ಉದ್ಯೋಗಜಿಲ್ಲಾ ಸುದ್ದಿತಾಜಾ ಸುದ್ದಿ

ದೇವಕಾತಿಕೊಪ್ಪ ಕೈಗಾರಿಕೆಗಳಿಗೆ ಪರಿಸರ ಅನುಮತಿ ಸಮಸ್ಯೆ ಪರಿಹರಿಸಿ…

Share Below Link

ಶಿವಮೊಗ್ಗ : ದೇವಕಾತಿ ಕೊಪ್ಪ ಕೈಗಾರಿಕಾ ಪ್ರದೇಶದ ಕೈಗಾರಿಕೆಗಳಿಗೆ ಪರಿಸರ ಅನುಮತಿ ನೀಡುವಿಕೆಯ ಸಮಸ್ಯೆಯನ್ನು ಪರಿಹರಿಸಬೇಕಿದೆ ಎಂದು ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್ ಹೇಳಿದರು.
ಜಿ ವಾಣಿಜ್ಯ ಸಂಘದ ಶಾಂತಲಾ ಸ್ಪೇರೋಕಾಸ್ಟ್ ಸಭಾಂಗಣದಲ್ಲಿ ದೇವಕಾತಿಕೊಪ್ಪ ಕೈಗಾರಿಕಾ ಪ್ರದೇಶಕ್ಕೆ ಸಂಬಂಧಿಸಿ ಸುಪ್ರೀಂ ಕೋರ್ಟ್ ತೀರ್ಪಿನ ಕುರಿತು ಸರ್ಕಾರದ ಗಮನ ಸೆಳೆಯಲು ಹಾಗೂ ಮುಂದಿನ ಹೆಜ್ಜೆಗಳ ಕುರಿತು ಚರ್ಚಿಸಿ ಸೂಕ್ತ ತೀರ್ಮಾನ ಕೈಗೊಳ್ಳಲು ಏರ್ಪಡಿ ಸಿದ್ದ ದೇವಕಾತಿಕೊಪ್ಪ ಕೈಗಾರಿಕಾ ವಲಯದ ಕೈಗಾರಿಕೋದ್ಯಮಿಗಳ ಸಭೆಯಲ್ಲಿ ಮಾತನಾಡಿದ ಅವರು, ದೇವಕಾತಿ ಕೈಗಾರಿಕಾ ಪ್ರದೇಶದಲ್ಲಿ ೪೫೦ ಎಕರೆ ಪ್ರದೇಶದಲ್ಲಿ ೨೦೦ ಜನಕ್ಕೆ ಕೈಗಾರಿಕಾ ಭೂಮಿ ಮಂಜೂರು ಮಾಡಿದ್ದು, ೨೦ ಜನ ಕೈಗಾರಿಕೆ ಪ್ರಾರಂಭಿಸಿzರೆ. ಉಳಿದ ೧೮೦ ಜನ ಕೈಗಾರಿಕೆ ಪ್ರಾರಂಭಿಸಲು ತಯಾರಿ ಮಾಡಿಕೊಂಡಿzರೆ. ಕೈಗಾರಿಕಾ ಪ್ರದೇಶದಲ್ಲಿ ಮೂಲ ಸೌಕರ್ಯ ಸೌಕರ್ಯಗಳಿಲ್ಲ. ಈವರೆಗೂ ಸಹ ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿಯು ಮಂಜೂರು ಮಾಡಿರುವ ಕೈಗಾರಿಕೆಗಳಿಗೆ ಮಾಲಿನ್ಯ ನಿಯಂತ್ರಣ ಮಂಡಳಿ ಯಿಂದ ಪರಿಸರ ಅನುಮತಿ ಕೊಡಿಸಿಲ್ಲ ಎಂದು ದೂರಿದರು.


