಾತೆಗಳಿಗೆ ವರ್ಗಾವಣೆ ಮಾಡಲು ಹಿರಿಯ ಅಧಿಕಾರಿಗಳಿಂದ ಆದೇಶ ಬಂದಿತ್ತು. ಈ ಹಿನ್ನಲೆಯಲ್ಲಿ ಅವರು ಬೇರೆ ಬೇರೆ ದಿನಾಂಕಗಳಲ್ಲಿ ಬೇರೆ ಬೇರೆ ಇಲಾಖೆಗಳಿಗೆ ಸುಮಾರು ೧೭೭.೩೫ ಕೋಟಿ ರೂ. ವರ್ಗಾವಣೆ ಮಾಡಬೇಕಾಯಿತು. ಈ ವರ್ಗಾವಣೆ ಮಾಡಲು ಸಚಿವರೊಬ್ಬರಿಂದ ಮಖಿಕ ಆದೇಶ ಬಂದಿತ್ತು ಎಂದು ಆತ್ಮಹತ್ಯೆ ಮಾಡಿಕೊಂಡ ಚಂದ್ರಶೇಖರ್ ತಮ್ಮ ಡೆತ್ ನೋಟ್ ನಲ್ಲಿ ಸ್ಪಷ್ಟವಾಗಿ ತಿಳಿಸಿzರೆ ಎಂದರು.
ಸಚಿವರು ಎಂದರೆ ಮಹಾದೇವಪ್ಪನವರೇ ಎಂದು ಸ್ಪಷ್ಟವಾಗುತ್ತದೆ. ಅವರ ಹೆಸರನ್ನು ನೇರವಾಗಿ ಬರೆಯದಿದ್ದರೂ ಇಲಾಖೆಗೆ ಸಂಬಂಧಪಟ್ಟ ಸಚಿವರು ಅವರೇ ಆಗಿರುವುದರಿಂದ ರಾಜ್ಯ ಸರ್ಕಾರ ಅವರನ್ನು ತಕ್ಷಣವೇ ಸಂಪುಟ ದಿಂದ ವಜ ಮಾಡಬೇಕು ಎಂದರು.
ಚಂದ್ರಶೇಖರ್ ಅವರು ತಮ್ಮ ಡೆತ್ ನೋಟ್‌ನಲ್ಲಿ ಎ ವಿವರಗಳನ್ನು ಬರೆದಿಟ್ಟಿzರೆ. ಸುಮಾರು ೮೭ ಕೋಟಿ ಅವ್ಯವಹಾರ ಆಗಿದೆ ಎಂದು ಅವರೇ ಹೇಳಿzರೆ. ಆದರೆ ಇಡೀ ಘಟನೆ ಯನ್ನು ಮತ್ತು ಹಣದ ವರ್ಗಾವಣೆಗಳನ್ನು ನೋಡಿದರೆ ೧೮೭ ಕೋಟಿ ಹಣದಲ್ಲಿ ಅವ್ಯವಹಾರ ವಾಗಿದೆ ಎಂಬ ಸಂಶಯ ಉಂಟಾಗು ತ್ತದೆ. ಆದ್ದರಿಂದ ಈ ಘಟನೆಯನ್ನು ಉನ್ನತ ತನಿಖೆಗೆ ಒಳಪಡಿಸಬೇಕು. ಮತ್ತು ತಪ್ಪಿತಸ್ಥರ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದರು.
ಪರಿಶಿಷ್ಟರ ಕಲ್ಯಾಣಕ್ಕಾಗಿ ಈ ನಿಗಮ ಸ್ಥಾಪನೆಯಾಗಿದೆ. ಆದರೆ ಇಲ್ಲಿನ ಹಣ ವನ್ನು ಸಮರ್ಥವಾಗಿ ಬಳಸಿಕೊಳ್ಳದೇ ಹೀಗೆ ಭ್ರಷ್ಟಾಚಾರ ನಡೆಸಲಾಗಿದೆ. ವಾಲ್ಮೀಕಿ ಕವಿಗೆ ಅವಮಾನ ಮಾಡಿದಂತಾಗಿದೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಅಧಿಕಾರಿಗಳ ಮೇಲೆ ತೀವ್ರ ಒತ್ತಡವಾಗುತ್ತಿದೆ. ಚಂದ್ರಶೇಖರ್ ಅವರು ಈ ಹಣವನ್ನು ಯಾರು ಯಾರಿಗೆ ಕೊಡಲಾಗಿದೆ ಎಂಬ ಅಧಿಕಾರಿಗಳ ಪಟ್ಟಿಯನ್ನೇ ಬರೆದಿಟ್ಟಿzರೆ. ಎಂಡಿ ಜೆ.ಜೆ. ಪದ್ಮನಾಭ್ ಮತ್ತು ಸಂಗಡಿಗರು, ಲೆಕ್ಕಾಧಿಕಾರಿ ಪರಶುರಾಮ್, ಬ್ಯಾಂಕ್ ಅಧಿಕಾರಿ ಸುಚಿತ್ ಸ್ಮಿತಾ ಮತ್ತಿತರರ ಹೆಸರನ್ನು ಡೆತ್ ನೋಟ್‌ನಲ್ಲಿ ದಾಖಲಿಸಲಾಗಿದೆ ಎಂದರು.
ಆದ್ದರಿಂದ ಮೃತರ ಕುಟುಂಬಕ್ಕೆ ನ್ಯಾಯ ಒದಗಿಸಬೇಕು. ಉನ್ನತ ಮಟ್ಟದ ತನಿಖೆಯಾಗಬೇಕು. ಸಚಿವ ಮಹಾದೇವಪ್ಪ ಅವರನ್ನು ಸಂಪುಟದಿಂದ ವಜ ಮಾಡಬೇಕು. ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದ ಅವರು, ಈ ಬಗ್ಗೆ ರಾಜ್ಯಪಾಲರಿಗೂ ಪತ್ರ ಬರೆಯುತ್ತೇವೆ. ರಾಜ್ಯ ಸರ್ಕಾರ ಕ್ರಮ ತೆಗೆದುಕೊಳ್ಳದಿದ್ದರೆ ನಮ್ಮ ಹೋರಾಟ ಮುಂದುವರೆಯುತ್ತದೆ ಎಂದರು.
ಬಿಜೆಪಿ ಜಿಧ್ಯಕ್ಷ ಟಿ.ಡಿ. ಮೇಘರಾಜ್, ಪ್ರಮುಖರಾದ ಶಿವರಾಜ್, ಎನ್.ಜೆ. ರಾಜಶೇಖರ್, ಚಂದ್ರಶೇಖರ್, ಕೆ.ವಿ. ಅಣ್ಣಪ್ಪ, ಜಗದೀಶ್, ಶ್ರೀನಾಗ್ ಇದ್ದರು.

This image has an empty alt attribute; its file name is Arya-coll.gif