ಇತರೆಜಿಲ್ಲಾ ಸುದ್ದಿತಾಜಾ ಸುದ್ದಿ

ಮಾನವ ಸಂಪನ್ಮೂಲ ಸರಬರಾಜು ಸಂಸ್ಥೆಗಳ ಆಡಳಿತ ವ್ಯವಸ್ಥೆ ಪರಿಶೀಲಿಸಿ : ಆರ್.ಸೆಲ್ವಮಣಿ

Share Below Link

ಶಿವಮೊಗ್ಗ : ಜಿಯ ವಿವಿಧ ಸರ್ಕಾರಿ ಕಚೇರಿಗಳಿಗೆ ಮಾನವ ಸಂಪನ್ಮೂಲವನ್ನು ಸರಬರಾಜು ಮಾಡಲು ಅನುಮತಿ ಪಡೆದಿರುವ ಗುತ್ತಿಗೆದಾರ ಸಂಸ್ಥೆಗಳು ಕೆಲಸಕ್ಕಾಗಿ ನೇಮಕವಾಗುವ ಅಭ್ಯರ್ಥಿಗಳಿಂದ ಭಾರೀ ಪ್ರಮಾಣದ ಹಣ ವಸೂಲು ಮಾಡುತ್ತಿರುವ ಬಗ್ಗೆ ಹಾಗೂ ಅವ ರಿಗೆ ನೀಡಲಾಗುತ್ತಿರುವ ಸಮ ವಸ್ತ್ರಗಳ ಬಗ್ಗೆ ಸಾರ್ವಜನಿಕ ವಲಯ ದಿಂದ ಭಾರೀ ಪ್ರಮಾಣ ದೂರು ಗಳು ಬರುತ್ತಿರುವ ಹಿನ್ನೆಲೆಯಲ್ಲಿ ಜಿ ಕಾರ್ಮಿಕ ಅಧಿಕಾರಿಗಳು ಅಂತಹ ಸಂಸ್ಥೆಗಳನ್ನು ಪರಿಶೀಲಿಸಿ, ತಪ್ಪಿದಲ್ಲಿ ಅಗತ್ಯ ಕ್ರಮ ಕೈಗೊಳ್ಳು ವಂತೆ ಡಿಸಿ ಡಾ| ಸೆಲ್ವಮಣಿ ಅವರು ಜಿ ಕಾರ್ಮಿಕ ಅಧಿಕಾರಿಗಳಿಗೆ ಸೂಚಿಸಿದರು.
ಸಮಾಜ ಕಲ್ಯಾಣ ಇಲಾಖೆ ಏರ್ಪಡಿಸಿದ್ದ ಜಿ ಮಟ್ಟದ ಜಗೃತಿ ಮತ್ತು ಉಸ್ತು ವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತ ನಾಡಿದ ಅವರು ಕೆಲವು ಸಂಸ್ಥೆಗಳು ಪ್ರತಿ ವ್ಯಕ್ತಿಯಿಂದ ರೂ.೨ಸಾವಿರ ಸಮವಸ್ತ್ರದ ಬಾಬ್ತು ರೂ.೪ ಸಾವಿರ ಹಾಗೂ ಸಿಮ್ಸ್‌ನಲ್ಲಿ ನೇಮಕವಾ ಗುವ ವ್ಯಕ್ತಿ ಲಕ್ಷಾಂತರ ರೂ.ಗಳನ್ನು ಪಡೆದಿ ರುವ ಬಗ್ಗೆ ದೂರುಗಳಿದ್ದು, ಅವುಗಳಿಗೆ ಸೂಕ್ತ ಕೈಗೊಳ್ಳುವಂತೆ ಸೂಚಿಸಲಾದೆ ಎಂದರು.