ರಾಜ್ಯದ ಮೂರು ಕೈಗಾರಿಕಾ ಪ್ರದೇಶಗಳಿಗೂ ಪರಿಸರ ಅನುಮತಿ ಇಲ್ಲದೆ ಕೈಗಾರಿಕೆಗಳನ್ನು ಪ್ರಾರಂಭಿಸಿದ್ದು, ಇತ್ತೀಚೆಗೆ ಸುಪ್ರೀಂ ಕೋರ್ಟ್‌ನ ಹಸಿರು ಪೀಠವು ಪರಿಸರ ಅನುಮತಿ ಇಲ್ಲದೆ ಇರುವ ಎಲ್ಲ ಕೈಗಾರಿಕೆಗಳನ್ನು ಮುಚ್ಚಲು ಆದೇಶ ನೀಡಿದೆ. ಕೋಟ್ಯಾಂತರ ರೂಪಾಯಿ ಸಾಲ ಮಾಡಿ, ಅತಿ ಹೆಚ್ಚಿನ ಬೆಲೆಗೆ ಕೈಗಾರಿಕೆ ಭೂಮಿ ಪಡೆದು ಮೂಲ ಸೌಕರ್ಯಗಳನ್ನು ಮಾಡಿಕೊಂಡು ಕೈಗಾರಿಕೆಗಳನ್ನು ಪ್ರಾರಂಭಿಸಿರುವ ಕೈಗಾರಿಕೆಗಳಿಗೆ ಮುಚ್ಚುವ ಆತಂಕ ಎದುರಾಗಿದೆ ಎಂದರು.
ದೇವಕಾತಿ ಕೈಗಾರಿಕಾ ವಲಯ ೫೦೦ ಎಕರೆಗಿಂತ ಕಡಿಮೆ ಪ್ರದೇಶ ಇರುವುದರಿಂದ ರಾಜ್ಯ ವ್ಯಾಪ್ತಿಗೆ ಬರುತ್ತದೆ. ಕೈಗಾರಿಕಾ ಭೂಮಿಯನ್ನು ವಾಪಸ್ ಮಾಡುವ ಕೈಗಾರಿಕೋದ್ಯ ಮಿಗಳಿಗೆ ಶೇ. ೨೦ರಷ್ಟು ಕಡತ ಮಾಡಿದೆ. ಪೂರ್ತಿ ಹಣ ವಾಪಸ್ ಕೊಡಬೇಕು. ದಂಡ, ಬಡ್ಡಿಯನ್ನು ಮನ್ನಾ ಮಾಡಬೇಕು. ಆಗಿರುವ ನಷ್ಟಕ್ಕೆ ಪರಿಹಾರವನ್ನು ಕೈಗಾರಿಕೋದ್ಯಮಿಗಳಿಗೆ ರಾಜ್ಯ ಸರ್ಕಾರ ತುಂಬಿಕೊಡಬೇಕು ಎಂದು ಒತ್ತಾಯಿಸಿದರು.
ಜಿ ವಾಣಿಜ್ಯ ಸಂಘದ ಅಧ್ಯಕ್ಷ ಬಿ.ಗೋಪಿನಾಥ್, ದೇವಕಾತಿ ಕೈಗಾರಿಕಾ ವಲಯದ ಅಧ್ಯಕ್ಷ ಮಂಜುನಾಥ್ , ಪ್ರಮುಖರಾದ ಜಿ.ವಿಜಯ್ ಕುಮಾರ್, ಸುರೇಶ್, ಮನೋಹರ, ಡಾ. ಲಕ್ಷ್ಮೀದೇವಿ ಗೋಪಿನಾಥ್, ಬಿ.ಸುರೇಶ್ ಕುಮಾರ್, ರವಿಪ್ರಕಾಶ್ ಜೆನ್ನಿ, ಜಿ.ವಿ. ಕಿರಣ್ ಕುಮಾರ್, ವಿನೋದ್ ಕುಮಾರ್, ವಾಸುದೇವ್, ಡಿ.ಎಂ.ಶಂಕರಪ್ಪ ಇನ್ನಿತರರಿದ್ದರು.