ಜಿಲ್ಲಾ ಸುದ್ದಿತಾಜಾ ಸುದ್ದಿ

ತಮಿಳುನಾಡಿಗೆ ಕಾವೇರಿ ನೀರು ಹರಿಸದಂತೆ ಆಗ್ರಹಿಸಿ ರಸ್ತೆ ತಡೆ …

Share Below Link

ಶಿವಮೊಗ್ಗ: ತಮಿಳುನಾಡಿಗೆ ಕಾವೇರಿ ನದಿ ನೀರು ಬಿಡಬಾರದು ಎಂದು ಆಗ್ರಹಿಸಿ ಕರ್ನಾಟಕ ನಾಡು ರಕ್ಷಣಾ ವೇದಿಕೆ ಕಾರ್ಯ ಕರ್ತರು ಇಂದು ರಸ್ತೆ ತಡೆ ಮೂಲಕ ಪ್ರತಿಭಟನೆ ನಡೆಸಿದರು.
ಕಾವೇರಿ ನೀರು ಹಂಚಿಕೆ ವಿಷ ಯದಲ್ಲಿ ರಾಜ್ಯಕ್ಕೆ ಯಾವಾಗಲೂ ಅನ್ಯಾಯವಾಗುತ್ತಿದೆ. ಮಳೆಗಾಲ ವಾದರೆ ತೊಂದರೆಯಿಲ್ಲ. ಆದರೆ ರಾಜ್ಯದಲ್ಲಿ ಈ ಬಾರಿ ಭೀಕರ ಬರಗಾಲವಿದೆ. ನದೀಪಾತ್ರದಲ್ಲಿ ನೀರೇ ಇಲ್ಲ. ಕುಡಿಯುವ ನೀರಿ ಗೂ ಹಾಹಾಕಾರವಾಗಿದೆ. ಇಂತಹ ಸಂಕಷ್ಟದ ಸಂದರ್ಭದಲ್ಲಿ ತಮಿಳು ನಾಡಿಗೆ ಪ್ರತಿದಿನ ೫ ಸಾವಿರ ಕ್ಯೂಸೆ ಕ್ ನೀರು ಬಿಡುವಂತೆ ಸುಪ್ರೀಂ ಕೋರ್ಟ್ ತೀರ್ಪು ನೀಡಿರುವುದು ವಿಷಾದನೀಯ ಎಂದು ಪ್ರತಿಭಟನಾಕಾರರು ತಿಳಿಸಿದರು.
ರಾಜ್ಯ ಸರ್ಕಾರ ಸುಪ್ರೀಂ ಕೋರ್ಟಿಗೆ ಪರಿಸ್ಥಿತಿಯನ್ನು ಮನವರಿಕೆ ಮಾಡಿಕೊಡುವಲ್ಲಿ ವಿಫಲವಾಗಿದೆ. ತಮಿಳುನಾಡು ಕೇಳುತ್ತಿರುವುದು ಕೃಷಿ ಚಟುವಟಿ ಕೆಗೆ. ಆದರೆ ಇಲ್ಲಿ ಕುಡಿಯಲು ನೀರೇ ಇಲ್ಲ. ಕೂಡಲೇ ತಮಿಳು ನಾಡಿಗೆ ಬಿಡುತ್ತಿರುವ ನೀರನ್ನು ಸ್ಥಗಿತಗೊಳಿಸಬೇಕು. ಸುಪ್ರೀಂ ಕೋರ್ಟಿಗೆ ಮೇಲ್ಮನವಿ ಸಲ್ಲಿಸಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.
ಈ ಸಂದರ್ಭದಲ್ಲಿ ಸಂಸ್ಥಾಪಕ ರಾಜಧ್ಯಕ್ಷ ಪ್ರಸನ್ನ ಗೌಡ್ರು, ಜಿಲ್ಲಾಧ್ಯಕ್ಷ ಎಸ್.ಎಂ. ದಿನೇಶ್, ಪ್ರಧಾನ ಕಾರ್ಯದರ್ಶಿ ಸಂಕೇತ್ ಎನ್. ಶೇಟ್ ಸೇರಿದಂತೆ ಹಲವರಿ ದ್ದರು.