ಶಿಸ್ತಿನ ಜೀವನ ರೂಪಿಸಿಕೊಳ್ಳುವಲ್ಲಿ ಸ್ಕೌಟ್ ಗೈಡ್ಸ್ ಸಹಕಾರಿ…
ಶಿವಮೊಗ್ಗ : ಮಕ್ಕಳಲ್ಲಿ ಪ್ರಾಮಾಣಿಕತೆ, ಸೇವಾ ಮನೋಭಾವನೆ ಹಾಗೂ ಶಿಸ್ತಿನ ಜೀವನಶೈಲಿ ರೂಪಿಸುವಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಸಹಕಾರಿಯಾಗುತ್ತದೆ ಎಂದು ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಚಂದ್ರಪ್ಪ ಗುಂಡಪಲ್ಲಿ ಹೇಳಿದರು.

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿ ಸಂಸ್ಥೆಯಿಂದ ಪದವಿಪೂರ್ವ ರೋವರ್ ರೇಂಜರ್ಸ್ ಮಕ್ಕಳಿಗೆ ಹಮ್ಮಿಕೊಳ್ಳಲಾದ ಮೂರು ದಿನಗಳ ನಿಪುಣ ಪರೀಕ್ಷಾ ಶಿಬಿರ ಸಮಾರೋಪದಲ್ಲಿ ಪ್ರಮಾಣ ಪತ್ರ ವಿತರಿಸಿ ಮಾತನಾಡಿ, ಉತ್ತಮ ವ್ಯಕ್ತಿತ್ವ ಬೆಳೆಸುವಲ್ಲಿ ಸ್ಕೌಟ್ಸ್ ಅಂಡ್ ಗೈಡ್ಸ್ ಪಾತ್ರ ಪ್ರಮುಖವಾಗಿದೆ ಎಂದು ತಿಳಿಸಿದರು.
ಸಾಮಾಜಿಕ ಜಲತಾಣದಿಂದ ಮಕ್ಕಳ ಮನಸ್ಸು ಕಲುಷಿತವಾಗಿದ್ದು, ಸ್ವಂತ ಬುದ್ಧಿವಂತಿಕೆ ಕಡಿಮೆ ಯಾಗಿದೆ. ಮೊಬೈಲ್ ಹಾವಳಿ ಯಿಂದ ಮಕ್ಕಳು ದೈಹಿಕ ಚಟುವಟಿಕೆಗಳಿಂದ ದೂರ ಸರಿಯುತ್ತಿzರೆ. ಆದ್ದರಿಂದ ಇಂತಹ ಸ್ಕೌಟ್ಸ್ ಅಂಡ್ ಗೈಡ್ಸ್ ಚಳುವಳಿಯಲ್ಲಿ ಮಕ್ಕಳು ತೊಡಗಿ ಕೊಳ್ಳುವುದರಿಂದ ಸೃಜನಶೀಲರಾ ಗುತ್ತಾರೆ. ಆತ್ಮವಿಶ್ವಾಸ ಸಹ ವೃದ್ಧಿಯಾಗುತ್ತದೆ. ಸಾಮಾಜಿಕ ಜವಾಬ್ದಾರಿಯೂ ಕೂಡ ವೃದ್ಧಿಸುತ್ತದೆ ಎಂದರು.
ಪ್ರಾಂಶುಪಾಲರ ಸಂಘದ ಅಧ್ಯಕ್ಷ ಕಾಚಿನಕಟ್ಟೆಯ ಪಂಡರಿನಾಥ್ ಮಾತನಾಡಿ, ಸ್ಕೌಟ್ಸ್ ಅಂಡ್ ಗೈಡ್ಸ್ ಪ್ರಪಂಚಾದ್ಯಂತ ಮಕ್ಕಳಲ್ಲಿ ಜೀವನದ ಕಲೆ, ವ್ಯಕ್ತಿತ್ವ ನಿರ್ಮಾಣ ಹಾಗೂ ಸಕಾರಾತ್ಮಕ ಭಾವನೆಗಳನ್ನು ಮೂಡಿಸುತ್ತಿದೆ ಎಂದರು.
ಅಧ್ಯಕ್ಷತೆ ವಹಿಸಿದ್ದ ಸ್ಕೌಟ್ಸ್ ಮತ್ತು ಗೈಡ್ಸ್ ಜಿ ಪ್ರಧಾನ ಆಯುಕ್ತೆ ಶಕುಂತಲಾ ಚಂದ್ರಶೇಖರ್ ಮಾತನಾಡಿ, ಈ ತರಬೇತಿ ಪಡೆದ ನಂತರ ಮಕ್ಕಳು ರಾಜ್ಯ ಪುರಸ್ಕಾರ ಪರೀಕ್ಷೆಯಲ್ಲಿ ಭಾಗವಹಿಸಲು ಅರ್ಹತೆ ಪಡೆಯು ತ್ತಾರೆ. ಇಂತಹ ಪರೀಕ್ಷೆಗಳನ್ನು ಸದಪಯೋಗಪಡಿಸಿಕೊಳ್ಳಬೇಕು ಎಂದು ತಿಳಿಸಿದರು.