ಮರಳು ಕ್ವಾರಿಗಳಲ್ಲಿ ಅಕ್ರಮ ಮರಳು ದಂಧೆ ಅವ್ಯಾಹತವಾಗಿ ನಡೆಯುತ್ತಿದ್ದು, ಅವುಗಳನ್ನು ನಿಯಂತ್ರಿಸುವ ಕಾರ್ಯ ಆಗಬೇ ಕಾಗಿದೆ. ಸಂಬಂಧಿಸಿದ ಇಲಾಖಾ ಅಧಿಕಾರಿಗಳು ನಿರ್ಲಕ್ಷ್ಯ ಧೋರಣೆ ಹೊಂದಿzರೆ ಎಂದು ಸಮಿತಿ ಸದಸ್ಯ ಜಗದೀಶ್ ಹಸೂಡಿ ಅವರು ಡಿಸಿಗಳ ಗಮನಕ್ಕೆ ತಂದರು.
ಮಳೆಯ ಕೊರತೆಯಿಂದ ಶರಾ ವತಿ ಮತ್ತು ಭದ್ರಾ ಜಲಾಶಯಗಳ ಹಿನ್ನೀರಿನಲ್ಲಿ ಮೀನುಮರಿಗಳನ್ನು ಅವ್ಯಾಹತವಾಗಿ ಹಿಡಿಯಲಾಗು ತ್ತಿದ್ದು, ಮೀನುಗಳ ಸಂತತಿ ನಾಶ ಗೊಳ್ಳುವ ಸಂಭವವಿದೆ. ಮೀನು ಮರಿಗಳ ಸಂತಾನೋತ್ಪತ್ತಿಯ ಕಾಲ ಇದಾಗಿರುವುದರಿಂದ ಮೀನು ಹಿಡಿಯದಂತೆ ಕ್ರಮ ವಹಿಸಲು ಮೀನುಗಾರಿಕೆ ಇಲಾಖಾಧಿಕಾರಿ ಗಳಿಗೆ ಸೂಚಿಸಿದರು.
ಕುವೆಂಪು ವಿವಿ ಮುಂಭಾಗ ದಲ್ಲಿ ಮದ್ಯದಂಗಡಿ ಆರಂಭಗೊಂ ಡಿದ್ದು, ಇಲ್ಲಿನ ಶೈಕ್ಷಣಿಕ ವಾತಾ ವರಣ ಕಲುಷಿತಗೊಳ್ಳುತ್ತಿರುವ ಬಗ್ಗೆ ಆತಂಕವಿದೆ. ಈ ಬಗ್ಗೆ ತಕ್ಷಣದ ಕ್ರಮ ವಹಿಸುವಂತೆ ಸಮಿತಿ ಸದಸ್ಯ ರಾಜಕುಮಾರ್ ಅವರು ಜಿಧಿಕಾರಿಗಳಿಗೆ ತಿಳಿಸಿದಾಗ, ಅಬಕಾರಿ ಇನ್ಸ್‌ಪೆಕ್ಟರ್‌ರವರು ಸ್ಥಳಕ್ಕೆ ಭೇಟಿ ನೀಡಿ, ವಾಸ್ತವವನ್ನು ಪರಿಶೀಲಿಸಿ, ತಪ್ಪಿತಸ್ಥರ ವಿರುದ್ಧ ಮೊಕದ್ದಮೆ ದಾಖಲಿಸಿ, ಕಾನೂನೂ ಕ್ರಮ ಜರುಗಿಸುವಂತೆ ಜಿಧಿಕಾರಿಗಳು ಸೂಚಿಸಿದರು.
ಸಭೆಯಲ್ಲಿ ಜಿಯ ವಿವಿಧೆಡೆ ನಡೆದಿರಬಹುದಾದ ದಲಿತರ ಮೇಲಿನ ಪ್ರಕರಣಗಳು, ಸೌಲಭ್ಯಗಳ ಕುರಿತು ಸುದೀರ್ಘ ಚರ್ಚಿಸಲಾಯಿತು. ಜಿಪಂ ಸಿಇಒ ಸ್ನೇಹಲ್ ಸುಧಾಕರ್ ಲೋಖಂಡೆ, ಎಸ್‌ಪಿ ಮಿಥುನ್‌ಕುಮಾರ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.