ಗಣರಾಜ್ಯೋತ್ಸವ ನಮ್ಮ ಕರ್ತವ್ಯಗಳನ್ನು ನೆನಪಿಸುವ, ಪ್ರಜಪ್ರಭುತ್ವ ಮಲ್ಯಗಳನ್ನು ಎತ್ತಿಹಿಡಿಯುವ ದಿನ : ಶಾಸಕ ಬಿ.ಕೆ ಸಂಗಮೇಶ್ವರ್
ಭದ್ರಾವತಿ : ಗಣರಾಜ್ಯೋತ್ಸವ ಎಂಬುದು ಕೇವಲ ಹಬ್ಬವಲ್ಲ. ನಮ್ಮ ಕರ್ತವ್ಯ ಗಳನ್ನು ನೆನಪಿಸುವ ದಿನ, ಪ್ರಜಪ್ರಭುತ್ವ ಮಲ್ಯಗಳನ್ನು ಎತ್ತಿಹಿಡಿಯುವ ದಿನ ಎಂದು ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ ಹೇಳಿದರು.
ಹಳೇನಗರದ ಕನಕಮಂಟಪ ಮೈದಾನದಲ್ಲಿ ಆಯೋಜಿಸಿದ್ದ ಗಣ ರಾಜ್ಯೋತ್ಸವ ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ೧೯೫೦ ಜ. ೨೬ರಂದು ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್‌ರವರು ರಚಿಸಿದ ದೇಶದ ಸಂವಿಧಾನ ಸ್ವಾತಂತ್ರ್ಯ, ಸಮಾನತೆ, ಸಹೋದರತ್ವ ಮತ್ತು ನ್ಯಾಯ ಎಂಬ ಮಹಾನ್ ಮಲ್ಯಗಳನ್ನು ನೀಡಿದೆ. ಈ ಮೂಲಕ ದೇಶದ ಸಾಮಾಜಿಕ, ಆರ್ಥಿಕ, ರಾಜಕೀಯ ನ್ಯಾಯ ವನ್ನು, ವಿಚಾರವನ್ನು ಸಾರ್ವಜನಿಕರಲ್ಲಿ ಅಭಿವ್ಯಕ್ತಿಗೊಳಿಸಿzವೆ ಎಂದರು.

ದೇಶದ ಪ್ರಜೆಗಳಾದ ನಾವುಗಳು ಒಬ್ಬರಿಗೊಬ್ಬರು ಗೌರವ ಮತ್ತು ಸಮಾನತೆಯಿಂದ ಕಾಣುವ ಮೂಲಕ ದೇಶದ ಏಕತೆಯನ್ನು ಎತ್ತಿಹಿಡಿಯಬೇಕು. ಭ್ರಾತೃತ್ವ ಭಾವನೆಯನ್ನು ಬೆಳೆಸಿಕೊಂಡು ದೇಶವನ್ನು ಉನ್ನತ ಪ್ರಗತಿಯ ಕಡೆಗೆ ಕೊಂಡೊಯ್ಯಬೇಕು ಎಂದರು.
ಪ್ರಕರಣದ ತನಿಖೆಯೊಂದರಲ್ಲಿ ಉತ್ತಮ ಕಾರ್ಯಸಾಧನೆ ಯೊಂದಿಗೆ ಜಿ ಪೊಲೀಸ್ ನಿಂದ ಪ್ರಶಂಸೆಗೆ ಒಳಗಾಗಿರುವ ಉಪವಿಭಾಗದ ಉಪಾಧೀಕ್ಷಕ ಪ್ರಕಾಶ್ ರಾಥೋಡ್, ನಗರ ವೃತ್ತ ನಿರೀಕ್ಷಕಿ ನಾಗಮ್ಮ ಮತ್ತು ಹಳೇನಗರ ಪೊಲೀಸ್ ಠಾಣೆ ಉಪ ನಿರೀಕ್ಷಕ ಸುನೀಲ್ ತೇಲಿ, ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ ಸೇರಿದಂತೆ ಇನ್ನಿತರ ಸಾಧಕರನ್ನು ಸನ್ಮಾನಿಸಿ ಗೌರವಿಸಲಾಯಿತು.
ತಾಲೂಕು ದಂಡಾಧಿಕಾರಿ ತಹಸೀಲ್ದಾರ್ ಪರುಸಪ್ಪ ಕುರುಬರ ಧ್ವಜಾರೋಹಣ ನೆರವೇರಿಸಿದು.
ವಿವಿಧ ಶಾಲಾ-ಕಾಲೇಜುಗಳ ಎನ್‌ಸಿಸಿ, ಸ್ಕೌಟ್ಸ್ ಮತ್ತು ಗೈಡ್ಸ್, ಸೇವಾದಳ ತಂಡಗಳು, ಆರಕ್ಷಕ ದಳ, ಗೃಹರಕ್ಷಕ ದಳ, ಬ್ಯಾಂಡ್‌ಸೆಟ್ ತಂಡಗಳಿಂದ ಪಥ ಸಂಚಲನ ನಡೆಯಿತು. ಹೊಸಮನೆ ಶಿವಾಜಿ ಸರ್ಕಲ್ ಪೊಲೀಸ್ ಠಾಣೆ ಉಪ ನಿರೀಕ್ಷಕ ಎಂ.ಪಿ ಸಿದ್ದಪ್ಪ ಪಥ ಸಂಚಲನದ ನೇತೃತ್ವವಹಿಸಿದ್ದರು.
ನಗರಸಭೆ ಅಧ್ಯಕ್ಷೆ ಜೆ.ಸಿ ಗೀತಾರಾಜಕುಮಾರ್, ಉಪಾಧ್ಯಕ್ಷ ಬಷೀರ್ ಅಹಮದ್, ಸ್ಥಾಯಿ ಸಮಿತಿ ಅಧ್ಯಕ್ಷ ಸೈಯದ್ ರಿಯಾಜ್, ಪೌರಾಯುಕ್ತ ಕೆ.ಎನ್ ಹೇಮಂತ್, ತಾಲೂಕು ಆರೋಗ್ಯಾಧಿಕಾರಿ ಡಾ. ಎಂ.ವಿ ಅಶೋಕ್ ಇನ್ನಿತರರಿದ್ದರು

